ಹಲ್ಲೆ ಮಾಡುವ ಮತ್ತು ದೌರ್ಜನ್ಯ ಮಾಡುವ ಅಧಿಕಾರ ಯಾರಿಗೂ ಇಲ್ಲ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂಬ ಆಗ್ರಹವನ್ನು ಈಗಾಗಲೇ ಬಿಜೆಪಿ ಮಾಡಿದೆ. ಜಿಲ್ಲಾ ಮಟ್ಟದಲ್ಲಿ ತನಿಖೆ ಮಾಡುವುದಾಗಿ ಎಸ್ಪಿಯವರು ತಿಳಿಸಿದ್ದು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದನ್ನು ಖಂಡಿಸಿದ್ದಾರೆ: ಕೋಟ ಶ್ರೀನಿವಾಸ್ ಪೂಜಾರಿ
ಉಡುಪಿ(ಮೇ.18): ನಳಿನ್ ಕುಮಾರ್ ಕಟೀಲ್, ಸದಾನಂದ ಗೌಡ ಬ್ಯಾನರ್ ಅವರ ಭಾವಚಿತ್ರ ಇರುವ ಶ್ರದ್ದಾಂಜಲಿ ಬ್ಯಾನರ್ ಕಟ್ಟಿ, ಚಪ್ಪಲಿ ಹಾರ ಹಾಕಿದವರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳಬೇಕೆ ಹೊರತು ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ. ಬಿಜೆಪಿ ಇದನ್ನು ಖಂಡಿಸಿದ್ದು, ತನಿಖೆ ಮಾಡಲು ಆಗ್ರಹಿಸಿದೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಇಂದು(ಗುರುವಾರ) ಉಡುಪಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ ಅವರು, ಹಲ್ಲೆ ಮಾಡುವ ಮತ್ತು ದೌರ್ಜನ್ಯ ಮಾಡುವ ಅಧಿಕಾರ ಯಾರಿಗೂ ಇಲ್ಲ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂಬ ಆಗ್ರಹವನ್ನು ಈಗಾಗಲೇ ಬಿಜೆಪಿ ಮಾಡಿದೆ. ಜಿಲ್ಲಾ ಮಟ್ಟದಲ್ಲಿ ತನಿಖೆ ಮಾಡುವುದಾಗಿ ಎಸ್ಪಿಯವರು ತಿಳಿಸಿದ್ದು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇದನ್ನು ಖಂಡಿಸಿದ್ದಾರೆ. ತನಿಖೆ ಮಾಡಬೇಕು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ ಇದಕ್ಕೆ ನಾವು ಬದ್ಧವಾಗಿದ್ದೇವೆ ಎಂದರು.
undefined
ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ, ಇಬ್ಬರು ಅಮಾನತು
ಬಿ.ಎಲ್.ಎಸ್ ವಿರುದ್ಧ ಕಾಂಗ್ರೆಸ್ ಲೇವಡಿ
ಗೆದ್ದ ಮೇಲೆ ಕಾಂಗ್ರೆಸ್ ಬಿಜೆಪಿಯನ್ನು ವ್ಯಂಗ್ಯ ಮಾಡುತ್ತಿದೆ. ಬೂತ್ ಮಟ್ಟದ ಕಾರ್ಯಕರ್ತರ ಅಂಕಿ ಅಂಶವನ್ನು ಇಟ್ಟುಕೊಂಡು ನಾವು ಹೇಳಿದ್ದೆವು. ನಮ್ಮ ನಿರೀಕ್ಷೆಗಳನ್ನು ಮೀರಿ ಗ್ಯಾರಂಟಿ ಕಾರ್ಡ್ ಕೆಲಸ ಮಾಡಿದೆ. ನಾವು ಗೆದ್ದರೆ ಕರೆಂಟ್ ಬಿಲ್ಲನ್ನೇ ಕಟ್ಟಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಡವರು, ದುರ್ಬಲ ವರ್ಗದವರು ಕಾಂಗ್ರೆಸ್ಸಿಗೆ ವೋಟ್ ಹಾಕಿರಬಹುದು.ಎಲ್ಲಿಂದ ಎಲ್ಲಿಗೆ ಯಾವ ಬಸ್ಸಲ್ಲಿ ಬೇಕಾದರೂ ಹೋಗಿ ಎಂದು ಖರ್ಗೆ ಹೇಳಿದ್ದರು. ಕಾಂಗ್ರೆಸ್ ಎಲ್ಲಾ ಗ್ಯಾರಂಟಿಗಳನ್ನು ಉಳಿಸಿಕೊಳ್ಳಬೇಕು. ವೃದ್ಧಾಪ್ಯ ವೇತನ, ವಿಧವಾ ವೇತನ ಎಂದು ಕಾರಣ ಹುಡುಕಲು ಸಾಧ್ಯವಿಲ್ಲ, ಕಾಂಗ್ರೆಸ್ ಆಡಿದ ಮಾತನ್ನು ತಪ್ಪಿದರೆ ಬಿಜೆಪಿ ಜನರ ಪರವಾಗಿ ನಿಲ್ಲುತ್ತದೆ. ಪರಮೇಶ್ವರ್ ತಮ್ಮ ಮಾತಿನ ವರಸೆಗಳನ್ನು ಬದಲಿಸಿದ್ದು, ಸರಕಾರ ಜನಕ್ಕೆ ಕೊಟ್ಟು ಆಶ್ವಾಸನೆ ಗ್ಯಾರಂಟಿ ಉಳಿಸಿಕೊಳ್ಳಲಿ ಎಂದರು.
ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತಪ್ಪಿತಸ್ಥರ ಮೇಲೆ ಕ್ರಮಕ್ಕೆ ನಳಿನ್ ಆಗ್ರಹ
ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ಅಭಿನಂದನೆ ಶುಭಾಶಯಗಳು. ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರಾಜ್ಯದಲ್ಲಿ ನಡೆದಿರುವ ವಿದ್ಯಾಮಾನಗಳು ಆತಂಕ ಹುಟ್ಟಿಸುತ್ತಿವೆ. ಭಟ್ಕಳ ಶಿರಸಿಯಲ್ಲಿ ಪಾಕಿಸ್ತಾನ ಮಾದರಿಯ ಧ್ವಜಗಳು ಹಾರಿಸಿ ಕೇಕೆ ಹಾಕಿದ್ದಾರೆ. ಬೆಳಗಾವಿಯ ಸಂಭ್ರಮೋತ್ಸವದಲ್ಲಿ ಪಾಕಿಸ್ತಾನ ಪರ ಘೋಷಣೆ ಮೊಳಗಿವೆ. ಶಿವಮೊಗ್ಗದಲ್ಲಿ ಬಿಜೆಪಿ ಮತದಾರರು, ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿವೆ. ಇಡೀ ರಾಜ್ಯದಲ್ಲಿ ಇಂತಹ
ವಿದ್ಯಮಾನಗಳು ಖಂಡನೀಯ
ರಾಷ್ಟ್ರ ವಿರೋಧಿ ಕೃತ್ಯ ಮಾಡುವವರಿಗೆ ಸಿಗುತ್ತಿರುವ ಪ್ರೋತ್ಸಾಹ ಆತಂಕಕಾರಿ ಬೆಳವಣಿಯಾಗಿದೆ. ವಿಪಕ್ಷ ಸ್ಥಾನದಲ್ಲಿ ನಿಂತು ಬಿಜೆಪಿ ಇದನ್ನು ಗಂಭೀರವಾಗಿ ನೋಡುತ್ತಿದೆ. ಕರ್ನಾಟಕವನ್ನು ಪಶ್ಚಿಮ ಬಂಗಾಳ, ಕೇರಳ ಮಾಡಿದರೆ ನಾವು ಸಹಿಸಲ್ಲ, ಬಿಜೆಪಿ ಇದಕ್ಕೆ ಪ್ರತಿರೋಧ ಮಾಡುವ ಜನಪರ ಹೋರಾಟ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಜಾರಿಗೆ ತರಬೇಕು ರಾಷ್ಟ್ರ ವಿರೋಧಿಗಳ ವಿರುದ್ಧ ಕ್ರಮ ಆಗಬೇಕು. ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.