ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಂದಿದ್ದಕ್ಕೆ ವ್ಯಥೆ : ಬಿಜೆಪಿ ಮುಖಂಡ

Kannadaprabha News   | Asianet News
Published : May 27, 2021, 07:48 AM ISTUpdated : May 27, 2021, 08:04 AM IST
ರಾಜ್ಯದಲ್ಲಿ ಬಿಜೆಪಿ ಸರ್ಕಾರ ತಂದಿದ್ದಕ್ಕೆ ವ್ಯಥೆ : ಬಿಜೆಪಿ ಮುಖಂಡ

ಸಾರಾಂಶ

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮುಖಂಡರ ಅಸಮಾಧಾನ ಈ ಸರ್ಕಾರ ಅಧಿಕಾರಕ್ಕೆ  ತಂದಿದ್ದಕ್ಕೆ ವ್ಯಥೆಯಾಗುತ್ತಿದೆ ಎಂದ ಮುಖಂಡ ಜಿಂದಾಲ್‌ ಕಂಪನಿಗೆ ಭೂಮಿ ಮಾರಾಟ ಮಾಡಲು ಮುಂದಾಗಿದ್ದಕ್ಕೆ ತರಾಟೆ

ಮೈಸೂರು (ಮೇ.27): ಜಿಂದಾಲ್‌ ಕಂಪನಿಗೆ ಭೂಮಿ ಮಾರಾಟ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌, ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ ವ್ಯಥೆಯಾಗುತ್ತಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್. ವಿಶ್ವನಾಥ್  ಜಿಂದಾಲ್‌ ಕಂಪನಿಗೆ ಭೂಮಿ ನೀಡುವುದನ್ನು ವಿರೋಧಿಸಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಈ ಹಿಂದೆ ಆಹೋರಾತ್ರಿ ಧರಣಿ ನಡೆಸಿದ್ದರು. 

ಹೆಣದ ಮೇಲೆ ಹಣ ಮಾಡ್ಬೇಡಿ : ವಿಜಯೇಂದ್ರ ವಿರುದ್ಧ ವಿಶ್ವನಾಥ್ ಆಕ್ರೋಶ

ಈಗ ಅವರೇ ಮುಖ್ಯಮಂತ್ರಿಯಾಗಿ ಜಿಂದಾಲ್‌ ಕಂಪನಿಗೆ ಭೂಮಿ ಕೊಡಲು ಮುಂದಾಗಿದ್ದಾರೆ. ಇಂಥ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ ವ್ಯಥೆಯಾಗುತ್ತಿದೆ ಎಂದು ತಿಳಿಸಿದರು.

PREV
click me!

Recommended Stories

ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ