BSY ಬದಲಾವಣೆ ವಿಚಾರ : ಕೇಂದ್ರಕ್ಕೆ ಬಿಟ್ಟಿದ್ದು ಎಂದ ಶಾಸಕ ಕುಮಾರ್ ಬಂಗಾರಪ್ಪ

Kannadaprabha News   | Asianet News
Published : Feb 01, 2021, 04:06 PM IST
BSY ಬದಲಾವಣೆ ವಿಚಾರ : ಕೇಂದ್ರಕ್ಕೆ ಬಿಟ್ಟಿದ್ದು ಎಂದ ಶಾಸಕ ಕುಮಾರ್ ಬಂಗಾರಪ್ಪ

ಸಾರಾಂಶ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಸುದ್ದಿಯಾಗುತ್ತಿದೆ. ಯುಗಾದಿ ನಂತರ ಸಿಎಂ ಬದಲಾಗುತ್ತಾರೆ ಎನ್ನುವ ಹೇಳಿಕೆ ಸಂಬಂಧ ಶಾಸಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. 

ಬಂಟ್ವಾಳ(ಫೆ.01): ಯಾರೋ ಒಬ್ರು ಹೇಳಿಕೆ ನೀಡಿದರೂ ಅಂತ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋಲ್ಲ ಎಂದು ಬಿಜೆಪಿ ಶಾಸಕ ಕುಮಾರ್‌ ಬಂಗಾರಪ್ಪ ಹೇಳಿದ್ದಾರೆ.

ಬಂಟ್ವಾಳ ಹೊಕ್ಕಾಡಿಗೋಳಿಯಲ್ಲಿ ಕಂಬಳ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಪೂರ್ಣಾವಧಿ ಯಡಿಯೂರಪ್ಪನವರೇ ಆಗಿರುತ್ತಾರೆ. ಈ ನಿರ್ಧಾರ ಕೇಂದ್ರದ್ದು. ಯತ್ನಾಳ್‌ ಈ ರೀತಿಯ ಗೊಂದಲಗಳನ್ನು ಮಾಡುವುದು ಸೂಕ್ತ ಅಲ್ಲ ಎಂದು ಹೇಳಿದರು.

ಸಿಎಂ ಬದಲಾವಣೆ ವಿಚಾರ : ಮುಂದಿನ ದಿನದಲ್ಲಿ ಎಲ್ಲಾ ಸರಿಯಾಗುತ್ತೆಂದ ಸವದಿ .

ಈಗಾಗಲೇ ಯತ್ನಾಳ್‌ ಅವರಿಗೆ ಕೇಂದ್ರ ಎಚ್ಚರಿಕೆ ಕೂಡ ನೀಡಿದೆ. ಪಕ್ಷದ ವಿರುದ್ಧ ಬೇಕಾಬಿಟ್ಟಿಹೇಳಿಕೆ ನೀಡುವುದು ಸರಿಯಲ್ಲ. ಕೇಂದ್ರ ಈ ಬಗ್ಗೆ ಶಿಸ್ತು ಕ್ರಮ ತೆಗೆದುಕೊಳ್ಳಲಿದೆ ಎಂದರು.

ಸಿಎಂ ಬದಲಾವಣೆ ವಿಚಾರವಾಗಿ ಯತ್ನಾಳ್ ನೀಡಿದ ಹೇಳಿಕೆ ಸಂಬಂಧ ಈಗಾಗಲೇ ಸಚಿವರು ಅನೇಕ ಬಿಜೆಪಿ ಮುಖಂಡರು ಪ್ರತಿಕ್ರಿಯಿಸಿದ್ದು, ಮುಂದಿನ ಎರಡೂವರೆ ವರ್ಷವೂ ಬಿ ಎಸ್‌ ವೈ ಸಿಎಂ ಆಗಿ ಮುಂದುವರಿಯುತ್ತಾರೆಂದು ಹೇಳಿದ್ದಾರೆ. 

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು