ಕೇರಳದಿಂದ ಬಂದ 1 ಕೋಳಿಯಿಂದ ಮಂಡ್ಯದಲ್ಲಿ ಹಕ್ಕಿಜ್ವರ

By Suvarna NewsFirst Published Mar 19, 2020, 2:57 PM IST
Highlights

ಕೇರಳದಿಂದ ಬಂದ ಒಂದು ಕೋಳಿಯಿಂದ ಹಕ್ಕಿ ಜ್ವರ ಪತ್ತೆಯಾಗಿ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದ್ದು, ಮಂಡ್ಯದಲ್ಲಿ ಕೋಳಿ ಮಾರಾಟ ನಿಷೇಧಿಸಲಾಗಿದೆ.

ಮಂಡ್ಯ(ಮಾ.19): ಕೇರಳದಿಂದ ಬಂದ ಒಂದು ಕೋಳಿಯಿಂದ ಹಕ್ಕಿ ಜ್ವರ ಪತ್ತೆಯಾಗಿ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದ್ದು, ಮಂಡ್ಯದಲ್ಲಿ ಕೋಳಿ ಮಾರಾಟ ನಿಷೇಧಿಸಲಾಗಿದೆ.

ಮಂಡ್ಯ ಜಿಲ್ಲೆಯಾದ್ಯಂತ ಕೋಳಿ ಮಾರಾಟ ನಿಷೇಧ ಮಾಡಲಾಗಿದ್ದು, ಮೈಸೂರಿನಲ್ಲಿ ಹಕ್ಕಿ ಜ್ವರ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಕೋಳಿ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಕೊರೋನಾ ಕನ್ಫರ್ಮ್ ಕೇಸ್: ಮಡಿಕೇರಿಯಲ್ಲಿ ಹೆಲ್ತ್ ಎಮರ್ಜೆನ್ಸಿ

ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಕೇರಳದಿಂದ ಬಂದ 1 ಕೋಳಿಯಿಂದ ಹಕ್ಕಿ ಜ್ವರ ಪತ್ತೆಯಾಗಿ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದೆ. 
ಮುಂಜಾಗ್ರತಾ ಕ್ರಮವಾಗಿ 3 ದಿನಗಳಿಂದ ಶ್ರೀರಂಗಪಟ್ಟಣದಲ್ಲಿ ಕೋಳಿಗಳ ಸಾಗಣೆಗೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ಜಿಲ್ಲಾದ್ಯಂತ ಕಟ್ಟುನಿಟ್ಟಾಗಿ ಕೋಳಿ ಮಾರಾಟ ನಿರ್ಬಂಧಿಸಲಾಗಿದೆ.

ಕೊಕ್ಕರೆ ಬೆಳ್ಳೂರಿನಲ್ಲಿರುವ ಪಕ್ಷಿಗಳಲ್ಲಿ ಹಕ್ಕಿ ಜ್ವರದ ಬಗ್ಗೆ ಪಶುಸಂಗೋಪನೆ ಅಧಿಕಾರಿಯೊಂದಿಗೆ ಚರ್ಚಿಸಲಾಗಿದೆ. ಅಲ್ಲಿ ಹಕ್ಕಿ ಜ್ವರದ ಲಕ್ಷಣ ಕಂಡುಬಂದಿಲ್ಲ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಸುತ್ತಮುತ್ತಲಿನ ಕೋಳಿಗಳ ಮೇಲೆ ನಿಗಾ ಇಡಲಿಕ್ಕೆ ಕ್ರಮ ವಹಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ 40 ಡಿಗ್ರಿ ದಾಟಲಿದೆ ತಾಪಮಾನ..! ಇನ್ನೆರಡು ದಿನ ಕೆಲವೆಡೆ ಮಳೆ

ಮಂಡ್ಯದಲ್ಲಿ ಹಕ್ಕಿ ಜ್ವರದ ಭೀತಿ ಇಲ್ಲ. ಮುಂದಿನ ಎರಡು ವಾರ ಬಹಳ ಜಾಗರೂಕತೆಯಿಂದ ಇರಬೇಕು. ಎಲ್ಲರೂ ಸಹಕರಿಸಿ, ಮಂಡ್ಯ ಸಂರಕ್ಷಿಸಿ ಎಂದು ಡಿಸಿ ಮನವಿ ಮಾಡಿದ್ದಾರೆ.

click me!