Uttarakannada: ಐಆರ್‌ಬಿ ಕಂಪೆನಿಯ ವಿರುದ್ಧ ಭಟ್ಕಳ ಜನರ ಪ್ರತಿಭಟನೆ

By Suvarna NewsFirst Published Jan 6, 2023, 9:46 PM IST
Highlights

ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಬೈಪಾಸ್ ಹತ್ತಿರ ಅಂಡರ್ ಪಾಸ್ ನಿರ್ಮಾಣ ಮಾಡದೇ ರಸ್ತೆ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ಸ್ಥಳೀಯರು ಐ.ಆರ್.ಬಿ ಕಂಪೆನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ (ಜ.6): ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಬೈಪಾಸ್ ಹತ್ತಿರ ಅಂಡರ್ ಪಾಸ್ ನಿರ್ಮಾಣ ಮಾಡದೇ ರಸ್ತೆ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ಸ್ಥಳೀಯರು ಐ.ಆರ್.ಬಿ ಕಂಪೆನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಹಲವೆಡೆ ಅವೈಜ್ಞಾನಿಕ ಕಾಮಗಾರಿಯ ಕಾರಣ ಅನೇಕ ಅಪಘಾತಗಳಾಗುತ್ತಿವೆ. ಅವುಗಳನ್ನು ತಪ್ಪಿಸುವಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಮೂಡಭಟ್ಕಳ, ಮುಟ್ಟಳ್ಳಿ ಭಾಗದ ನಾಗರೀಕರು ಕಳೆದ 9 ವರ್ಷಗಳಿಂದ ಸರ್ಕಾರಕ್ಕೆ ಆಗ್ರಹಿಸಿದ್ದಾರೆ ಮತ್ತು ಮನವಿಯನ್ನು ನೀಡುತ್ತಾ ಬಂದಿದ್ದಾರೆ.

ಈ ಹಿನ್ನೆಲೆ‌ ಇಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಮೂಡಭಟ್ಕಳ, ಮುಟ್ಟಳ್ಳಿ ನಾಗರೀಕರ ಸಭೆಯಲ್ಲಿ ನಾಗರೀಕರು ಐ.ಆರ್.ಬಿ.‌ ವಿರುದ್ಧ ಗಂಭೀರ ಆರೋಪ ಮಾಡಿದರು. ಇದನ್ನು ಧಿಕ್ಕರಿಸಿ ಇದು ಬೆಳಗ್ಗೆ  ಐ.ಆರ್. ಬಿ‌. ಕಂಪೆನಿ ಸಿಬ್ಬಂದಿ ಪೊಲೀಸ್ ಬಂದೋಬಸ್ತ್ ಜತೆ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಮಾಡಲು ಮುಂದಾದಾಗ ಸ್ಥಳೀಯರು ಜಮಾಯಿಸಿ ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ರಸ್ತೆಗೆ ದೇವೇಗೌಡರ ಹೆಸರು: ಕೇಂದ್ರ ಸಚಿವ ಗಡ್ಕರಿ ಭೇಟಿಯಾಗಿ ಮನವಿ ಸಲ್ಲಿಸಿದ ಶರವಣ

ಭಟ್ಕಳ ತಹಶೀಲ್ದಾರ್ ಹಾಗೂ ಪಿ.ಐ ದಿವಾಕರ ಅವರು ಸಾರ್ವಜನಿಕರಿಗೆ ಮನವೊಲಿಸಿ ಕಾಮಗಾರಿ ಮುಂದುವರಿಸಲು ಪ್ರಯತ್ನಿಸಿದರು. ಆದರೆ, ಸ್ಥಳೀಯರು ಮಾತ್ರ ಅಂಡರ್ ಪಾಸ್ ನಿರ್ಮಾಣ ಮಾಡದೇ ನಾವು ಕಾಮಗಾರಿ ಮಾಡಲು ಬಿಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದ ಕಾರಣ ಕಾಮಗಾರಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನಾಳೆ ಮತ್ತೆ ಸಹಾಯ ಆಯುಕ್ತರ ಕಚೇರಿಯಲ್ಲಿ ಸಭೆ ಕರೆದು ಮುಂದಿನ ದಿನಗಳಲ್ಲಿ ಮಾಡಬಹುದಾದ ಕಾಮಗಾರಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

ಬೆಂಗ​ಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಬೈಕ್ ಆಟೋಗೆ ಪ್ರವೇಶವಿಲ್ಲ!

ಈ ಭಾಗದ 4 ಹಳ್ಳಿಯ ಜನರು ಈ ರಸ್ತೆಯಲ್ಲಿ ಓಡಾಡುವುದರಿಂದ ಅಪಘಾತ ಪ್ರಕರಣಗಳು ಸಂಭವಿಸು ಸಾಧ್ಯತೆ ಇರುತ್ತದೆ. ಈ ಕಾರಣದಿಂದ ಮಟ್ಟಳ್ಳಿ ಬೈಪಾಸ್ ಹತ್ತಿರ ಬೈಪಾಸ್ ನಿರ್ಮಾಣ ಅಗತ್ಯವಾಗಿದೆ.‌ ಅಂಡರ್ ಪಾಸ್ ನಿರ್ಮಾಣಕ್ಕೆ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಸ್ಥಳೀಯರು ಪಟ್ಟು‌ ಹಿಡಿದಿದ್ದಾರೆ.

click me!