'ಬಿಜೆಪಿ ಸರ್ಕಾರಕ್ಕೆ ದಂಡ ವಸೂಲಿಯಲ್ಲಿರೋ ಆಸಕ್ತಿ ಪರಿಹಾರ ನೀಡೋದ್ರಲಿಲ್ಲ'..!

By Kannadaprabha News  |  First Published Sep 13, 2019, 8:46 AM IST

ಬಿಜೆಪಿ ಸರ್ಕಾರಕ್ಕೆ ದಂಡ ವಸೂಲಿ ಮಾಡೋದ್ರಲ್ಲಿರೋ ಆಸಕ್ತಿ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸೋದ್ರಲಿಲ್ಲ ಎಂದು ಶಿವಮೊಗ್ಗ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ನೆರೆ ಪರಿಹಾರ ವಿತರಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.


ಶಿವಮೊಗ್ಗ(ಸೆ.13): ನೆರೆ ಪರಿಹಾರ ವಿತರಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿ ಗುರುವಾರ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಹಿಂದೆಂದಿಗಿಂತಲೂ ಈ ಬಾರಿ ಅತಿವೃಷ್ಟಿಯಿಂದ ರಾಜ್ಯಾದ್ಯಂತ ವಿಪರೀತ ಹಾನಿಯಾಗಿದೆ. ಜನರು ಮನೆಮಠ ಕಳೆದುಕೊಂಡು ಸಂಕಷ್ಟಜೀವನ ಅನುಭವಿಸುತ್ತಿದ್ದಾರೆ. ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ನೆರೆಯಿಂದ ಹಾನಿ ಉಂಟಾಗಿದ್ದರೂ ಸರ್ಕಾರ ಸಂತ್ರಸ್ತರ ನೋವಿಗೆ ಸ್ಪಂದಿಸದಿರುವುದು ಖಂಡನೀಯ ಆಕ್ರೋಶ ವ್ಯಕ್ತಪಡಿಸಿದರು.

Tap to resize

Latest Videos

ಅಡಕೆ ಕೊಳೆ: 70ವರ್ಷಗಳಿಂದಲೂ ಅದೇ ಔಷಧ, ಸಂಶೋಧಕರೇನ್ಮಾಡ್ತಿದ್ದಾರೆ..?

ಇಂತಹ ತುರ್ತು ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಈ ತನಕ ರಾಜ್ಯ ಸರ್ಕಾರಕ್ಕೆ ಪರಿಹಾರ ಮೊತ್ತ ವಿತರಣೆ ಮಾಡಿಲ್ಲ. ರಾಜ್ಯ ಸರ್ಕಾರ ಸಹ ನೆರೆ ಸಂತ್ರಸ್ತರ ನೆರವಿಗೆ ಈ ತನಕ ಬಂದಿಲ್ಲ. ನೆರೆಯಿಂದ ಹಾನಿಗೊಳಗಾದವರಿಗೆ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದಲ್ಲಿ ಕಾಂಗ್ರೆಸ್‌ ವತಿಯಿಂದ ಉಗ್ರ ಹೋರಾಟ ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ:

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಆರ್‌.ಜಯಂತ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ. ಸಂಚಾರಿ ಸಾರಿಗೆ ಸವಾರರಿಂದ ದಂಡ ವಸೂಲಿ ಮಾಡುವಲ್ಲಿ ತೋರಿಸುವಷ್ಟುಆಸಕ್ತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಸಾಮಾನ್ಯರ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ದಂಡ ವಸೂಲಿ ಹೆಸರಿನಲ್ಲಿ ಸರ್ಕಾರ ಜನರ ಸುಲಿಗೆಗೆ ಇಳಿದಿದೆ. ಕೇಂದ್ರದ ಆರ್ಥಿಕ ನೀತಿಯಿಂದ ಜನರು ಉದ್ಯೋಗ ಕಳೆದುಕೊಂಡು ಬೀದಿಪಾಲಾಗುತ್ತಿದ್ದಾರೆ. ಸುಮಾರು 10 ಲಕ್ಷ ಜನರು ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಣೇಶ ಮೆರವಣಿಗೆ : ವಿಶೇಷ ಅಲಂಕಾರದಿಂದ ಕಂಗೊಳಿಸುತ್ತಿರುವ ಶಿವಮೊಗ್ಗ ನಗರ

ಜಿಪಂ ಸದಸ್ಯ ಭೀಮನೇರಿ ಶಿವಪ್ಪ, ಯುವ ಕಾಂಗ್ರೆಸ್‌ ಅಧ್ಯಕ್ಷ ಸುಧಾಕರ ಕುಗ್ವೆ, ಅನಿತಾ ಕುಮಾರಿ, ಕಲಸೆ ಚಂದ್ರಪ್ಪ, ಜ್ಯೋತಿ, ಮೈಕೆಲ್‌ ಡಿಸೋಜ, ಗಣಪತಿ ಮಂಡಗಳಲೆ, ಮಹಾಬಲೇಶ್‌ ಕೌತಿ, ರವಿಕುಮಾರ್‌ ಹುಣಾಲಮಡಿಕೆ, ಪ್ರಭಾವತಿ ಚಂದ್ರಕಾಂತ್‌, ಸವಿತಾ ದೇವರಾಜ್‌ ಇನ್ನಿತರರು ಹಾಜರಿದ್ದರು.

click me!