ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ: ಸಿ.ಟಿ.ರವಿ

By Girish Goudar  |  First Published Jan 26, 2023, 11:53 AM IST

ಈ ಹಿಂದೆ ಪದ್ಮಶ್ರೀ ಪ್ರಶಸ್ತಿಗೆ ದೊಡ್ಡ ಲಾಭಿ ನಡೆಯುತ್ತಿತ್ತು. ಈಗ ಜನರ ಭಾವನೆಯಿಂದ ಹೆಸರುವಾಸಿಯಾಗಿರುವವರಿಗೆ ಪ್ರಶಸ್ತಿ ಸಿಕ್ಕಿದೆ. ಎಲೆಮರೆಕಾಯಿಯಾಗಿ ಕೆಲಸ ಮಾಡುತ್ತಿರುವವರಿಗೆ ಪ್ರಶಸ್ತಿ ಹುಡುಕಿಕೊಂಡು ಬರ್ತಿವೆ: ಸಿ.ಟಿ.ರವಿ 


ಚಿಕ್ಕಮಗಳೂರು(ಜ.26):  ಮೋದಿ ಬಂದ ಮೇಲೆ ಪದ್ಮಶ್ರೀ ಪ್ರಶಸ್ತಿ ಹಿರಿಮೆ-ಗರಿಮೆ ಹೆಚ್ಚಾಗಿದೆ. ಈಗ ಪದ್ಮಶ್ರೀ ಪ್ರಶಸ್ತಿ ಪೀಪಲ್ ಪ್ರಶಸ್ತಿಯಾಗಿದೆ. ಈ ಹಿಂದೆ ಪದ್ಮಶ್ರೀ ಪ್ರಶಸ್ತಿಗೆ ದೊಡ್ಡ ಲಾಭಿ ನಡೆಯುತ್ತಿತ್ತು. ಈಗ ಜನರ ಭಾವನೆಯಿಂದ ಹೆಸರುವಾಸಿಯಾಗಿರುವವರಿಗೆ ಪ್ರಶಸ್ತಿ ಸಿಕ್ಕಿದೆ. ಎಲೆಮರೆಕಾಯಿಯಾಗಿ ಕೆಲಸ ಮಾಡುತ್ತಿರುವವರಿಗೆ ಪ್ರಶಸ್ತಿ ಹುಡುಕಿಕೊಂಡು ಬರ್ತಿವೆ ಅಂತ ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ.

ಇಂದು(ಗುರುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಎಂಟು ಗಣ್ಯರಿಗೆ ಪದ್ಮಶ್ರೀ ಲಭಿಸಿದೆ, ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಮುತ್ಸದ್ದಿ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಗೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜಣರಾಗಿದ್ದಾರೆ ಅಂತ ಹೇಳಿದ್ದಾರೆ. 

Tap to resize

Latest Videos

Padma Awards 2023: ಎಸ್‌ಎಂ ಕೃಷ್ಣಗೆ ಪದ್ಮವಿಭೂಷಣ, ಎಸ್‌ಎಲ್‌ ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ ಗೌರವ!

ಅಹಂಕಾರದ ಅವಶೇಷವೂ ಇಲ್ಲದೆ, ಶ್ರೀಮಂತಿಕೆಯನ್ನ ಸೇವೆಗೆ ಉಪಯೋಗಿಸಿದವರು ಸುಧಾಮೂರ್ತಿಯವರು, ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆ ಆದ ಚಾಪು‌ಮೂಡಿಸಿದವರು ಎಸ್.ಎಲ್.ಭೈರಪ್ಪನವರು ಅಂತ ತಿಳಿಸಿದ್ದಾರೆ. 

click me!