
ಬೆಂಗಳೂರು(ಫೆ.19): ಬೈಕ್‌ಗೆ ಕಾರು ಡಿಕ್ಕಿಯಾಗಿ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ದೇವನಹಳ್ಳಿ ನಿವಾಸಿ ಹರೀಶ್‌ಬಾಬು (32) ಮೃತಪಟ್ಟ ಸಾಫ್ಟ್‌ವೇರ್ ಎಂಜಿನಿಯರ್. ಅಪಘಾತ ಎಸಗಿದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಭಾನುವಾರ ಬೆಳಗ್ಗೆ 9.30ರ ಸುಮಾರಿಗೆ ಹರೀಶ್‌ಬಾಬು ಅವರು ಬೈಕ್‌ನಲ್ಲಿ ಬಿಬಿ ರಸ್ತೆಯ ಮಹೀಂದ್ರ ಶೋರೂಂ ಬಳಿಯ ಹುಣಸಮಾರನಹಳ್ಳಿ ಮೇಲ್ಸೇತುವೆ ಮೇಲೆ ಹೋಗುತ್ತಿದ್ದರು. ಹಿಂದಿನಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಕ್ಕೆ ಬಿದ್ದ ಹರೀಶ್ ಬಾಬು ಅವರ ಮೇಲೆ ಕಾರು ಹರಿದಿದೆ. ತಕ್ಷಣ ಸಾರ್ವಜನಿಕರು ಹರೀಶ್‌ಬಾಬು ಅವರನ್ನು ಯಲಹಂಕ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.