ಪ್ರಧಾನಿ ನರೇಂದ್ರ ಮೋದಿ ಮಾ.25ರಂದು ದಾವಣಗೆರೆಗೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಸಂಚಾರ ಮಾರ್ಗ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ, ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ನಿಲುಗಡೆಗೆ ಸ್ಥಳವನ್ನು ಜಿಲ್ಲಾ ಪೊಲೀಸ್ ಇಲಾಖೆ ನಿಗದಿಪಡಿಸಿದೆ.
ದಾವಣಗೆರೆ (ಮಾ.24) : ಪ್ರಧಾನಿ ನರೇಂದ್ರ ಮೋದಿ ಮಾ.25ರಂದು ದಾವಣಗೆರೆಗೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಸಂಚಾರ ಮಾರ್ಗ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ, ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ನಿಲುಗಡೆಗೆ ಸ್ಥಳವನ್ನು ಜಿಲ್ಲಾ ಪೊಲೀಸ್ ಇಲಾಖೆ ನಿಗದಿಪಡಿಸಿದೆ.
* ಚಿಕ್ಕಮಗಳೂರು(Chikkamagaluru), ಶಿವಮೊಗ್ಗ, ಭದ್ರಾವತಿ, ಬೀರೂರು, ಕಡೂರು, ಶೃಂಗೇರಿ, ಬೆಂಗಳೂರು, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಿಕ್ಕಬುಳ್ಳಾಪುರ, ಹಾಸನ, ಕೊಡಗು, ಮಂಗಳೂರು ಜಿಲ್ಲೆಗಳಿಂದ ಬರುವ ವಾಹನಗಳಿಗೆ ಬಾಡಾ ಕ್ರಾಸ್‌ನಿಂದ ದಾವಣಗೆ(Davanagere)ರೆ ಪ್ರವೇಶ ಮಾಡುವ ವಾಹನಗಳಿಗೆ ಎಪಿಎಂಸಿ ಮತ್ತು ಚಿಕ್ಕನಹಳ್ಳಿಯಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಕಲ್ಪಿಸಿದೆ.
DAVANAGERE: ರಾಜಕೀಯ ಪಕ್ಷಗಳಿಗೆ ದಾವಣಗೆರೆ ಅದೃಷ್ಟಪರೀಕ್ಷೆ
* ಚನ್ನಗಿರಿ ಶಿವಮೊಗ್ಗ, ಭದ್ರಾವತಿ, ಮಂಗಳೂರು, ಕಡೂರು ಕಡೆಯಿಂದ ಹದಡಿ ರಸ್ತೆ ಮಾರ್ಗವಾಗಿ ದಾವಣಗೆರೆ ಪ್ರವೇಶಿಸುವ ವಾಹನಗಳನ್ನು ಡಿಆರ್‌ಎಂ ವಿಜ್ಞಾನ ಕಾಲೇಜು, ಹೈಸ್ಕೂಲ್ ಮೈದಾನ, ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಿಲುಗಡೆ ಮಾಡಬೇಕು. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಹರಿಹರ ಕಡೆಯಿಂದ ಬೈಪಾಸ್ ರಸ್ತೆ ಮುಖಾಂತರ ಹಳೆ ಕುಂದುವಾಡ ಕಡೆಯಿಂದ ಬರುವ ವಾಹನಗಳನ್ನು ಕುಂದುವಾಡ ಕೆರೆ ಸಮೀಪದ ಜಾಗದಲ್ಲಿ ಪಾರ್ಕಿಂಗ್ ಮಾಡಬೇಕು.
* ಹರಪನಹಳ್ಳಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿ, ಗದಗ, ಯಾದಗಿರಿ ಕಡೆಯಿಂದ ಬರುವ ವಾಹನಗಳು ಕೊಂಡಜ್ಜಿ, ಆವರಗೊಳ್ಳ ಮುಖಾಂತರ ಕಾರ್ಯಕ್ರಮ ಸ್ಥಳಕ್ಕೆ ಪ್ರವೇಶ ಬರುವ ವಾಹನಗಳನ್ನು ಆವರಗೊಳ್ಳ ಸಮೀಪದ ಕೇಂದ್ರೀಯ ವಿದ್ಯಾಲಯದ ಜಾಗದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಿದೆ. ಚಳ್ಳಕೆರೆ, ಮೊಳಕಾಲ್ಮೂರು, ಕೂಡ್ಲಿಗಿ ಕಡೆಯಿಂದ ಜಗಳೂರು ರಸ್ತೆ ಮಾರ್ಗವಾಗಿ ಬರುವ ವಾಹನಗಳು ಬಡಗಿ ಕೃಷ್ಣಪ್ಪ ಲೇಔಟ್‌ನಲ್ಲಿ ಪಾರ್ಕಿಂಗ್ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಖಾಸಗಿ, ಸರ್ಕಾರಿ ಬಸ್ ನಿಲ್ದಾಣ ಸ್ಥಳಾಂತರ
ಎಲ್ಲಾ ಭಾರೀ ವಾಹನಗಳ ಸಂಚಾರ ನಿಷೇಧ
ಪ್ರಧಾನಿ ನರೇಂದ್ರ ಮೋದಿ(Narendra Modi) ಸಮಾರಂಭ ನಡೆಯುವ ಸ್ಥಳದ ಸುತ್ತಮುತ್ತ ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಬರುವ ಮಕ್ಕಳು ತಮ್ಮೊಂದಿಗೆ ಹಾಲ್ ಟಿಕೆಟ್ ಮತ್ತು ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಜೊತೆಯಲ್ಲಿಟ್ಟುಕೊಳ್ಳಬೇಕು. ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಪೊಲೀಸರು ಯಾವುದೇ ಅಡಚಣೆ ಮಾಡದೇ, ಪರೀಕ್ಷೆಗೆ ಸಂಪೂರ್ಣ ಅನುಕೂಲ ಮಾಡಿಕೊಡಲಾಗುವುದು ಎಂದು ಇಲಾಖೆ ಹೇಳಿದೆ.
ನಾಳೆ ಬೆಣ್ಣೆನಗರಿಗೆ ಮೋದಿ ಆಗಮನ: ಮಹಾಸಂಗಮಕ್ಕೆ ಬಿಜೆಪಿ ಭಾರೀ ಸಿದ್ಧತೆ!
ದಾವಣಗೆರೆ ನಗರದಲ್ಲಿ ಎಲ್ಲಾ ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ನಗರದ ಹೊರ ವಲಯಕ್ಕೆ ಸ್ಥಳಾಂತರಿಸಲಾಗಿದೆ. ಮಾ.25ರಂದು ಎಲ್ಲಾ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮ ಸ್ಥಳದಿಂದ 2 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಸಮಾರಂಭಕ್ಕೆ ಬರುವ ಜನರು ಕ್ಯೂಆರ್ ಕೋಡ್ ಸ್ಕಾ್ಯನ್ ಮಾಡಿ, ನಿಲುಗಡೆಗೆ ಸೂಚಿಸಲಾದ ಸ್ಥಳಗಳಲ್ಲಿ ವಾಹನಗಳ ನಿಲುಗಡೆಗೆ ಆಯ್ಕೆ ಮಾಡಿ,ಅಲ್ಲಿಯೇ ನಿಲ್ಲಿಸುವುದು ಕಡ್ಡಾಯ ಎಂದು ಇಲಾಖೆ ಸೂಚಿಸಿದೆ.