ರಾಜ್ಯದ ಹಲವೆಡೆ ಮೊಬೈಲ್ಗಳನ್ನು ಕದ್ದು ತಂದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಭದ್ರವತಿ ಪೊಲೀಸರು ಬಂಧಿಸಿದ್ದಾರೆ. ಕಳ್ಳನಿಂದ 2 ಲಕ್ಷ ರುಪಾಯಿ ಮೌಲ್ಯದ ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
ಭದ್ರಾವತಿ(ಮೇ.05): ಕಳವು ಮಾಡಿದ ಮೊಬೈಲ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಭಾನುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್ ಶಫೀಕ್(30) ಎಂಬಾತನನ್ನು ಬಂಧಿಸಲಾಗಿದೆ. ಈತ ರಾಜ್ಯದ ಹಲವೆಡೆ ಮೊಬೈಲ್ಗಳನ್ನು ಕದ್ದು ತಂದು ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ. ಈ ಸಂಬಂಧ ಈತನ ಪತ್ತೆಗಾಗಿ ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯಕ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಬಂಧಿತನಿಂದ ವಿವಿಧ ಕಂಪನಿಗಳ ಒಟ್ಟು 2,08,000 ರು. ಮೌಲ್ಯದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಶಿವಮೊಗ್ಗದಲ್ಲಿ ಮದ್ಯ ಖರೀದಿಗೆ ನೀರಸ ಪ್ರತಿಕ್ರಿಯೆ..!
ಗ್ರಾಮಾಂತರ ವೃತ್ತ ನಿರೀಕ್ಷಕ ಈ.ಓ ಮಂಜುನಾಥ್ ನೇತೃತ್ವದ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ದೇವರಾಜ, ಸಿಬ್ಬಂದಿ ಎಂ. ನಾಗರಾಜ್, ಆದರ್ಶ ಶೆಟ್ಟಿ, ಹನುಮಂತ ಆವಟಿ ಅವರನ್ನೊಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಕಾರ್ಯಾಚರಣೆ ತಂಡವನ್ನು ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಹೆಚ್ಚುವರಿ ರಕ್ಷಣಾಧಿಕಾರಿ ಅಭಿನಂದಿಸಿದ್ದಾರೆ.