ಶಿರಾ ಕ್ಷೇತ್ರದಲ್ಲಿ ಇದುವರೆಗೂ ಶಾಸಕರಾದವರನ್ನೇ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿ ಏಕಮುಖದ ಅಧಿಕಾರ ನಡೆಸುತ್ತಿದ್ದರು. ಆದರೆ 2020ರಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದ ನಂತರ ಶಿರಾ ಕ್ಷೇತ್ರದ ಮೂವರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಶಿರಾ : ಶಿರಾ ಕ್ಷೇತ್ರದಲ್ಲಿ ಇದುವರೆಗೂ ಶಾಸಕರಾದವರನ್ನೇ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿ ಏಕಮುಖದ ಅಧಿಕಾರ ನಡೆಸುತ್ತಿದ್ದರು. ಆದರೆ 2020ರಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದ ನಂತರ ಶಿರಾ ಕ್ಷೇತ್ರದ ಮೂವರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಸೋಮವಾರ ತಾಲೂಕಿನ ಮದಲೂರು ಗ್ರಾಮದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಮೋರ್ಚಾ ಹಾಗೂ ರೈತ ಮೋರ್ಚಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದಲ್ಲಿ ಪಕ್ಷಕ್ಕಾಗಿ ದುಡಿದವರನ್ನು ರಾಜ್ಯಗಳ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮಾಡಿದೆ. ನಮ್ಮ ತಾಲೂಕಿನಲ್ಲಿ ಬಿ.ಕೆ.ಮಂಜುನಾಥ್, ಎಸ್.ಆರ್.ಗೌಡ, ಚಂಗಾವರ ಮಾರಣ್ಣ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ನಮ್ಮ ಪಕ್ಷದ ಬದ್ಧತೆಯನ್ನು ತೋರಿಸುತ್ತದೆ ಎಂದರು.
ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಿಳಾ ಸಬಲೀಕರಣಕ್ಕಾಗಿ ಹಾಗೂ ರೈತರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅವರ ಏಳಿಗೆಗಾಗಿ ಶ್ರಮಿಸುತ್ತಿವೆ. ರೈತರು ತಮ್ಮ ಜಮೀನಿನಲ್ಲಿ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಲು ಪ್ರತಿ ಮೂರು ವರ್ಷಗಳಿಗೆ ಉಚಿತವಾಗಿ 50 ಸಾವಿರ ಸಹಾಯ ಧನವನ್ನು ಕೇಂದ್ರ ಸರ್ಕಾರ ನೀಡಲು ತೀರ್ಮಾನಿಸಿದೆ. ನೀರಿನ ಸಂರಕ್ಷಣೆ ಹಾಗೂ ಬಳಕೆಗಾಗಿ 12 ಲಕ್ಷ ರೈತರಿಗೆ ಹನಿ ನೀರಾವರಿ ಘಟಕ ನೀಡಿದ್ದಾರೆ. ಇತ್ತೀಚೆಗೆ 3000 ರೈತರಿಗೆ ತಾಲೂಕಿನಲ್ಲಿ ನೀಡಲಾಗಿದೆ. ರಾಜ್ಯ ಸರ್ಕಾರ ಇತ್ತೀಚಿನ ಬಜೆಟ್‌ನಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ಸಹಾಯ ಧನ, ರೈತರ ಮಕ್ಕಳಿಗೆ ಉಚಿತ ಶಿಕ್ಷಣ, ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ, ರೈತ ಕೂಲಿ ಕಾರ್ಮಿಕರಿಗೆ ವಿದ್ಯಾರ್ಥಿ ವೇತನ, ರೈತ ಮಹಿಳೆಯರಿಗೆ 1000 ರು.ಗಳನ್ನು ಪಿಂಚಣೆ ವ್ಯವಸ್ಥೆ ಘೋಷಣೆ ಮಾಡಿದ್ದಾರೆ. ಒಟ್ಟಾರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಹೆಚ್ಚು ಒತ್ತು ನೀಡಿವೆ ಎಂದರು.
ಮಧುಗಿರಿ ವಿಭಾಗದ ಪ್ರಭಾರಿ ಮಂಜುಳಾ ಮಾತನಾಡಿ, ದೇಶದಲ್ಲಿ ಮಹಿಳಾ ಸಮಾಜ ಹಾಗೂ ರೈತ ಸಮಾಜವನ್ನು ತಲೆ ಎತ್ತುವಂತೆ ಮಾಡಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ 3000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರೈತರ ಆತ್ಮಹತ್ಯೆ ಕಡಿಮೆಯಾಗಿದೆ. ರೈತ ಮಕ್ಕಳಿಗೆ ವಿದ್ಯಾಸಿರಿ ಯೋಜನೆ ಜಾರಿಗೆ ತಂದು ವಿದ್ಯಾರ್ಥಿ ವೇತನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಹುಲಿನಾಯ್ಕರ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಿವಪ್ರಸಾದ್ ಮಾತನಾಡಿದರು. ರೈತ ಮೋರ್ಚಾ ರಾಜ್ಯಾಧ್ಯಕ್ಷ ವಿಶ್ವನಾಥ್ ಅಪ್ಪಾಜಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಲತಾ ಪ್ರದೀಪ್, ಮಧುಗಿರಿ ವಿಭಾಗದ ಬಿಜೆಪಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂಗಾವರ ಮಾರಣ್ಣ, ಶಿರಾ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಮಾರುತೀಶ್, ಸದಸ್ಯರಾದ ನರಸಿಂಹಮೂರ್ತಿ, ಮುಖಂಡರಾದ ಮದಲೂರು ಮೂರ್ತಿ ಮಾಸ್ಟರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಶಂಕರ್, ಈರಣ್ಣ, ರವಿ ಪಾವಗಡ, ಸುಕೇಶ್, ಶಿವಕುಮಾರ್, ಮುದಿಮಡು ಮಂಜುನಾಥ್, ಬೆಟ್ಟಪ್ಪನಹಳ್ಳಿ ನಂದೀಶ್, ಗಿರಿಧರ್, ತರೂರು ಬಸವರಾಜ್, ಮಹಿಳಾ ಘಟಕದ ನಗರ ಕಾರ್ಯದರ್ಶಿ ಲತಾಕೃಷ್ಣ, ಲಲಿತಮ್ಮ, ಪದ್ಮಾ ಮಂಜುನಾಥ್, ನಗರಸಭೆ ಉಪಾಧ್ಯಕ್ಷೆ ಅಂಬುಜ ನಟರಾಜ್, ಸದಸ್ಯರಾದ ಉಮಾ ವಿಜಯರಾಜ್, ಸ್ವಾತಿ ಮಂಜೇಶ್ ಸೇರಿದಂತೆ ಹಲವರು ಹಾಜರಿದ್ದರು.
ರಾಜೇಶ್‌ಗೌಡರನ್ನು ಗೆಲ್ಲಿಸಿ: ನರೇಂದ್ರ ಬಾಬು
ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನೆ.ಲ.ನರೇಂದ್ರ ಬಾಬು ಮಾತನಾಡಿ, ಶಿರಾ ತಾಲೂಕಿನಲ್ಲಿ ಡಾ.ಸಿ.ಎಂ.ರಾಜೇಶ್ ಗೌಡ ಅವರು ಶಾಸಕರಾದ ಕಾರಣ ಮದಲೂರು ಕೆರೆಗೆ ಮೂರು ಬಾರಿ ನೀರು ಹರಿದಿದೆ. ತಾಲೂಕಿನ ಎಲ್ಲಾ ಕೆರೆಗಳು ತುಂಬಿವೆ. ಇದಕ್ಕೆ ಡಾ.ಸಿ.ಎಂ.ರಾಜೇಶ್ ಗೌಡ ಅವರ ಕೆಲಸ ಸಾಕಷ್ಟಿದೆ. ಆದ್ದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ರಾಜೇಶ್ ಗೌಡ ಅವರನ್ನೇ ಜನರು ಗೆಲ್ಲಿಸಬೇಕು. ರಾಜ್ಯದಲ್ಲಿ ಬಹುಮತ ಬಂದರೆ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಅಭಿವೃದ್ಧಿ ಕಾರ್ಯಗಳು ಹೆಚ್ಚು ಆಗಲು ಸಾಧ್ಯವಾಗುತ್ತದೆ ಎಂದರು.
13ಶಿರಾ1: ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಮೋರ್ಚಾ ಹಾಗೂ ರೈತ ಮೋರ್ಚಾ ಸಮಾವೇಶವನ್ನು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಉದ್ಘಾಟಿಸಿದರು.
13ಶಿರಾ2: ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಮೋರ್ಚಾ ಹಾಗೂ ರೈತ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು.