ಭಗವದ್ಗೀತೆ ಒಂದು ವಿಶೇಷವಾದ ಶ್ರೇಷ್ಠ ಗ್ರಂಥ. ಅದರಲ್ಲಿ ಉಲ್ಲೇಖಿತವಾಗಿರುವ ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ವಿಚಾರಧಾರೆಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತ.
ಚಿಕ್ಕಬಳ್ಳಾಪುರ (ಸೆ.07): ಭಗವದ್ಗೀತೆ ಒಂದು ವಿಶೇಷವಾದ ಶ್ರೇಷ್ಠ ಗ್ರಂಥ. ಅದರಲ್ಲಿ ಉಲ್ಲೇಖಿತವಾಗಿರುವ ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ವಿಚಾರಧಾರೆಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತ. ಅಂತಹ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಈ ದೇಶವನ್ನು ಸದೃಢಧೃಡವಾಗಿ ಕಟ್ಟಬೇಕು ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಾದವ ಕ್ಷೇಮಾಭಿವೃದ್ಧಿ ಸಂಘ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ಧ ‘ಶ್ರೀ ಕೃಷ್ಣ ಜಯಂತಿ’ ಉದ್ಘಾಟಿಸಿ, ಮಾತನಾಡಿ, ಭಗವದ್ಗೀತೆಯಲ್ಲಿ ಶ್ರೀ ಕೃಷ್ಣನು ಹೇಳಿದ ಎಲ್ಲ ವಿಚಾರಗಳೆಲ್ಲವೂ ಇಂದಿಗೂ ಜೀವನದಲ್ಲಿ ಅನುಸರಿಸಬಹುದಾಗಿದೆ. ಅವು ಜೀವನದ ವಿವಿಧ ಆಯಾಮಗಳನ್ನು ಪ್ರಕಟಿಸುತ್ತವೆ ಎಂದರು.
ಯಾದವ ಸಮುದಾಯ ಭವನ: ಜಿಲ್ಲಾ ಕೇಂದ್ರದಲ್ಲಿ ಯಾದವ ಶ್ರೀ ಕೃಷ್ಣ ಸಮುದಾಯ ಭವನ ನಿರ್ಮಾಣಕ್ಕೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಸರ್ಕಾರಿ ಜಾಗ ಕೊಟ್ಟು ನಿರ್ಮಿಸಬೇಕೇ ಅಥವಾ ತಮ್ಮ ಸಮುದಾಯದ ಸಂಘದ ಮುಖಾಂತರ ಅನುಷ್ಠಾನಗೊಳಿಸಬೇಕೇ ಎಂಬುದನ್ನು ಸಮುದಾಯದವರು ನಿರ್ಧರಿಸಿ ಮನವಿ ಸಲ್ಲಿಸಿದರೆ ಆ ಪ್ರಕಾರ ಪರಿಶೀಲಿಸಿ ಜಿಲ್ಲಾಡಳಿತ ಕ್ರಮ ಕೈಗೊಳ್ಳತ್ತದೆ. ಶ್ರೀ ಕೃಷ್ಣನ ಜಯಂತಿಗೆ ಸರ್ಕಾರಿ ರಜೆ ನೀಡುವ ಬಗ್ಗೆ ಸಮುದಾಯದ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಕೋಲಾರ ಭಾಗದ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ 500 ಕೋಟಿ: ಸಂಸದ ಮುನಿಸ್ವಾಮಿ
ಯಾದವರು ಶಿಕ್ಷಣಕ್ಕೆ ಒತ್ತು ನೀಡಲಿ: ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಭಾರತದ ಜನಸಂಖ್ಯೆಯಲ್ಲಿ ಶೇ.20 ರಷ್ಟು ಯಾದವ ಸಮುದಾಯದವರೆ ಇದ್ದಾರೆ. ಯಾವುದೇ ಸಮುದಾಯದವರು ಉನ್ನತ ಶಿಕ್ಷಣವನ್ನು ಪಡೆಯುವರಿಂದ ಉನ್ನತ ಸ್ಥಾನಕ್ಕೆರಲು ಸಾಧ್ಯ. ಇತಿಹಾಸವನ್ನು ನೋಡಿದರೆ ರಾಜಕೀಯವಾಗಿ ಯಾದವ ಸಮುದಾಯದವರೆ ಹೆಚ್ಚು ಪ್ರಬಲವಾಗಿ ಆಡಳಿತವನ್ನು ನಡೆಸಿದ್ದಾರೆ. ಯಾದವ ಸಮುದಾಯದವರ ಮನವಿಗಳನ್ನು ಪರಿಶೀಲಿಸಿ ಕ್ರಮವಹಿಸುವುದಾಗಿ ಅವರು ತಿಳಿಸಿದರು
ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪಿ.ಎನ್.ನರಸಿಂಹರೆಡ್ಡಿ ಅವರು ಶ್ರೀಕಷ್ಣ ಜಯಂತಿ ಬಗ್ಗೆ ಉಪನ್ಯಾಸ ನೀಡಿದರು. ಎಸ್,ಎಸ್,ಎಲ್,ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ಕೆ.ಎಂ.ರೆಡ್ಡಪ್ಪನವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಂತರ ಹೂವಿನ ಪಲ್ಲಕ್ಕಿ ಹಾಗೂ ಜಾನಪದ ಕಲಾ ತಂಡಗಳೊಂದಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು.
18 ಸಾವಿರ ವಿದ್ಯಾರ್ಥಿಗಳಿಗೆ ಗಣೇಶ ಹಬ್ಬಕ್ಕೆ ಬಟ್ಟೆಗಳನ್ನು ನೀಡುತ್ತೇನೆ: ಶಾಸಕ ಪ್ರದೀಪ್ ಈಶ್ವರ್
ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ತಹಶೀಲ್ದಾರ್ ಅನೀಲ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಹಾಗೂ ಗುಡಿಬಂಡೆ ತಹಶೀಲ್ದಾರ್ ಎನ್.ಮನೀಷ್, ರಾಜ್ಯ ಯಾದವ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ದೇವಿಶೆಟ್ಟಹಳ್ಳಿ ಎಂ.ಗಂಗಾಧರ್, ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ವೆಂಕಟೇಶ್, ತಾಲ್ಲೂಕು ಅಧ್ಯಕ್ಷ ವಿ.ಮುನಿಕೃಷ್ಣಪ್ಪ, ಸಮುದಾಯದ ಮುಖಂಡರಾದ ಲಕ್ಷ್ಮಣ ಸ್ವಾಮಿ, ಬನ್ನಿಕುಪ್ಪೆ ಶ್ರೀನಿವಾಸ್, ಲಕ್ಷ್ಮೀ ನರಸಪ್ಪ, ಪ್ರಭಾಕರ್, ಸಮುದಾಯದ ಎಲ್ಲ ಪದಾಧಿಕಾರಿಗಳು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.