
ಹಾವೇರಿ(ಜು.17): ರೈತರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆ(Bidadi Township project) ಮುಂದುವರಿಸಲು ರಾಜ್ಯ ಸರ್ಕಾರದ ಆಂತರಿಕ ಕಾರ್ಯಸೂಚಿ ಕಾರಣ. ರೈತರ ಫಲವತ್ತಾದ ಜಮೀನಿನ ಬದಲು ಸರ್ಕಾರದ ಜಮೀನಿನಲ್ಲೇ ಟೌನ್‌ಶಿಪ್ ನಿರ್ಮಿಸಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಡದಿ ಟೌನ್‌ಶಿಪ್ ಯೋಜನೆಯನ್ನು ಎಚ್.ಡಿ.ಕುಮಾರಸ್ವಾಮಿ ಪ್ರಾರಂಭಿಸಿದ್ದು, ಆ ನಂತರ ಯಡಿಯೂರಪ್ಪ ಅವರ ಅವಧಿಯಲ್ಲಿ ಈ ಬಗ್ಗೆ ಯಾವುದೇ ಪ್ರಗತಿಯಾಗಿಲ್ಲ ಎಂ ಸಿಎಂ ಡಿ.ಕೆ.ಶಿವಕುಮಾರ್(DK Shivakumar) ಹೇಳಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಅವರು ಇದನ್ನು ಪ್ರಾರಂಭಿಸಿದ್ದರೆ, ಡಿಕೆಶಿಗೆ ಈ ಯೋಜನೆ ಮೇಲೆ ಏಕಿಷ್ಟು ಪ್ರೀತಿ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಕಲಬುರಗಿ: ಮಳೆಗಾಗಿ ಪ್ರಾರ್ಥಿಸಿ ಮೂರು ದಿನದಲ್ಲಿ ಬರೋಬ್ಬರಿ 45 ಕಿ.ಮೀ ಉರುಳುಸೇವೆ ಮಾಡಿದ ಮಹಿಳೆ!
ಎಲ್ಲ ವಿಷಯಗಳಲ್ಲೂ ಕುಮಾರಸ್ವಾಮಿ ಅವರನ್ನು ಟೀಕಿಸುವ ಶಿವಕುಮಾರ್, ಈ ಟೌನ್‌ಶಿಪ್ ಯೋಜನೆಯಲ್ಲಿ ಮಾತ್ರ ಅವರನ್ನು ಏಕೆ ಅನುಸರಿಸುತ್ತಿದ್ದಾರೆ. ಟೌನ್‌ಶಿಪ್ ಯೋಜನೆಯಲ್ಲಿ ಡಿಕೆಶಿಗೆ ಹಿತಾಸಕ್ತಿ ಏನಿದೆ? ಈ ಕನಸಿನ ಹಿಂದೆ ಸಿಎಂಗೆ ಮತ್ತೊಂದು ಗುಪ್ತ ಕನಸಿದೆಯೇ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ಇದನ್ನೂ ಓದಿ: Yettinahole water: 10 ವರ್ಷಗಳ ಬಳಿಕ ಕೊನೆಗೂ ತುಮಕೂರಿಗೆ ಬಂತು ಎತ್ತಿನಹೊಳೆ ನೀರು!