Bidar: ಎಟಿಎಂಗೆ ಹಣ ಹಾಕಲು ಬಂದಾಗ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ವ್ಯಕ್ತಿ ಸಾವು!

By Santosh Naik  |  First Published Jan 16, 2025, 11:47 AM IST

ಬೀದರ್‌ನ ಎಸ್‌ಬಿಐ ಬ್ಯಾಂಕ್‌ ಮುಂದೆ ಎಟಿಎಂಗೆ ಹಣ ತುಂಬಲು ಬಂದ ಏಜೆನ್ಸಿ ಸಿಬ್ಬಂದಿ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ. ಓರ್ವ ಸಾವು, ಓರ್ವ ಗಾಯಗೊಂಡಿದ್ದು, ಲಕ್ಷಾಂತರ ರೂ. ದೋಚಿ ಪರಾರಿ.


ಬೀದರ್‌ (ಜ.16): ಬೆಳ್ಳಬೆಳಗ್ಗೆ ಬೀದರ್‌ನಲ್ಲಿ ಡೆಡ್ಲಿ ಅಟ್ಯಾಕ್‌ ನಡೆದಿದೆ. ಬೀದರ್‌ನ ಎಸ್‌ಬಿಐ ಬ್ಯಾಂಕ್‌ ಕಚೇರಿಯ ಮುಂದೆಯೇ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕಲು ಏಜೆನ್ಸಿಯ ಸಿಬ್ಬಂದಿಗಳು ವಾಹನದಲ್ಲಿ ಬಂದಿದ್ದಾಗ ಇಬ್ಬರು ದುಷ್ಕರ್ಮಿಗಳು ಬಂದು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಏಜೆನ್ಸಿಯ ಒಬ್ಬ ವ್ಯಕ್ತಿ ಸ್ಥಳದಲ್ಲಿಯೇ ಸಾವು ಕಂಡಿದ್ದರೆ, ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಆ ಬಳಿಕ ಉಳಿದ ಸಿಬ್ಬಂದಿ ಮೇಲೆ ಕಣ್ಣಿಗೆ ಖಾರದ‌ ಪುಡಿ ಎರಚಿ ಹಣವನ್ನು ಖದೀಮರು ಕದ್ದೊಯ್ದಿದ್ದಾರೆ. ಎಟಿಎಂಗೆ ಹಾಕಲು ಪಿಎಸ್‌ಸಿ ವಾಹನದಲ್ಲಿ ಲಕ್ಷಾಂತರ ರೂ. ಹಣ ತಂದಿದ್ದರು. ಬ್ಯಾಂಕ್ ಹಾಗೂ ಎಟಿಎಂಗೆ ಹಣ ಹಾಕುವ ವಾಹನದ ಸಿಬ್ಬಂದಿ ಮೇಲೆ ಗುಂಡಿನ ದಾಳಿಯಾಗಿದೆ. ಐದು ಸುತ್ತಿನ ಗುಂಡಿನ ದಾಳಿ ನಡೆದ ಬಳಿಕ ಹಣ ತೆಗೆದುಕೊಂಡು ಖದೀಮರು ಪರಾರಿಯಾಗಿದ್ದಾರೆ. ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುಂಡಿನ ದಾಳಿ ನಡೆದಿದ್ದು, ಬ್ಯಾಂಕ್‌ ಕಚೇರಿಯ ಮುಂದೆಯೇ ಮೃತದೇಹ ಬಿದ್ದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Breaking News: ಅಂಬೇಡ್ಕರ್ ಭಾವಚಿತ್ರ ತುಳಿದು ಅವಮಾನ; ನಾಲ್ವರು ಕಿಡಿಗೇಡಿಗಳು ಅರೆಸ್ಟ್

Tap to resize

Latest Videos

ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಎಸ್‌ಬಿಐ ಬ್ಯಾಂಕ್‌ನ ಎದುರು ಈ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕುವ ಪಿಸಿಎಸ್‌ ಏಜೆನ್ಸಿಯ ಸಿಬ್ಬಂದಿ ಬ್ಯಾಂಕ್‌ನ ಎದುರುಗಡೆ ಬಂದು ತಮ್ಮ ವಾಹನ ನಿಲ್ಲಿಸಿ, ಎಟಿಎಂ ಹಣ ತುಂಬಲು ವಾಹನದ ಡೋರ್‌ ತೆಗೆಯುತ್ತಿದ್ದಂತೆ ಅವರ ಮೇಲೆ ಐದು ಸುತ್ತು ಗುಂಡಿನ ದಾಳಿಯಾಗಿದೆ. ಈ ವೇಳೆ ಸಿಬ್ಬಂದಿಯ ಕಣ್ಣಿಗೆ ಖಾರದ ಪುಡಿಯನ್ನೂ ಎರಚಲಾಗಿದೆ. ದಾಳಿ ನಡೆದ ಬಳಿಕ ಹಣವಿದ್ದ ವಾಹನದೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಇನ್ನೊಬ್ಬ ಸಿಬ್ಬಂದಿಯ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ವರದಿಯಾಗಿದೆ.

ಸಚಿನ್ ಪಾಂಚಾಳ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ತನಿಖೆಗೆ ಮೊದಲೇ ಕ್ಲೀನ್ ಚಿಟ್ ಕೊಟ್ಟ ಸಚಿವ ಬೋಸರಾಜು!

(ಸುದ್ದಿ ಅಪ್‌ಡೇಟ್‌ ಆಗುತ್ತಿದೆ)

click me!