ಗಂಗಾವತಿ ಬಳಿ ಬೈಕ್, ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ದುರ್ಮರಣ

By Suvarna News  |  First Published Dec 11, 2019, 3:38 PM IST

ಬೈಕ್, ಬಸ್ ಡಿಕ್ಕಿ ಹೊಡೆದ ಪರಿಣಾಣ ಇಬ್ಬರ ಸಾವು ಗಂಗಾವತಿ ತಾಲೂಕಿನ ಶ್ರೀರಾಮನಗರ್ ಬಳಿ ನಡೆದ ಘಟನೆ| ಮೃತರು ಮೆಡಿಕಲ್ ರೆಪ್ರೆಸೆಂಟೇಟಿವ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು|
 


ಕೊಪ್ಪಳ(ಡಿ.11): ಬೈಕ್, ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ್ ಬಳಿ ಘಟನೆ ಇಂದು(ಬುಧವಾರ) ನಡೆದಿದೆ. 

ಮೃತರನ್ನು ಸತೀಶ್ (28) ಹಾಗೂ ಜಾಫರ್ (30) ಎಂದು ಗುರುತಿಸಲಾಗಿದೆ. ಸತೀಶ್ ಹಾಗೂ ಜಾಫರ್ ಇಬ್ಬರು ಮೆಡಿಕಲ್ ರೆಪ್ರೆಸೆಂಟೇಟಿವ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಸತೀಶ್ ಹಾಗೂ ಜಾಫರ್ ಇಬ್ಬರೂ ಒಂದೇ ಬೈಕ್‌ನಲ್ಲಿ ಗಂಗಾವತಿ ಇಂದ ಕಾರಟಗಿಗೆ ತೆರಳುತ್ತಿದ್ದ ವೇಳೆ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 

click me!