ಮಂಡ್ಯ: ಜೆಡಿಎಸ್ ಶಾಸಕರ ಬೆಂಬಲಿಗರು ಬಿಜೆಪಿಗೆ

By Kannadaprabha NewsFirst Published Aug 20, 2019, 5:27 PM IST
Highlights

ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಅಲ್ಲಿಯ ಎಲ್ಲ ಶಾಸಕರೂ ಜೆಡಿಎಸ್‌ನವರಿಂದಲೇ ಗೆದ್ದು ಬಂದವರು. ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗೆ ಬಿಜೆಪಿ ಬೆಂಬಲಿಸಿದ್ದು, ಸುಮಲತಾ ಅವರೇ ಗೆದ್ದು ಬಂದಿದ್ದಾರೆ. ಅಲ್ಲದೇ ಜಿಲ್ಲೆಯ ಕೆ.ಆರ್.ಪೇಟೆ ಶಾಸಕರಾಗಿದ್ದ ನಾರಾಯಣ ಗೌಡರೂ ಬಿಜೆಪಿಯನ್ನು ಬೆಂಬಲಿಸುವ ಸಾಧ್ಯತೆ ಇದೆ. ಈ ಬೆನ್ನಲ್ಲೇ ಹಾಲು ಒಕ್ಕೂಟದ ಚುನಾವಣೆಯಲ್ಲಿಯೂ ಪಕ್ಷ ಸ್ಪರ್ಧಿಸುವ ಸಾಧ್ಯತೆ ಇದೆ. 

ಮದ್ದೂರು (ಆ.20): ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಸೆ.8ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ ತಿಳಿಸಿದರು.

ಪಟ್ಟಣದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಸತೀಶ್‌ ನಿವಾಸದಲ್ಲಿ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಕುರಿತಂತೆ ಮಾಹಿತಿ ಸಂಗ್ರಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮನ್ಮುಲ್‌ ಆಡಳಿತ ಮಂಡಳಿ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಮದ್ದೂರಿನಿಂದ ಪಕ್ಷದ ತಾಲೂಕು ಸಂಚಾಲಕಿ ರೂಪಾ ಅವರನ್ನು ಕಣಕ್ಕಳಿಸುವುದು ಬಹುತೇಕ ಖಚಿತ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಮನ್ಮುಲ್‌ ಚುನಾವಣೆಯಲ್ಲಿ ಇತರೆ ತಾಲೂಕುಗಳಿಂದಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಂಡ ನಂತರ ಜಿಲ್ಲೆಯಲ್ಲಿ ಒಂದು ವಾರ ವಾಸ್ತವ್ಯ ಹೂಡಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ಪದಾಧಿಕಾರಿಗಳು ಬಿಜೆಪಿ ಸದಸ್ಯತ್ವ ನೋಂದಣಿ ಕುರಿತಂತೆ ಮಾಹಿತಿ ಸಂಗ್ರಹಿಸಿತ ತೇಜಸ್ವಿನಿ ಗೌಡ, ಮದ್ದೂರು ವಿಧಾನ ಸಭಾ ಕ್ಷೇತ್ರದಲ್ಲಿ ಕನಿಷ್ಠ 25 ಸಾವಿರ ನೋಂದಣಿ ಗುರಿ ನಿಗದಿ ಮಾಡಲಾಗಿತ್ತು. ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮುಖಂಡರು, ಆ ಪಕ್ಷದ ವರ್ತನೆಯಿಂದ ಬೇಸತ್ತು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಸುಮಾರು 17 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದಾರೆ. ಅಭಿಯಾನ ಮುಂದುವರಿಯಲಿದೆ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸತೀಶ್‌, ಸಂಚಾಲಕ ಡಾ. ಸದಾನಂದ, ಸಹ ಸಂಚಾಲಕ ಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾದ ಎಂ.ಸಿ.ಸಿದ್ದು, ಬಿ.ಸಿ.ಮಹೇಂದ್ರ, ರೈತ ಮೋರ್ಚಾ ಅಧ್ಯಕ್ಷ ಸಿದ್ದಲಿಂಗಸ್ವಾಮಿ, ಮುಖಂಡರಾದ ಹರೀಶ್‌, ಸ್ವಾಮಿ, ರಾಜೇಶ್‌ ಇದ್ದರು.

ತಮ್ಮಣ್ಣ ಬೆಂಬಲಿಗರು ಬಿಜೆಪಿಗೆ

ಶಾಸಕ ಡಿ.ಸಿ.ತಮ್ಮಣ್ಣ ಬೆಂಬಲಿಗರಾದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಂ.ಜಿ. ಶ್ರೀಕಂಠಯ್ಯ ಹಾಗೂ ಎಂ.ಪಿ.ಮೃತ್ಯುಂಜಯ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯದ ವೇಳೆ ಶ್ರೀಕಂಠಯ್ಯ ಹಾಗೂ ಮೃತ್ಯುಂಜಯ ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಎಂದು ಪಕ್ಷದ ನಗರ ಘಟಕದ ಅಧ್ಯಕ್ಷ ಮ.ನಾ. ಪ್ರಸನ್ನಕುಮಾರ್‌ ತಿಳಿಸಿದ್ದಾರೆ.

ಮಂಡ್ಯ ನೆರೆ ಸಂತ್ರಸ್ತರಿಗೆ ವ್ಯಾಪಾರಿಗಳ ನೆರವು

click me!