ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ 20 ಮುಖಂಡರು

Kannadaprabha News   | Asianet News
Published : Dec 14, 2020, 11:11 AM ISTUpdated : Dec 14, 2020, 11:33 AM IST
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ 20 ಮುಖಂಡರು

ಸಾರಾಂಶ

ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡ ಬೆನ್ನಲ್ಲೇ  ಹಲವು ಮುಖಂಡರು ಪಕ್ಷಾಂತರ ಮಾಡುತ್ತಿದ್ದರು. ಸುಮಾರು 20 ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. 

ಪಾವಗಡ (ಡಿ.14):  ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಎಚ್‌.ವಿ. ವೆಂಕಟೇಶ್‌ ಅವರ ನೇತೃತ್ವದಲ್ಲಿ   ತಾಲೂಕಿನ ಮರಿದಾಸನಹಳ್ಳಿ ಹಾಗೂ ಕತಿಕ್ಯಾತನಹಳ್ಳಿಯ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಕಾಂಗ್ರೆಸ್‌ ಮುಖಂಡ ಟಿ.ಪಿ.ಹನುಮಂತರಾಯಪ್ಪ ಮಾತನಾಡಿ, ಶಾಸಕ ವೆಂಕಟರಮಣಪ್ಪ ಅವರ ಪಾರದರ್ಶಕ ಆಡಳಿತ ಮತ್ತು ಅಭಿವೃದ್ಧಿ ಹಾಗೂ ಅಧ್ಯಕ್ಷ ಎಚ್‌.ವಿ.ವೆಂಕಟೇಶ್‌ ಅವರ ನಾಯಕತ್ವದ ಹಿನ್ನೆಲೆಯಲ್ಲಿ ತಾಲೂಕಿನ ಮರಿದಾಸನಹಳ್ಳಿ ಗ್ರಾಮದ ಮಾಜಿ ಗ್ರಾಪಂ ಸದಸ್ಯ ಈಶ್ವರ(ರಾಮಾಚಾರಿ)ಎಂ.ಎಸ್‌.ರಂಗನಾಥ್‌, ಜಿ.ಬಿ.ಹನುಮಂತರಾಯಪ್ಪ(ಗುಡಿಬಂಡೆ) ಹಾಗೂ ಕತಿಕ್ಯಾತನಹಳ್ಳಿಯ ಮುಖಂಡರಾದ ಮುರ್ಕಣಪ್ಪ ಸಿದ್ದೇಶಪ್ಪ ಓಬಣ್ಣ ರಂಗನಾಥಪ್ಪ, ಹನುಮಂತರಾಯಪ್ಪ, ಗೋವಿಂದಪ್ಪ ಸೇರಿದಂತೆ 20 ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ ಎಂದರು.

ಕಾಂಗ್ರೆಸ್‌ನಿಂದ ಕೆಟ್ಟೆ ಎಂದು ಎಚ್‌ಡಿಕೆಗೆ ಸಿಟಿ ರವಿ ಸಲಹೆ ಜತೆಗೆ ಕಿವಿಮಾತು..! .

ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ವೆಂಕಟೇಶ್‌ ಮಾತನಾಡಿ, ಪಕ್ಷದ ತತ್ವ ಸಿದ್ಧಾಂತಗಳ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದು ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉತ್ತಮ ಸ್ಥಾನಮಾನ ಕಲ್ಪಿಸುವ ಭರವಸೆ ವ್ಯಕ್ತಪಡಿಸಿದರು.

ಇದೇ ವೇಳೆ ತಾಲೂಕು ಕಾಂಗ್ರೆಸ್‌ ಮುಖಂಡ ಈರಕ್ಯಾತಪ್ಪ, ಮಾಜಿ ಗ್ರಾಪಂ ಅಧ್ಯಕ್ಷ ಜಗನ್ನಾಥ್‌, ಹನುಮಂತರಾಯಪ್ಪ ಇತರೆ ಹಲವಾರು ಮಂದಿ ಉಪಸ್ಥಿತರಿದ್ದರು.

PREV
click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ