ಬಿಜೆಪಿಯಿಂದ ಹಿಂದೂ ಮುಸ್ಲಿಂ ವಿಭಜನೆ

By Kannadaprabha NewsFirst Published Mar 4, 2020, 2:46 PM IST
Highlights

ಕೇಂದ್ರ ಬಿಜೆಪಿ ಸರ್ಕಾರ ಮುಸ್ಲಿಂ-ಹಿಂದೂಗಳನ್ನು ವಿಭಜನೆ ಮಾಡುವ ಕೆಲಸ ಮಾಡುತ್ತಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಸಂಸದ ಆರ್‌. ಧ್ರುವನಾರಾಯಣ್‌ ಹೇಳಿದ್ದಾರೆ.

ಚಾಮರಾಜನಗರ(ಮಾ.04): ಕೇಂದ್ರ ಬಿಜೆಪಿ ಸರ್ಕಾರ ಮುಸ್ಲಿಂ-ಹಿಂದೂಗಳನ್ನು ವಿಭಜನೆ ಮಾಡುವ ಕೆಲಸ ಮಾಡುತ್ತಿದೆ. ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಮಾಜಿ ಸಂಸದ ಆರ್‌. ಧ್ರುವನಾರಾಯಣ್‌ ಹೇಳಿದ್ದಾರೆ.

ನಗರದ ಸತ್ತಿ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಇಸ್ಲಾಹುಲ್‌ ಮುಸ್ಲಿಮೀನ್‌ ಸಂಸ್ಥೆಯು ಎನ್‌ಪಿಆರ್‌, ಸಿಎಎ, ಎನ್‌ಆರ್‌ಸಿ ವಿರೋಧಿಸಿ ಮಾ. 7ರಂದು ನಗರದಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣಾ ಮತ್ತು ಪೌರತ್ವ ವಿರೋಧಿಸಿ ಜನಾಂದೋಲನ ಸಮಾವೇಶಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ವಿಧಾನ ಸಭಾಧ್ಯಕ್ಷರಾದ ಕೆ.ಆರ್‌.ರಮೇಶ್‌ಕುಮಾರ್‌, ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಆಗಮಿಸುತ್ತಿದ್ದು ಅವರಿಗೆ ಭವ್ಯ ಸ್ವಾಗತ ಕೋರುವ ಸಲುವಾಗಿ ನಡೆದ ಪೂರ್ವಭಾವಿಯಲ್ಲಿ ಅವರ ನೇತೃತ್ವ ವಹಿಸಿ ಮಾತನಾಡಿದರು.

ನಗರಕ್ಕೆ ಖರ್ಗೆ:

ಜಿಲ್ಲೆಗೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅನೇಕ ಸಲ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ನೀಡಿದ್ದಾರೆ. ಅವರು ರಾಷ್ಟ್ರಮಟ್ಟದ ನಾಯಕರಾಗಿರುವುದರಿಂದ ಅಂದು ಮಳವಳ್ಳಿ ಮಾರ್ಗವಾಗಿ ಸತ್ತೇಗಾಲ, ಕೊಳ್ಳೇಗಾಲ ಮೂಲಕ ಚಾಮರಾಜನಗರಕ್ಕೆ ಬರಲಿದ್ದಾರೆ. ಅವರು ಬರುವ ಮಾರ್ಗವನ್ನು ತಳಿರು, ತೋರಣಗಳಿಂದ ಸಿಂಗಾರಿ ರಸ್ತೆಯ ಉದ್ದಕ್ಕೂ ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿದ್ದು ಸ್ವಾಗತ ಕೋರಬೇಕಿದೆ ಎಂದರು.

ರಾತ್ರೋರಾತ್ರಿ ನ್ಯಾಯಾಧೀಶರ ವರ್ಗ:

ದೇಶದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಉದ್ಯೋಗ ಸಮಸ್ಯೆ ನಿವಾರಿಸಿಲ್ಲ. ಬಿಜೆಪಿ ಎಲ್ಲ ರಂಗದಲ್ಲೂ ವಿಫಲವಾಗಿದೆ. ಇದನ್ನು ಮರೆಮಾಚಲು ಕೇಂದ್ರ ಸರ್ಕಾರ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಜಾರಿಗೆ ಮಾಡಿದೆ. ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿ ಹೊಂದಾಣಿಕೆ ಎಲ್ಲರನ್ನೂ ಜೊತೆ ಕರೆದುಕೊಂಡು ಕೆಲಸ ಮಾಡುತ್ತಿತ್ತು. ಮುಸ್ಲಿಮರು ಎಲ್ಲ ರಂಗದಲೂ ್ಲಇದ್ದು ದೇಶಕ್ಕೆ ಕೊಡುಗೆ ನೀಡಿದ್ದಾರೆ. ಮೋದಿ ಅವರು ಪೋಲಿಸರ ಮೂಲಕ ದೆಹಲಿ ಗಲಭೆ ಆರಂಭಿಸಿದ್ದಾರೆ. ಅದನ್ನು ಪ್ರಶ್ನಿಸಿದ ನ್ಯಾಯಾಧೀಶರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದರು.

ಎನ್‌ಆರ್‌ಸಿ ವಿರುದ್ಧ ಹೋರಾಟ:

ಚಾಮರಾಜನಗರದಲ್ಲಿ ನಡೆಯುವ ಸಮಾವೇಶದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡಬೇಕು. ಸಮಾವೇಶದ ನಂತರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸನ್ಮಾನಿಸಲಾಗವುದು. ಪಕ್ಷದ ಕಾರ್ಯಕರ್ತರು ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ಧ ತಿಳಿಸಬೇಕು. ಇದರ ವಿರುದ್ಧ ಹೋರಾಟ ಮಾಡಬೇಕು ಎಂದು ಹೇಳಿದರು. ಮಾಜಿ ಶಾಸಕ ಎ.ಆರ್‌.ಕೃಷ್ಣಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರ ಜನ ವಿರೋಧಿ ಕಾನೂನುಗಳನ್ನು ಜಾರಿ ಮಾಡಿ ಉದ್ದಟನ ತೋರುತ್ತಿದೆ ಎಂದು ಆರೋಪಿಸಿದರು.

ಅಧ್ಯಕ್ಷತೆ ವಹಿಸಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಮಾಚ್‌ರ್‍ 7ರಂದು ಶನಿವಾರ ನಗರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರ ಆಗಮಿಸಲಿದ್ದಾರೆ. ಅವರಿಗೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಗುವುದು. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಯಶ್ವಸಿಗೊಳಿಸಿಕೊಡುವಂತೆ ಮನವಿ ಮಾಡಿದರು.

ಕೊರೋನಾ: ಮಾಸ್ಕ್‌ನಷ್ಟೇ ಮುಖ್ಯವಂತೆ ಹೆಲ್ಮೆಟ್, ಡಿಜಿಪಿ ಏನ್ ಹೇಳಿದ್ರು ಕೇಳಿ

ಸಭೆಯಲ್ಲಿ ಮಾಜಿ ಶಾಸಕ ಎಸ್‌. ಬಾಲರಾಜ್‌, ಯುವ ಮುಖಂಡ ಗಣೇಶ್‌ಪ್ರಸಾದ್‌, ಜಿ.ಪಂ.ಉಪಾಧ್ಯಕ್ಷ ಮಹೇಶ್‌, ಡಿಡಿಸಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್‌, ನಗರಸಭಾ ಮಾಜಿ ಅಧ್ಯಕ್ಷ ಎಸ್‌.ನಂಜುಂಡಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್‌.ಮಹದೇವು, ಚಿಕ್ಕಮಹದೇವು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಗುರುಸ್ವಾಮಿ, ಮಹಮ್ಮದ್‌ಅಸ್ಗರ್‌, ಹೊಂಗನೂರು ಚಂದ್ರು, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್‌ಕುಮಾರ್‌, ಜಿ.ಪಂ. ಸದಸ್ಯ ಯೋಗೇಶ್‌ ಇತರರು ಭಾಗವಹಿಸಿದ್ದರು.BJP dividing hindu and muslim says r dhruva narayan

click me!