ನೂರಾರು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ

Kannadaprabha News   | Asianet News
Published : Aug 09, 2021, 02:30 PM ISTUpdated : Aug 09, 2021, 02:32 PM IST
ನೂರಾರು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ

ಸಾರಾಂಶ

*  ಕಾಂಗ್ರೆಸ್‌ ಸೇರ್ಪಡೆಯಾದ ನೂರಾರು ಮಹಿಳೆಯರು *  ಹತ್ತು ಹಲವು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿರುವ ಕಾಂಗ್ರೆಸ್‌  *  ಸತೀಶ್‌ ಜಾರಕಿಹೊಳಿ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ   

ಗೋಕಾಕ(ಆ.09): ಬಿಜೆಪಿಯ ಜನ ವಿರೋಧಿ ನೀತಿ ಮತ್ತು ಸರ್ಕಾರದ ತಾರತಮ್ಯ ಧೋರಣೆ ಧಿಕ್ಕರಿಸಿ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ನೂರಾರು ಮಹಿಳೆಯರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು.

ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಅವರನ್ನು ಭೇಟಿ ಮಾಡಿ, ಪ್ರಸ್ತುತ ಬಿಜೆಪಿ ಮತ್ತು ಸರ್ಕಾರದ ವೈಫಲ್ಯ ಹಾಗೂ ಧೋರಣೆಗಳಿಗೆ ಬೇಸತ್ತು, ಕಾಂಗ್ರೆಸ್‌ ಪಕ್ಷವನ್ನು ಸೇರುವ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡರು.

ಜಾರಕಿಹೊಳಿ ಕುಟುಂಬಕ್ಕೆ ತಪ್ಪಿದ ಮಂತ್ರಿಸ್ಥಾನ

ಸತೀಶ್‌ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್‌ ಪಕ್ಷ ಸಮಾಜದ ಎಲ್ಲ ವರ್ಗದ ಜನರನ್ನು ಒಂದೇ ಸೂರಿನಡಿ ಕರೆದುಕೊಂಡುವ ಹೋಗುವ ಏಕೈಕ ರಾಷ್ಟ್ರೀಯ ಪಕ್ಷವಾಗಿದ್ದು, ತಾವೆಲ್ಲ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರಿಂದ ಪಕ್ಷಕ್ಕೆ ಆನೆ ಬಲ ಬಂದತಾಗಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಪಕ್ಷ ನಿಮ್ಮೊಂದಿಗೆ ಇದ್ದು, ಹತ್ತು ಹಲವು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿದೆ ಎಂದರು.
 

PREV
click me!

Recommended Stories

ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ