ಸಮಯ ಪ್ರಜ್ಞೆ ಮತ್ತು ಕರ್ತವ್ಯಪ್ರಜ್ಞೆ ಮೆರೆದ ಬಿಮ್ಸ್ ವೈದ್ಯರು| ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಶಕ್ತಿಮೀರಿ ಪ್ರಯತ್ನ| ಇಂತಹ ಸನ್ನಿವೇಶಗಳು ಎದುರಾದಾಗ ರೋಗಿಗಳ ಜೀವರಕ್ಷಣೆಗಾಗಿ ಪರಸ್ಪರ ಸಹಕಾರದಿಂದ ಕೆಲಸ: ಡಾ.ವಿನಯ ದಾಸ್ತಿಕೊಪ್ಪ|
ಬೆಳಗಾವಿ(ಮೇ.05): ಖಾಸಗಿ ಆಸ್ಪತ್ರೆಗಳ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಸೌಲಭ್ಯ ಕಡಿಮೆಯಾಗುತ್ತಿರುವುದನ್ನು ಅರಿತ ಬಿಮ್ಸ್ ವೈದ್ಯರು ತಕ್ಷಣವೇ ಆ ಆಸ್ಪತ್ರೆಗಳಿಗೆ ತೆರಳಿ ಎಲ್ಲ ರೋಗಿಗಳನ್ನು ಬಿಮ್ಸ್‌ಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮೂಲಕ ಸಮಯ ಪ್ರಜ್ಞೆ ಮತ್ತು ಕರ್ತವ್ಯಪ್ರಜ್ಞೆ ಮೆರೆದಿರುವ ಘಟನೆ ಸೋಮವಾರ ಮಧ್ಯರಾತ್ರಿ ನಡೆದಿದೆ.
ಈ ಕುರಿತು ಮಂಗಳವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ಅವರು, ಖಾಸಗಿ ಆಸ್ಪತ್ರೆಗಳ ಮನವಿಗೆ ತಕ್ಷಣವೇ ಸ್ಪಂದಿಸಿದ ಬಿಮ್ಸ್, ಆ ಆಸ್ಪತ್ರೆಗಳಲ್ಲಿದ್ದ ಎಲ್ಲ 21 ರೋಗಿಗಳನ್ನು ಬಿಮ್ಸ್‌ಗೆ ಸ್ಥಳಾಂತರಿಸಿಕೊಂಡು ಆಕ್ಸಿಜನ್ ಒದಗಿಸುವ ಜತೆಗೆ ಅಗತ್ಯ ಚಿಕಿತ್ಸೆಯನ್ನು ನೀಡುವ ಮೂಲಕ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ ಎಂದರು.
ನನ್ನ 3 ತಿಂಗಳ ಸಂಬಳ ಆಶಾ ಕಾರ್ಯಕರ್ತೆಯರಿಗೆ: ಶಾಸಕ ಗಣೇಶ್ ಹುಕ್ಕೇರಿ
ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಶಕ್ತಿಮೀರಿ ಪ್ರಯತ್ನಿಸುತ್ತಿವೆ. ಆದಾಗ್ಯೂ ಕೆಲವೊಮ್ಮೆ ಇಂತಹ ಸನ್ನಿವೇಶಗಳು ಎದುರಾದಾಗ ರೋಗಿಗಳ ಜೀವರಕ್ಷಣೆಗಾಗಿ ಪರಸ್ಪರ ಸಹಕಾರದಿಂದ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona