ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಸೈಯದ್ ಜುಲ್ಫೇಕರ್ ಹಾಶ್ಮಿ (57) ಮಂಗಳವಾರ ಬೆಳಗಿನ ಜಾವ ನಿಧನರಾದರು.
ಬೀದರ್ (ಏ.21): ದಕ್ಷಿಣ ಭಾರತದಲ್ಲಿ ಬಿಎಸ್ಪಿಯಿಂದ ಆಯ್ಕೆಯಾಗಿದ್ದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಸೈಯದ್ ಜುಲ್ಫೇಕರ್ ಹಾಶ್ಮಿ (57) ಮಂಗಳವಾರ ಬೆಳಗಿನ ಜಾವ ನಿಧನರಾದರು.
ನಾಲ್ಕೈದು ತಿಂಗಳಿನಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಜುಲ್ಫೇಕರ್ ಅವರನ್ನು ಆರೋಗ್ಯ ಹದೆಗೆಟ್ಟಹಿನ್ನೆಲೆಯಲ್ಲಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
undefined
ಬಿಎಸ್ಪಿಗೆ ಬೀದರ್‌ನ ಪ್ರಮುಖರ ರಾಜಿನಾಮೆ ...
ಲ್ಫೇಕರ್ ಅವರು 1994ರಲ್ಲಿ ಬೀದರ್ ವಿಧಾನಸಭೆಯಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಬಿಎಸ್ಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಅವರು ನಂತರ ಜೆಡಿಎಸ್, ಬಳಿಕ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.
ಇದೀಗ ಅನಾರೋಗ್ಯದಿಂದ 57ನೇ ವಯಸ್ಸಿನಲ್ಲೇ ಕೊನೆಯುಸಿರೆಳೆದಿದ್ದಾರೆ.