ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಬೀದರ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ

By Sathish Kumar KH  |  First Published May 29, 2024, 6:26 PM IST

ಬೀದರ್‌ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಹಾಡು ಹಾಕಿ ಕುಣಿದಿದ್ದಕ್ಕೆ ಎರಡು ಕೋಮಿನ ಬವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.


ಬೀದರ್ (ಮೇ 29): ರಾಜ್ಯದಲ್ಲಿ ಹಿಂದೂ ಮುಸ್ಲಿಂ ಸಾಮರಸ್ಯ ಮನೋಭಾವಕ್ಕೆ ಧಕ್ಕೆ ಉಂಟಾದಂತಿದೆ. ಬೀದರ್‌ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಹಾಡು ಹಾಕಿ ಕುಣಿದಿದ್ದಕ್ಕೆ ಎರಡು ಕೋಮಿನ ಬವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.

ಹೌದು, ಬೀದರ್‌ನ ಬೀದರ್‌ನ ಜಿಎನ್‌ಡಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ. ಮೈಲೂರು ಕ್ರಾಸ್ ಬಳಿ ಇರುವ ಗುರುನಾನಕ ಇಂಜನೀಯರಿಂಗ್ ಕಾಲೇಜಿನಲ್ಲಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯೂಟ್ಯೂಬ್‌ನಲ್ಲಿ ಹಾಡನ್ನು ಹಾಕುವಾಗ ನೃತ್ಯಕ್ಕೆ ಅನುಕೂಲ ಆಗಲೆಂದು ಜೈ ಶ್ರೀರಾಮ್ ಡಿಜೆ ಹಾಡನ್ನು ಹಾಕಲಾಗಿದೆ. ಈ ವೇಳೆ ಬಹುತೇಕ ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ್ದಾರೆ. ಆದರೆ, ಅನ್ಯಕೋಮಿನ ವಿದ್ಯಾರ್ಥಿಗಳು ಜೈ ಶ್ರೀರಾಮಗ ಹಾಡು ಹಾಕಿದ ಕಾರಣಕ್ಕೆ ಗಲಾಟೆ ಆರಂಭಿಸಿದ್ದಾರೆ.

Tap to resize

Latest Videos

undefined

ಲವ್ ಜಿಹಾದ್‌ಗೆ ಸಿಲುಕಿದ ಹಿಂದೂ ಹೆಣ್ಣುಮಕ್ಕಳ ರಕ್ಷಣೆಗೆ ಸಹಾಯವಾಣಿ ಆರಂಭಿಸಿದ ಶ್ರೀರಾಮ ಸೇನೆ

ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಆರಂಭವಾಗಿದೆ ಎನ್ನಲಾದ ಗಲಾಟೆಯು ಇಂಜಿನಿಯರಿಂಗ್ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳ ನಡುವೆ ಜಗಳಕ್ಕೆ ಕಾರಣವಾಗಿದೆ. ಇದರಿಂದಾಗಿ ಕಾಲೇಜು ಸಭಾಂಗಣದಲ್ಲಿಯೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಾಡನ್ನು ಹಾಕುತ್ತಿದ್ದ ವಿರೇಂದ್ರ ಪಾಟೀಲ್ ಎಂಬ ವಿದ್ಯಾರ್ಥಿ ಮೇಲೆ ಅನ್ಯ ಕೋಮಿನ ಕೆಲ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಲಾಗಿದೆ. ಗಾಂಧಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌‌ ನಡೆದಿದೆ. ಸ್ಥಳಕ್ಕೆ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

click me!