ವೈದ್ಯರ ಹಾಜರಾತಿ ಮೇಲೆ ನಿಗಾಕ್ಕೆ ಬಯೋಮೆಟ್ರಿಕ್‌: ಸಚಿವ ಸುಧಾಕರ್‌

By Govindaraj SFirst Published Oct 29, 2022, 11:51 PM IST
Highlights

ವೈದ್ಯರ ಹಾಜರಾತಿ ಮೇಲೆ ನಿಗಾ ಇಡಲು ಮತ್ತು ಖಾಸಗಿಯಾಗಿ ಕಾರ್ಯ ನಿರ್ವಹಿಸುವ ಸರ್ಕಾರಿ ವೈದ್ಯರಿಗೆ ಕಡಿವಾಣ ಹಾಕಲು ಬಯೋಮೆಟ್ರಿಕ್‌ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿಂತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. 

ಮೈಸೂರು (ಅ.29): ವೈದ್ಯರ ಹಾಜರಾತಿ ಮೇಲೆ ನಿಗಾ ಇಡಲು ಮತ್ತು ಖಾಸಗಿಯಾಗಿ ಕಾರ್ಯನಿರ್ವಹಿಸುವ ಸರ್ಕಾರಿ ವೈದ್ಯರಿಗೆ ಕಡಿವಾಣ ಹಾಕಲು ಬಯೋಮೆಟ್ರಿಕ್‌ ಪದ್ಧತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಚಿಂತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್‌ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು. ಇದಕ್ಕಾಗಿ ಬಯೋಮೆಟ್ರಿಕ್‌ ಪದ್ಧತಿ ಜಾರಿಗೆ ತರಲಾಗುವುದು. ಆಗ ಬೆಳಗ್ಗೆ, ಮಧಾಹ್ನ ಮತ್ತು ಸಂಜೆ ವೈದ್ಯರು ಬಯೋಮೆಟ್ರಿಕ್‌ ಮಾಡಬೇಕು ಎಂದರು.

ಕರ್ತವ್ಯ ಮುಗಿದ ವೈದ್ಯರಿಗೆ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಾಕ್ಟೀಸ್‌ ಮಾಡಲು ಅವಕಾಶ ಕಲ್ಪಿಸುತ್ತೇವೆ. ಅಲ್ಲದೆ ಜಿಯೋ ಟ್ಯಾಗ್‌ ನೀಡಲು ಚಿಂತಿಸಿದ್ದೇವೆ. ಅನೇಕರು ಕರ್ತವ್ಯದ ಬಳಿಕ ಮತ್ತೆ ಕೆಲವರು ಕರ್ತವ್ಯದ ವೇಳೆಗೆ ಖಾಸಗಿಯಾಗಿ ಅಭ್ಯಾಸ ಮಾಡುವುದು ಸರ್ಕಾರದ ಗಮನಕ್ಕೆ ಬಂದಿದೆ. ವೈದ್ಯರ ಕಾರ್ಯಕ್ಷಮತೆ ಹೆಚ್ಚಬೇಕಾದರೆ ವೈದ್ಯರು ಖಾಸಗಿಯಾಗಿ ಅಭ್ಯಾಸ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು ಎಂದು ಅವರು ತಿಳಿಸಿದರು. ಡಿಸೆಂಬರ್‌ ಅಂತ್ಯಕ್ಕೆ ಆಯುಷ್ಮಾನ್‌ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿ 4.80 ಕೋಟಿ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್‌ ನೀಡುವ ಗುರಿ ಇದೆ. 

Mysuru: ವರ್ಷಾಂತ್ಯಕ್ಕೆ 25 ಕೋಟಿ ರು. ವೆಚ್ಚದ ಸಾರ್ವಜನಿಕ ಆಸ್ಪತ್ರೆ ಕಾರ್ಯಾರಂಭ: ಸಚಿವ ಸುಧಾಕರ್‌

ಗ್ರಾಮ ಒನ್‌ ಕೇಂದ್ರಗಳ ಮೂಲಕ ವಿತರಿಸುವ ಗುರಿ ಹೊಂದಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು 2030ರೊಳಗೆ ಭಾರತವನ್ನು ಕ್ಷಯ ಮುಕ್ತ ಭಾರತ ಅಭಿಯಾನ ಹಮ್ಮಿಕೊಂಡಿದ್ದಾರೆ. ಕರ್ನಾಟಕದಲ್ಲಿ 2025ಕ್ಕೆ ಕ್ಷಯ ನಿರ್ಮೂಲನೆ ಮಾಡುವ ಗುರಿ ಹೊಂದಿರುವುದಾಗಿ ಅವರು ತಿಳಿಸಿದರು. ಅರೆ ವೈದ್ಯಕೀಯ ಕೋರ್ಸ್‌ಗಳಾದ ಕ್ರಿಟಿಕಲ್‌ ಕೇರ್‌ ಹಾಗೂ ಡಯಾಲಿಸಿಸ್‌ ಟೆಕ್ನಿಷಿಯನ್‌ ಕೋರ್ಸ್‌ಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಾರಂಭಿಸಲಾಗುವುದು. ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಸಂಶೋಧನೆ ಹಾಗೂ ಅಂತಾರಾಷ್ಟ್ರೀಯ ಪ್ರಕಟಣೆಗಳಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಡಯಾಲಿಸಿಸ್‌ ಸೇವೆಯನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಾರಂಭಿಸುವ ಕುರಿತು ಸೂಕ್ತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸುವಂತೆ ಸಂಬಂಧಿಸಿದ ಕಾಲೇಜುಗಳ ನಿರ್ದೇಶಕರಿಗೆ ಸೂಚಿಸಲಾಗಿದೆ. ಬಡತನ, ಅರಿವಿನ ಕೊರತೆಯಿಂದ ಮಕ್ಕಳಲ್ಲಿ ಅನಿಮೀಯ ಕಂಡು ಬರುತ್ತಿದೆ. ಅನೀಮಿಯ ನಿಯಂತ್ರಣಕ್ಕೆ ಆಂದೋಲನ ರೂಪಿಸಿದ್ದೇವೆ. ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸಲಿದ್ದೇವೆ. ಶಾಲೆಗಳಲ್ಲಿ ಶಿಬಿರ ಏರ್ಪಡಿಸುತ್ತೇವೆ. ಮಕ್ಕಳ ಸರ್ವಾಂಗೀಣ ಆರೋಗ್ಯ ಬೆಳವಣಿಗೆ ಕ್ರಮವಹಿಸುತ್ತೇವೆ ಎಂದರು. 

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಜಾರಿಯಲ್ಲಿರುವ ಟೆಲಿ ಸಮಾಲೋಚನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕುರಿತು ಗಂಭೀರ ಚಿಂತನೆ ಮಾಡಿದ್ದೇವೆ. ವೈದ್ಯಕೀಯ ಕಾಲೇಜುಗಳ ಎಲ್ಲ ವಿಭಾಗದ ಮುಖ್ಯಸ್ಥರೊಂದಿಗೆ ಪ್ರತಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸುವಂತೆ ತಿಳಿಸಲಾಗಿದೆ ಎಂದರು. ಆರೋಗ್ಯ ಇಲಾಖೆ ನಿರ್ದೇಶಕಿ ಡಾ. ಇಂದುಮತಿ, ವಿಭಾಗೀಯ ಜಂಟಿ ನಿರ್ದೇಶಕಿ ಡಾ. ರಾಜೇಶ್ವರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್‌. ಪ್ರಸಾದ್‌ ಇದ್ದರು.

ಸಿದ್ದು, ಡಿಕೆಶಿ ಸದಾ ಉತ್ತರ-ದಕ್ಷಿಣ ಧ್ರುವ: ಸಚಿವ ಸುಧಾಕರ್‌ ವ್ಯಂಗ್ಯ

ಮೈಸೂರು ಜಿಲ್ಲೆಯಲ್ಲಿ ಜನವರಿಯಿಂದ 680 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಒಬ್ಬ ರೋಗಿಯೂ ಮೃತಪಟ್ಟಿಲ್ಲ. ಮಳೆ ಬಂದಾಗ ಪ್ರಕರಣಗಳು ಹೆಚ್ಚಿದೆ. ಗ್ರಾಮಾಂತರ ಮತ್ತು ನಗರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದೇವೆ.
-ಡಾ.ಕೆ.ಎಚ್‌.ಪ್ರಸಾದ್‌, ಡಿಎಚ್‌ಒ

click me!