ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಕೆ!

Published : Jun 26, 2026, 08:39 AM ISTUpdated : Jun 26, 2026, 08:47 PM IST
BY Vijayendra Seeks Blessings at Dharmasthala

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದೆಹಲಿ ಹೈಕಮಾಂಡ್ ಭೇಟಿಯ ನಂತರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನಲ್ಲಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಿದ ಅವರು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.

ಧರ್ಮಸ್ಥಳ (ಜೂ.26) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಶ್ರೀ ಕ್ಷೇತ್ರ ಧರ್ಮಸ್ಥಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಇದೇ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾದ ವಿಜಯೇಂದ್ರ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ವಿಜಯೇಂದ್ರ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಯಶ್ ಪಾಲ್ ಸುವರ್ಣ ಭಾಗಿಯಾಗಿದ್ದಾರೆ.

ಆಣೆ ಪ್ರಮಾಣ ಕೈಬಿಟ್ಟು ವಿಜಯೇಂದ್ರ ಧರ್ಮಸ್ಥಳ ಭೇಟಿ

ಬೆಳಗ್ಗೆ 8 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಿದ ವಿಜಯೇಂದ್ರ ಮಂಜುನಾಥನ ದರ್ಶನ ಪಡೆದಿದ್ದಾರೆ.  ಈ ಬಗ್ಗೆ ಟ್ವೀಟ್ ಪೋಸ್ಟ್ ಹಂಚಿಕೊಂಡಿರುವ ಅವರು, ನಾಡಿನ ಸುಪ್ರಸಿದ್ಧ ಪುಣ್ಯಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಇಂದು ಶ್ರೀ ಮಂಜುನಾಥ ಸ್ವಾಮಿ ಹಾಗೂ ಪರಿವಾರ ದೇವರುಗಳ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಬರಗಾಲದ ಕರಿಛಾಯೆ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ನಾಡಿನಲ್ಲಿ ಉತ್ತಮ ಮಳೆಯಾಗಲಿ, ಬೆಳೆ ಬೆಳೆದು ಸಮೃದ್ಧಿಯೊಂದಿಗೆ ಅನ್ನದಾತ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ವಿಶೇಷವಾಗಿ ಪ್ರಾರ್ಥಿಸಲಾಯಿತು. ನಂತರ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು' ಎಂದು ಬರೆದುಕೊಂಡಿದ್ದಾರೆ.

ಇನ್ನು ವಿಪಕ್ಷ ನಾಯಕ ಆರ್. ಅಶೋಕ್ ರಾಜಕೀಯವಾಗಿ ಧರ್ಮಸ್ಥಳ ವಿಚಾರ ಎಳೆದು ತರುವುದು ಬೇಡ ಎಂದು ಸಲಹೆ ನೀಡಿದ್ದರು. ಕೆಲವರು ಪರಿಷತ್ ಚುನಾವಣೆಯಲ್ಲಿ ಪಕ್ಷಕ್ಕೆ ದ್ರೋಹ, ವಂಚನೆ ಬಗೆದಿರುವುದು ನಿಜ. ಯಾವ ಶಾಸಕ ದ್ರೋಹ ಮಾಡಿದ್ದಾರೆ ಗೊತ್ತಿಲ್ಲ, ಆ ಕಾರಣಕ್ಕೆ ಅಧ್ಯಕ್ಷರ ಜೊತೆಗೆ ಮಾತನಾಡುತ್ತೇನೆ. 2019 ರಲ್ಲಿ ಕಾಂಗ್ರೆಸ್ ‌ಶಾಸಕರು ಮುಂಬೈಗೆ ಹೋದಾಗ ಇದೇ ಕಾಂಗ್ರೆಸ್ ನಾಯಕರು ಕುದುರೆ ವ್ಯಾಪಾರ ಎಂದಿದ್ದರು. ನಮ್ಮ ಜೊತೆಗೆ ಕಾಂಗ್ರೆಸ್ ಶಾಸಕರು ಬಂದಾಗ ಆಪರೇಷನ್ ಕಮಲ ಎಂದು ಹೇಳಿದ್ದರು. ಆಗ ನಮಗೆ ಬುದ್ಧಿ ಹೇಳ್ತಿರಾ? ಈಗ ನೀವು ಮಾಡಿದ್ದೇನು, ನಾಚಿಕೆ ಆಗಲ್ವಾ? ಎಂದು ಆರ್ ಅಶೋಕ್ ಪ್ರಶ್ನಿಸಿದ್ದರು.

PREV
Read more Articles on
click me!

Recommended Stories

VB-G RAM G Logo: ಕೇಂದ್ರ ಸರ್ಕಾರದ ವಿಬಿಜಿ ರಾಮ್ ಜಿ ಯೋಜನೆಗೆ ಪುತ್ತೂರಿನ ಕಲಾವಿದ ರಚಿಸಿದ ಲೋಗೋ ಆಯ್ಕೆ!
ತುಮಕೂರಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತ! ಬರಿಗೈಯಲ್ಲೇ ಹೊಲಸು ತುಂಬಿದ ಕಾರ್ಮಿಕರು!