
ವಿಜಯಪುರ: ಕರ್ನಾಟಕದಲ್ಲಿನ ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸರ್ಕಸ್ ಕಂಪನಿಯಾಗಿದ್ದು, ರಾಜ್ಯದಲ್ಲಿ ಇನ್ನೂ ಸರ್ಕಾರ ಟೇಕಾಫ್ ಆಗಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಸಚಿವರು ನಿದ್ದೆ ಮಾಡುತ್ತಿದ್ದಾರೆ. ಅಧಿಕಾರಕ್ಕಾಗಿ ಪರಸ್ಪರ ಕಚ್ಚಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್.ವಿಶ್ವನಾಥ್, ಕುಮಾರಸ್ವಾಮಿ ವಿರುದ್ಧ ಡಿಕೆಶಿ, ಬೆಳಗಾವಿಯಲ್ಲಿ ಪಕ್ಷದಲ್ಲಿ ಅಧಿಕಾರಕ್ಕಾಗಿ ದೊಡ್ಡಮಟ್ಟದ ಕಿತ್ತಾಟ ನಡೆದಿದೆ. ಇದು ಒಂದು ಸರ್ಕಸ್ ಕಂಪನಿಯಾಗಿದೆ ಎಂದು ವ್ಯಂಗ್ಯವಾಡಿದರು.
ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದ್ದು ರೈತರು, ಸಾರ್ವಜನಿಕರು ಸಂಕಷ್ಟದಲ್ಲಿದ್ದಾರೆ. ಆದರೆ ಇನ್ನೂ ಬರ ಘೋಷಣೆ ಮಾಡಿಲ್ಲ. ರೈತರ ಸಾಲ ಮನ್ನಾ ವಿಷಯವೂ ಗೊಂದಲದಲ್ಲೇ ಇದೆ. ಸಿಎಂ ಕುಮಾರಸ್ವಾಮಿ ಕರ್ನಾಟಕದ ಸಿಎಂ ಅಲ್ಲ, ಗೊಂದಲಾಪುರ ಸಿಎಂ ಎಂದು ಎಚ್‌ಡಿಕೆ ವಿರುದ್ದ ವಾಗ್ದಾಳಿ ನಡೆಸಿದರು.