35ರಲ್ಲಿ 33 ಕಡೆ ಬಿಜೆಪಿ ಅಧಿಕಾರಕ್ಕೆ ಏರಿದ್ದು ಮತ್ತೆ ಗೆಲುವಿನ ಪರ್ವ ಮುಂದುವರಿದೆ. ಮತ್ತೆ ಮುಂದಿನ ಚುನಾವಣೆಯಲ್ಲಿಯೂ ಗೆಲುವಿನ ಓಟ ಮುಂದುವರಿಯುವ ಬಗ್ಗೆಯೂ ಕಮಲ ಪಾಳಯದ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರು (ಫೆ.08): ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 35 ಗ್ರಾಮ ಪಂಚಾಯಿತಿಗಳ ಪೈಕಿ 33 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ ಬಂದಿದೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ. ಸುರೇಶಗೌಡ, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿಜಯದ ಪರ್ವ ಮುಂದುವರಿದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಬರುವಂತ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಕೂಡ ಗೆಲ್ಲುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗ್ಗೆ ಬಿಜೆಪಿಗೆ ಹೋಗಿ.. ಸಂಜೆ ಕಾಂಗ್ರೆಸ್‌ಗೆ ವಾಪಸ್: ಶಾಸಕಗೆ ಮುಖಭಂಗ
ಐದು ಗ್ರಾಮ ಪಂಚಾಯಿತಿಗಳ ಹರಳೂರು ಕಣಕುಪ್ಪೆ ಹೆಬ್ಬೂರು ಕೆ.ಪಾಲಸಂದ್ರ ಸೀತಕಲ್ಲು ಹಾಗೂ ನಿಡುವಳಲು ಅಧ್ಯಕ್ಷರ ಚುನಾವಣೆಯಲ್ಲಿ 5ಕ್ಕೆ 5 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದಿದ್ದಾರೆ ಎಂದು ತಿಳಿಸಿದರು.
ಗ್ರಾಮಾಂತರದಲ್ಲಿ ಇದೊಂದು ಐತಿಹಾಸಿಕ ಗೆಲುವು ಎಂದು ಸುರೇಶಗೌಡ ಬಣ್ಣಿಸಿದರು. ತಳಮಟ್ಟದ ಪ್ರತಿ ಬೂತ್ ಮಟ್ಟದಲ್ಲಿ ಕೂಡ ಸಶಕ್ತ ಕಾರ್ಯಕರ್ತರ ನಿರ್ಮಾಣ ಹಾಗೂ ಅಭಿವೃದ್ಧಿ ಚಿಂತನೆ ಉಳ್ಳ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಇದು ನಮ್ಮ ಪಕ್ಷದ ಸದೃಢತೆಗೆ ಕಾರಣವಾಗಿದೆ ಎಂದು ಸುರೇಶಗೌಡ ತಿಳಿಸಿದರು.