ಆದೇಶ ಧಿಕ್ಕರಿಸಿದ ಆರೋಪ : ಬಿಜೆಪಿ ಮುಖಂಡರ ಪದಚ್ಯುತಿ

By Sujatha NRFirst Published Aug 25, 2020, 2:02 PM IST
Highlights

ಪಕ್ಷದ ಆದೇಶ ಧಿಕ್ಕರಿಸಿದ ಆರೋಪದ ಅಡಿಯಲ್ಲಿ  ಮುಖಂಡರನ್ನು ಪದಚ್ಯುತಿಗೊಳಿಸಲಾಗಿದೆ. ಬೇರೆ ಪಕ್ಷದ ಅಭ್ಯರ್ಥಿಗೆ  ಅವಕಾಶ ನೀಡಿದ ಆರೋಪದ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಮಂಡ್ಯ (ಆ.25): ಶ್ರೀರಂಗಪಟ್ಟಣ ಮತ್ತು ನಾಗಮಂಗಲ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಧಿಕ್ಕರಿಸಿ ಬೇರೆ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡಲು ನಿರ್ದೇಶನ ನೀಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಮಂಡಲ ಅಧ್ಯಕ್ಷರನ್ನು ಪದಚ್ಯುತಿಗೊಳಿಸಲಾಗಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ ವಿಜಯಕುಮಾರ್, ನಾಗಮಂಗಲ ಎಪಿಎಂಸಿ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಧಿಕ್ಕರಿಸಿ ಬೇರೆ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡುವಂತೆ ನಿರ್ದೇಶನ ನೀಡಿದ ಬಿಜೆಇ ಜಿಲ್ಲಾ ಉಪಾಧ್ಯಕ್ಷರಾಗಿದ್ದ ನರಸಿಂಹಮೂರ್ತಿ ಅವರನ್ನು ಪದಚ್ಯುತಿಗೊಳಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೊರೋನಾ ಸೋಂಕು!...

ಶ್ರೀರಂಗಪಟ್ಟಣ ಎಪಿಎಂಸಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಂಡಲ ಅಧ್ಯಕ್ಷರಾಗಿದ್ದ ಎಟಿ ಜಯಕುಮಾರ್ ಪಕ್ಷದ ನಾಮನಿರ್ದೇಶಿತ ಸದಸ್ಯರಿಗೆ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಮತದಾನ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಮಂಡಲ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲಾಗಿದೆ.

ಶಿರಾ ವಿಧಾನಸಭಾ ಉಪಚುನಾವಣೆಗೆ ಕಮಲ ಪಡೆಯಲ್ಲಿ ಭರ್ಜರಿ ತಯಾರಿ, ಯಾರಿಗೆ ಸಿಗುತ್ತೆ ಟಿಕೆಟ್?.

ಅಲ್ಲದೇ ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿದ್ದ ಸತೀಶ್ ಕೆಂಪೇಗೌಡ, ಬಿ.ಸುಶೀಲಾ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

click me!