ಬಿಜೆಪಿ ತೊರೆದು ಕೈ ಹಿಡಿಯುತ್ತಿರುವ ಪತಿ - ಪತ್ನಿ

By Kannadaprabha News  |  First Published Oct 12, 2023, 10:00 AM IST

ಮುಂಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಆಕಾಂಕ್ಷಿಯಾಗಿರುವ ಡಿ.ಟಿ. ಶ್ರೀನಿವಾಸ್ ಅವರು 20ರಂದು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತಿದ್ದು, ಅವರೊಂದಿಗೆ ನಾನು ಸಹ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಮಾಜಿ ಶಾಸಕಿ ಪೂರ್ಣಿಮ ಶ್ರೀನಿವಾಸ್ ತಿಳಿಸಿದ್ದಾರೆ.


 ತುಮಕೂರು :  ಮುಂಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಆಕಾಂಕ್ಷಿಯಾಗಿರುವ ಡಿ.ಟಿ. ಶ್ರೀನಿವಾಸ್ ಅವರು 20ರಂದು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತಿದ್ದು, ಅವರೊಂದಿಗೆ ನಾನು ಸಹ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಮಾಜಿ ಶಾಸಕಿ ಪೂರ್ಣಿಮ ಶ್ರೀನಿವಾಸ್ ತಿಳಿಸಿದ್ದಾರೆ.

ಪತಿಯೊಂದಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಚಾರ ಸಭೆಯಲ್ಲಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೇ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷಕ್ಕೆ ನಮ್ಮನ್ನು ಆಹ್ವಾನಿಸಿದ್ದರು. ನಾನು, ಪ್ರತಿನಿಧಿಸಿದ ಕ್ಷೇತ್ರವನ್ನು ಬಿಡಬಾರದು ಎಂಬ ಕಾರಣಕ್ಕೆ ಹಿರಿಯೂರಿನಿಂದಲೇ ಸ್ಪರ್ಧೆಗೆ ಇಳಿದಿದ್ದೆ. ಅನಿವಾರ್ಯ ಕಾರಣಗಳಿಂದ ಸೋಲು ಕಾಣಬೇಕಾಯಿತು. ಅಂತಿಮವಾಗಿ 20ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದರು.

Tap to resize

Latest Videos

ಬಿಜೆಪಿ ಪಕ್ಷದ ನಾನುಯಾಗಿ ಆಯ್ಕೆಯಾಗಿದ್ದ ಹಿರಿಯೂರು ಕ್ಷೇತ್ರಕ್ಕೆ ನೀಡುವ ಅನುದಾನದಲ್ಲಿ ಯಾವುದೇ ಕೊರತೆ ಮಾಡಿರಲಿಲ್ಲ. ಆದರೆ, ಗೊಲ್ಲ ಸಮುದಾಯಕ್ಕೆ ನೀಡಬೇಕಾದ ಸವಲತ್ತುಗಳಲ್ಲಿ ಸಾಕಷ್ಟು ಹಿಂದೇಟು ಹಾಕಿತ್ತು. 2020ರ ಶಿರಾ ಉಪಚುನಾವಣೆ ಸಮಯದಲ್ಲಿ ತರಾತುರಿಯಲ್ಲಿ ಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಿ, ತದನಂತರ ಕಾಡುಗೊಲ್ಲ ಅಭಿವೃದ್ಧಿ ನಿಗಮ ಎಂದು ಹೆಸರು ಬದಲಾಯಿಸಿ, ಸಾಕಷ್ಟು ಗೊಂದಲಗಳನ್ನು ಮಾಡಿತ್ತು ಎಂದು ದೂರಿದರು.

2023ರಲ್ಲಿ ನಡೆದ ವಿಧಾನ ಸಭಾ ಚುನಾವಣೆ ಇನ್ನೂ ಒಂದೂವರೆ ತಿಂಗಳು ಇದೇ ಎನ್ನುವಾಗ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ನೇಮಕ ಮಾಡಿ, ಅನುದಾನ ನೀಡಿ, ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಅವಕಾಶವಿಲ್ಲದಂತೆ ಮಾಡಿದರು. ಇದು ನಮಗೆ ಬೇಸರ ತರಿಸಿದೆ. ನಾನು, ಕೂಡ ಒಂದು ಸಮುದಾಯವನ್ನು ಪ್ರತಿನಿಧಿಸುವ ವ್ಯಕ್ತಿಯಾಗಿ, ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕಾಗಿದೆ ಎಂದು ಪೂರ್ಣೀಮಾ ಶ್ರೀನಿವಾಸ್ ನುಡಿದರು.

ಪ್ರವರ್ಗ 1ರ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಡಿ.ಟಿ. ಶ್ರೀನಿವಾಸ್ ಮಾತನಾಡಿ, ಪ್ರವರ್ಗ 1ರ ಅಡಿಯಲ್ಲಿ ಬರುವ 95 ಅತಿ ಹಿಂದುಳಿದ ಜಾತಿಗಳಿವೆ. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿವೆ. ಅವುಗಳಿಗೆ ನೀಡುತ್ತಿದ್ದ ಶೈಕ್ಷಣಿಕ ಸವಲತ್ತು ಹಿಂಪಡೆ ಯಲಾಗಿದೆ. ಹತ್ತಾರು ಬಾರಿ ಸಂಬಂಧಪಟ್ಟ ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರೂ ಸ್ಪಂದಿಸಲಿಲ್ಲ. ರಾಜ್ಯದ 36 ತಾಲೂಕುಗಳಲ್ಲಿ ಹಿಂದುಳಿದ ವರ್ಗದ ಹಾಸ್ಟೆಲ್ ಕಟ್ಟಡಗಳಿಗೆ ಅನುದಾನವಿಲ್ಲದೆ ಅರ್ಧಕ್ಕೆ ನಿಂತಿವೆ. ಜನರ ಬಳಿ ಯಾವ ಮುಖ ಇಟ್ಟುಕೊಂಡು ಹೋಗಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಪ್ರಣಾಳಿಕೆಯಲ್ಲಿ ಈ ವಿಷಯ ಇದೆ. ಹಾಗಾಗಿ, ಸಮುದಾಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದರು.

ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ 44 ತಾಲೂಕುಗಳ ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತಿದ್ದೇನೆ. ಎಲ್ಲಾ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಶಿಕ್ಷಕ ವಲಯದಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಅತಿ ಕಡಿಮೆ ಅಂತರದಿಂದ ಸೋಲು ಕಂಡಿದ್ದರಿಂದ ಅನುಕಂಪವಿದೆ. ಅದು ನನಗೆ ಸಹಕಾರಿಯಾಗಲಿದೆ ಎಂದರು.

ಈ ವೇಳೆ ಮುಖಂಡರಾದ ಚಂಗಾವರ ಮಾರಣ್ಣ ಸೇರಿ ಹಲವರು ಉಪಸ್ಥಿತರಿದ್ದರು.

click me!