
ಕಲಬುರಗಿ(ಮೇ.09): ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಪ್ರಚಾರದ ವೇಳೆ ಸಕ್ರಿಯರಾಗಿದ್ದ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮುಡ ಅವರಿಗೆ ಎರಡನೇ ಬಾರಿ ಕೋವಿಡ್ ದೃಢಪಟ್ಟಿದೆ. ಇವರೊಂದಿಗೆ ಪತ್ನಿ ಜಯಶ್ರೀ ಮುತ್ತಿಮುಡ, ಪುತ್ರಿ ಆಕಾಂಕ್ಷಾ ಅವರಿಗೂ ಸೋಂಕು ತಗಲಿದ್ದು, ಎಲ್ಲರೂ ಹೋಂ ಕ್ವಾರೆಂಟೈನ್ ಆಗಿದ್ದಾರೆ.
ಉಪಚುನಾವಣೆ ಪ್ರಚಾರ ಕಾರ್ಯದ ಬಳಿಕ 15 ದಿನದ ಹಿಂದೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಕೊಂಡಾಗ ಪಾಸಿಟಿವ್ ದೃಢಪಟ್ಟಿದ್ದರಿಂದ ಹೈದ್ರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಇದೀಗ ಗುರುವಾರ ಮತ್ತೆ ಕೊರೋನಾ ಪರೀಕ್ಷೆ ಮಾಡಿಕೊಂಡಾಗಲೂ ಅವರಿಗೆ ಪಾಸಿಟಿವ್ ಆಗಿದೆ.
"
ಕೊರೋನಾ ವಿರುದ್ಧ ಹೋರಾಟ: ಬೋಯಿಂಗ್ ಇಂಡಿಯಾದಿಂದ ಬೆಂಗ್ಳೂರು, ಕಲಬುರಗಿಯಲ್ಲಿ ಆಸ್ಪತ್ರೆ
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona