BJP Janasankalpa Yatre: ಸಿಎಂ ನೇತೃತ್ವದಲ್ಲಿ ಕಡೂರು ತಾಲೂಕಿನಲ್ಲಿ ಜನ ಸಂಕಲ್ಪ ಸಮಾವೇಶ

By Suvarna News  |  First Published Nov 14, 2022, 7:50 PM IST

BJP Janasankalpa Yatre Chikkamagaluru: ಚಿಕ್ಕಮಗಳೂರು ಜಿಲ್ಲೆಯ ಕಡೂರು, ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ಈ ಹಿನ್ನೆಲೆ ಬಿಜೆಪಿ ಪದಾಧಿಕಾರಿಗಳು ಎಲ್ಲಾ ರೀತಿಯ ತಯಾರಿಯಲ್ಲಿ ತೊಡಗಿದ್ದಾರೆ


ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್  

ಚಿಕ್ಕಮಗಳೂರು (ನ.14): ನಾಳೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಬಿಜೆಪಿ ವತಿಯಿಂದ ಜನ ಸಂಕಲ್ಪ ಸಮಾವೇಶ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು, ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ಈ ಹಿನ್ನೆಲೆ ಬಿಜೆಪಿ ಪದಾಧಿಕಾರಿಗಳು ಎಲ್ಲಾ ರೀತಿಯ ತಯಾರಿಯಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿಗಳು ಜನಸಂಕಲ್ಪ ಸಮಾವೇಶ ಜೊತೆಗೆ ಸರ್ಕಾರಿ ಕಾರ್ಯಕ್ರಮಗಳಲ್ಲೂ ಭಾಗಿಯಾಗಲಿದ್ದು ಭದ್ರತೆ ಸೇರಿದಂತೆ, ಅಗತ್ಯವಿರುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ. ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂಬುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ ಕಲ್ಮರುಡಪ್ಪ ತಿಳಿಸಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ನಾರಾಯಣ ಸ್ವಾಮಿ, ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸುವರು ಎಂದರು.

Latest Videos

undefined

ಪ್ರವಾಸದ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ: 
ಬೆಳಗ್ಗೆ ಹತ್ತು ಗಂಟೆಗೆ ಹೆಲಿಕಾಪ್ಟರ್ ಮೂಲಕ ಕಡೂರಿಗೆ ಆಗಮಿಸುವ  ಮುಖ್ಯಮಂತ್ರಿಗಳು ಕಡೂರಿನ ಎಪಿಎಂಸಿ ಆವರಣದಲ್ಲಿ ನಡೆಯುವ ಜನಸಂಕಲ್ಪ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ನಂತರದಲ್ಲಿ ಮಧ್ಯಾಹ್ನ 1.15 ಕ್ಕೆ ತರೀಕೆರೆಯ ತಾಲೂಕು ಕಛೇರಿ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ತದ ನಂತರದಲ್ಲಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪ್ರಗತಿವೀಕ್ಷಣೆ ಕಾರ್ಯದಲ್ಲಿ ತೊಡಗಲಿರುವ ಮುಖ್ಯಮಂತ್ರಿಗಳು  ತರೀಕೆರೆ ಎಸ್.ಜೆ.ಎಂ ಕಾಲೇಜಿನ ಆವರಣದಲ್ಲಿ ಆಯೋಜನೆಗೊಂಡಿರುವ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಬಿಜೆಪಿದ್ದು ಜನಸಂಕಲ್ಪ ಅಲ್ಲ, ಜನಸಂಕಷ್ಟಯಾತ್ರೆ: ಖಾದರ್‌

ಕಡೂರು ಶಾಸಕ ಬೆಳ್ಳಿಪ್ರಕಾಶ್ , ತರೀಕೆರೆ ಶಾಸಕ ಡಿ ಎಸ್ ಸುರೇಶ್ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಲಿಸಿದರು.ಈ ವೇಳೆಯಲ್ಲಿ ಮಾತಾಡಿದ ಶಾಸಕ ಬೆಳ್ಳಿ ಪ್ರಕಾಶ್ ನಾಳಿನ ಕಾರ್ಯಕ್ರಮಕ್ಕೆ ಆಗಮಿಸುವ ಮಾಜಿ ಮುಖ್ಯಮಂತ್ರಿ  ಬಿ ಎಸ್  ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರೂ ನಾಯಕರನ್ನು ಕ್ಷೇತ್ರದ ಜನರ ಪರವಾಗಿ ಅಭಿನಂದಿಸಲಾಗುವುದು,  ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದಾಗ 1,281 ಕೋಟಿ ನೀಡಿದ್ದು, ಭದ್ರಾ ಉಪ ಕಣಿವೆ ಯೋಜನೆ ಮೊದಲನೆ ಹಂತ ಪ್ರಗತಿಯಲ್ಲಿದೆ. ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕ್ಷೇತ್ರದ 426 ಜನವಸತಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಯೋಜನೆ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.

ಕಾಂಗ್ರೆಸ್‌ ಮುಖಂಡರು ಶಾಶ್ವತವಾಗಿ ಮನೆ ಸೇರಲಿದ್ದಾರೆ; ಸಿಎಂ ಬಸವರಾಜ ಬೊಮ್ಮಾಯಿ

ಕ್ಷೇತ್ರದಲ್ಲಿ ರಸ್ತೆಗಳು, 21ಕ್ಕೂ ಹೆಚ್ಚು ಚೆಕ್‌ ಡ್ಯಾಂಗಳ ನಿರ್ಮಾಣ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮೂಲಕ ಜಾರಿಗೊಳಿಸಿರುವ ಹಲವು ಯೋಜನೆಗಳ ಬಗ್ಗೆ ಜನಸಂಕಲ್ಪ ಯಾತ್ರೆಯಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ ಎಂದರು.

click me!