ಪ್ರಾಧ್ಯಾಪಕ ವೃತ್ತಿಯಿಂದ ಭಾಸ್ಕರ ಹೆಗಡೆ ನಿವೃತ್ತಿ, ನಾಳೆ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’

Published : Jan 30, 2026, 07:46 AM IST
bhaskara parva Ujire

ಸಾರಾಂಶ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ ಅವರ 33 ವರ್ಷಗಳ ಸೇವಾ ನಿವೃತ್ತಿಯ ಅಂಗವಾಗಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

ಉಜಿರೆ (ಜ.31): ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶನಿವಾರ ಬೆಳಗ್ಗೆ 10 ಗಂಟೆಗೆ, ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಸತೀಶ್ ಚಂದ್ರ ಎಸ್. ಅವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಕ್ಷ್ಯಚಿತ್ರದ ಬಿಡುಗಡೆಯನ್ನು ಕ್ಷೇಮವನ, ಬೆಂಗಳೂರು ಇದರ ಕಾರ್ಯ ನಿರ್ವಾಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಅವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ. ಪಿ ಅವರು ವಹಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ ಅವರು ಉಪಸ್ಥಿತರಿರಲಿದ್ದಾರೆ.

 

PREV
Read more Articles on
click me!

Recommended Stories

ಬಂಡೀಪುರ: ರಾತ್ರಿ ಸಂಚಾರ ನಡೆಸಲು ಸುರಂಗ ಮಾರ್ಗ?
ಬ್ಯಾನರ್ ಗಲಾಟೆ ಕೇಸ್‌: ಚಾರ್ಜ್ ಕೊಡದೆ ಪಟ್ಟು ಹಿಡಿದ ಡಿವೈಎಸ್‌ಪಿ? ಐಪಿಎಸ್ ಅಧಿಕಾರಿ ವರ್ಗಾವಣೆಯೇ ರದ್ದು!