ಭದ್ರಾವತಿ ಹೊಸಸೇತುವೆ ಮುಳುಗಡೆಗೆ ಕೆಲವೇ ಅಡಿ ಬಾಕಿ

By Kannadaprabha News  |  First Published Sep 7, 2019, 9:55 AM IST

ಭದ್ರಾ ಜಲಾಶಯದಿಂದ ಸುಮಾರು 28 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರು ನದಿಗೆ ಹರಿ ಬಿಡಲಾಗಿದೆ. ಇದರಿಂದ ಹಳೇ ಸೇತುವೆ ಸಮೀಪ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ದೇವಸ್ಥಾನ ಸಂಪೂರ್ಣ ಮುಳುಗಡೆಗೊಂಡಿತ್ತು. ಈ ಹಿನ್ನೆಲೆಯಲ್ಲಿ ಹೊಸಸೇತುವೆ ಕೂಡ ಮುಳುಗಡೆಯಾಗುವ ಲಕ್ಷಣ ಕಂಡು ಬಂದಿದೆ.


ಶಿವಮೊಗ್ಗ(ಸೆ.07): ಭದ್ರಾ ಜಲಾಶಯದಿಂದ ಶುಕ್ರವಾರ ಸುಮಾರು 25 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರು ನದಿಗೆ ಹರಿ ಬಿಡಲಾಗಿದ್ದು, ನಗರದ ಹೃದಯ ಭಾಗದಲ್ಲಿರುವ ಹೊಸ ಸೇತುವೆ ಮುಳುಗಡೆಗೆ ಕೆಲವೇ ಅಡಿಗಳು ಮಾತ್ರ ಬಾಕಿ ಉಳಿದಿದೆ.

ಗುರುವಾರ ಜಲಾಶಯದಿಂದ ಸುಮಾರು 28 ಸಾವಿರ ಕ್ಯೂಸೆಕ್‌ ಹೆಚ್ಚುವರಿ ನೀರು ನದಿಗೆ ಹರಿ ಬಿಡಲಾಗಿದೆ. ಇದರಿಂದ ಹಳೇ ಸೇತುವೆ ಸಮೀಪ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ದೇವಸ್ಥಾನ ಸಂಪೂರ್ಣ ಮುಳುಗಡೆಗೊಂಡಿತ್ತು. ಈ ಹಿನ್ನೆಲೆಯಲ್ಲಿ ಹೊಸಸೇತುವೆ ಕೂಡ ಮುಳುಗಡೆಯಾಗುವ ಲಕ್ಷಣ ಕಂಡು ಬಂದಿದೆ.

Tap to resize

Latest Videos

ಶಿವಮೊಗ್ಗ: ಆರ್ಥಿಕ ಹಿಂಜರಿತಕ್ಕೆ ಗಾರ್ಮೆಂಟ್‌ ಉದ್ಯಮ ಕಂಪನ

ತಾಲೂಕು ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಹೊಸಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲು ಮುಂದಾಗಿತ್ತು. ಆದರೆ ನೀರಿನ ಪ್ರಮಾಣ ಕಡಿಮೆಯಾದ ಕಾರಣ ಸಂಚಾರ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಘಟ್ಟಪ್ರದೇಶದಲ್ಲಿ ಮುಂದುವರಿದ ಜಡಿ ಮಳೆ, ಭೋರ್ಗರೆಯುತ್ತಿದೆ ಜೋಗ..!

ಸುದ್ದಿಗಾರರೊಂದಿಗೆ ಮಾತನಾಡಿದ ತಹಸೀಲ್ದಾರ್‌ ಸೋಮಶೇಖರ್‌, ಶುಕ್ರವಾರ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟಿರುವ ಬಗ್ಗೆ ತಾಲೂಕು ಆಡಳಿತಕ್ಕೆ ಮಾಹಿತಿ ಬಂದಿಲ್ಲ. ಆದರೆ ಗುರುವಾರ 28 ಸಾವಿರ ಕ್ಯೂಸೆಕ್‌ ನೀರು ಹೊರಬಿಡಲಾಗಿತ್ತು. ಶುಕ್ರವಾರ ಈ ನೀರಿನ ಪ್ರಮಾಣ 25 ಸಾವಿರ ಕ್ಯೂಸೆಕ್‌ಗೆ ಇಳಿಮುಖವಾಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಪ್ರವಾಹ ಭೀತಿ ಉಂಟಾಗಿಲ್ಲ. ಒಂದು ವೇಳೆ ಪ್ರವಾಹ ಭೀತಿ ಎದುರಾದಲ್ಲಿ ಅಗತ್ಯ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದರು.

click me!