ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ಬರಿ ದೇಗುಲ ಶಕ್ತಿ ದೇವತೆ ಸನ್ನಿಧಿಯಲ್ಲಿ ಬಿ.ವೈ ವಿಜಯೇಂದ್ರ, ಪತ್ನಿ, ಕುಟುಂಬದಿಂದ ಗಣಪತಿ ಹೋಮ, ಚಂಡಿಕಾಯಾಗ.
ಚಿಕ್ಕಮಗಳೂರು (ಏ.7): ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಕುಟುಂಬ ಸಮೇತರಾಗಿ ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ, ಹೋಮ, ಯಾಗಾದಿಗಳನ್ನು ನಡೆಸಿದರು. ದೇವಾಲಯದ ಆವರಣದಲ್ಲಿ ನಡೆದ ಗಣಪತಿ ಹೋಮ, ಚಂಡಿಕಾ ಯಾಗದಲ್ಲಿ ವಿಜಯೇಂದ್ರ ದಂಪತಿ ಪಾಲ್ಗೊಂಡರು. ಚುನಾವಣೆ ಹಿನ್ನೆಲೆಯಲ್ಲಿ ಅವರ ಈ ಕಾರ್ಯಕ್ರಮ ಗಮನ ಸೆಳೆಯಿತು. ಈಗಾಗಲೇ ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧಿಸುವುದು ಖಚಿತವಾಗಿದ್ದು, ಇದೇ ಹಿನ್ನೆಲೆಯಲ್ಲೇ ಅವರು ದೇವರ ಮೊರೆ ಹೋಗಿದ್ದು, ಒಳಿತಿಗಾಗಿ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ.
ಬಿಜೆಪಿ-ಕಾಂಗ್ರೆಸ್ ನಡುವೆ ಮಾರಾಮಾರಿ, 18 ಮಂದಿ ಅರೆಸ್ಟ್, ಸುರಪುರ ಮತಕ್ಷೇತ್ರ ಬೂದಿ
ಪತ್ನಿಯೊಂದಿಗೆ ಶುಕ್ರವಾರ ದೇಗುಲಕ್ಕೆ ಆಗಮಿಸಿದ ವಿಜಯೇಂದ್ರ ಅವರು ಶ್ರೀ ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಪಡೆದರು. ದೇವಾಲಯದ ಆವರಣದಲ್ಲಿಯೇ ಹಮ್ಮಿಕೊಂಡಿದ್ದ ಗಣಪತಿ ಹೋಮ ಹಾಗೂ ಚಂಡಿಕಾಯಾಗದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಡಾ. ಭೀಮೇಶ್ವರ ಜೋಷಿ ದಂಪತಿ, ವಿಜಯೇಂದ್ರ ದಂಪತಿಯನ್ನು ಸನ್ಮಾನಿಸಿದರು.
ರಾಜಕಾರಣ ಅಂದ್ರೆ ಫುಟ್ಬಾಲ್ ಅಲ್ಲ, ಚೆಸ್ ಗೇಮ್, ಬಿಜೆಪಿ ಪಟ್ಟಿ ಬರಲಿ ಬಳಿಕ ಮಾತಾಡ್ತೇನೆ: ಡಿಕೆಶಿ
ಇನ್ನು ಏಪ್ರಿಲ್ 13 ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಅಲ್ಲದೆ, ನಾಮಪತ್ರ ಸಲ್ಲಿಕೆ ಆರಂಭವೂ ಏಪ್ರಿಲ್ 13 ರಂದೇ ಆರಂಭವಾಗಲಿದೆ. ಇನ್ನು, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.