ಬಡಜನರ ಜೀವನಮಟ್ಟಸುಧಾರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕಷ್ಟಪಟ್ಟು ಜೀವನ ನಡೆಸುವ ಹಮಾಲರಿಗೆ ಈಗ ಸೂರು ಕಲ್ಪಿಸಿಕೊಡುತ್ತಿರುವುದೇ ಈ ಮಾತಿಗೆ ಸಾಕ್ಷಿ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.
ದಾವಣಗೆರೆ (ಜ.6) : ಬಡಜನರ ಜೀವನಮಟ್ಟಸುಧಾರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕಷ್ಟಪಟ್ಟು ಜೀವನ ನಡೆಸುವ ಹಮಾಲರಿಗೆ ಈಗ ಸೂರು ಕಲ್ಪಿಸಿಕೊಡುತ್ತಿರುವುದೇ ಈ ಮಾತಿಗೆ ಸಾಕ್ಷಿ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.
ತಾಲೂಕಿನ ಎಚ್.ಗಿರಿಯಾಪುರ ಗ್ರಾಮದಲ್ಲಿ ಗುರುವಾರ ಕೃಷಿ ಮಾರಾಟ ಇಲಾಖೆ, ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿ ವತಿಯಿಂದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ಹಮಾಲರಿಗೆ ನಿರ್ಮಿಸಿರುವ ವಸತಿಗೃಹಗಳ ಉದ್ಘಾಟಿಸಿ ಮಾತನಾಡಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ದಾವಣಗೆರೆ ಕೃಷಿ ಮಾರುಕಟ್ಟೆಸಮಿತಿಯಲ್ಲಿ ಲೈಸೆನ್ಸ್ ಪಡೆದು ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟಜಾತಿ, ಪಂಗಡಕ್ಕೆ ಸೇರಿದ ಹಮಾಲರಿಗಾಗಿ ಎಚ್.ಗಿರಿಯಾಪುರ ಗ್ರಾಮದ ಸರ್ವೆ ನಂಬರ್ 6/1ರ 12 ಎಕರೆ ಜಾಗದಲ್ಲಿ 122 ವಸತಿಗೃಹಗಳನ್ನು ನಿರ್ಮಿಸಿಕೊಟ್ಟಿದೆ ಎಂದರು.
undefined
ಸಚಿವ ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ಸಂಗತಿ: ಸಚಿವ ಬೈರತಿ ಬಸವರಾಜ
ದಾವಣಗೆರೆ(Davanagere)ಯ ಕೆ.ಆರ್.ಮಾರುಕಟ್ಟೆ(KR Market)ಯಲ್ಲಿ 26 ಕೋಟಿ ರು. ವೆಚ್ಚದಲ್ಲಿ ಮುಚ್ಚು ಹರಾಜುಕಟ್ಟೆಯ ಪ್ರಿಕ್ಯಾಸ್ಟಿಂಗ್ ಕಟ್ಟಡವನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾಗಿದೆ. ನೆಲಮಹಡಿಯಲ್ಲಿ 138, ಮೊದಲನೇ ಮಹಡಿಯಲ್ಲಿ 116 ಸೇರಿ ಒಟ್ಟು 254 ಮಳಿಗೆಗಳನ್ನು ನಿರ್ಮಿಸಲಾಗಿದೆ. ಎರಡನೇ ಮಹಡಿಯಲ್ಲಿ 250 ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಶೌಚಾಲಯ, ಲಿಫ್‌್ಟಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳಿರುವ ಮುಚ್ಚು ಹರಾಜುಕಟ್ಟೆಕೂಡ ಲೋಕಾರ್ಪಣೆಗೊಳ್ಳುತ್ತಿದೆ ಎಂದು ವಿವರಿಸಿದರು.
ಸಂಸದ ಡಾ.ಜಿ.ಎಂ.ಸಿದ್ದೇಶ್ವರ(MP GM Siddeshwar) ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ರಾಜ್ಯದಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರುವುದರಿಂದ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಮುಂಬರುವ ದಿನಗಳಲ್ಲೂ ಡಬಲ್ ಇಂಜಿನ್ ಸರ್ಕಾರಕ್ಕೆ ಜನತೆ ಆಶೀರ್ವದಿಸಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ 10 ಮಂದಿ ಪರಿಶಿಷ್ಟಹಮಾಲರಿಗೆ ಸಾಂಕೇತಿಕವಾಗಿ ವಸತಿಗೃಹಗಳ ಹಂಚಿಕೆ ಪತ್ರ ವಿತರಿಸಲಾಯಿತು. ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಪೊ›.ಎನ್.ಲಿಂಗಣ್ಣ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಪಂ ಸಿಇಓ ಡಾ.ಎ.ಚನ್ನಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಕೃಷಿ ಮಾರಾಟ ಇಲಾಖೆ ಜಂಟಿ ನಿರ್ದೇಶಕ ಎ.ಸಿ.ದೊರೈಸ್ವಾಮಿ, ಸಹಾಯಕ ನಿರ್ದೇಶಕ ಜಿ.ಪ್ರಭು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಂಗ್ರೆಸ್ಸಿನವರಿಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಸಚಿವ ಬೈರತಿ
ವಸತಿಗೃಹಗಳಿಗೆ ರಾಂಪುರ ಹಳ್ಳದಿಂದ ಪೈಪ್‌ಲೈನ್ ಮೂಲಕ ಕುಡಿಯುವ ನೀರು ಒದಗಿಸಲಾಗುವುದು. ಸಂಪರ್ಕ ರಸ್ತೆ ಮತ್ತು ತಂತಿಬೇಲಿ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದು, ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
ಬೈರತಿ ಬಸವರಾಜ, ಜಿಲ್ಲಾ ಉಸ್ತುವಾರಿ ಸಚಿವ