ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಶಾಸಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿದರು. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ವರದಿ: ವರದರಾಜ್, ದಾವಣಗೆರೆ
ದಾವಣಗೆರೆ (ಮೇ.28): ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಶಾಸಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಚಾಲನೆ ನೀಡಿದರು. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಎತ್ತಿನ ಗಾಡಿಯಲ್ಲಿ ಗ್ರಾಮದ ತುಂಬಾ ಶಾಸಕರು ಸೇರಿದಂತೆ ಡಿಸಿ, ಸಿಇಓ ಅಧಿಕಾರಿಗಳನ್ನು ಕೂರಿಸಿಕೊಂಡು ಮೆರವಣಿಗೆ ಮಾಡಿದ ಗ್ರಾಮೀಣ ದರ್ಶನ ಮಾಡಿದರು.
ಸರ್ಕಾರದ ಯೋಜನೆಗಳನ್ನು ಯಾವುದೇ ಅಡೆತಡೆಗಳಿಲ್ಲದೆ ನೇರವಾಗಿ ಜನರ ಮನೆ ಬಾಗಿಲಿಗೆ ತಲುಪಿಸುವ ಸದುದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಶುಕ್ರವಾರ ಕಂದಾಯ ಇಲಾಖೆ, ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ, ಯರಗನಾಳು, ಗುಡ್ಡೇಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮಸ್ಥರಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಬಸ್ ಚಾಲನೆ ಮಾಡಿಕೊಂಡು ಬಂದ ರೇಣುಕಾಚಾರ್ಯ
ಜನರ ಸೇವೆ ಮಾಡುವ ಮೂಲಕ ಸರ್ಕಾರ ಮತ್ತು ಅಧಿಕಾರಿಗಳಿಗೆ ಉತ್ತಮ ಹೆಸರು ತಂದುಕೊಡುವ ಕಾರ್ಯಕ್ರಮ ಇದಾಗಿದೆ. ಜನರ ಸೇವೆ ಮಾಡಲು ಇಡೀ ಜಿಲ್ಲಾಡಳಿತದ ತಂಡ ಸದಾಕಾಲ ಸಿದ್ಧವಾಗಿದೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸಲು ಯಾವುದೇ ಹಸ್ತಕ್ಷೇಪವಿಲ್ಲದೆ ಪ್ರೋತ್ಸಾಹಿಸುತ್ತಾರೆ ಎಂದು ಹೇಳಿದರು. ಹೊನ್ನಾಳಿ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿಸಿದ್ದಾರೆ.
ಚೆಕ್ ಡ್ಯಾಂಗಳಿಗೆ, ಕೆರೆಕಟ್ಟೆ ನಿರ್ಮಿಸಲು 125 ಕೋಟಿ ಬಿಡುಗಡೆ ಮಾಡಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿದೆ. ಸದ್ಯದಲ್ಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಅದೇ ರೀತಿ 127 ಶಾಲಾ ಕೊಠಡಿಗಳನ್ನು ಮಂಜೂರು ಮಾಡಿಸಿದ್ದು ಸದ್ಯದಲ್ಲೇ ಕೆಲಸ ಆರಂಭಗೊಳ್ಳಲಿದೆ ಎಂದರು. ವಸತಿ ಸಚಿವರ ಬಳಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿಗೆ ಹೊಸದಾಗಿ 2100 ಮನೆಗಳನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದು ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡಿದ ಶಾಸಕ ರೇಣುಕಾಚಾರ್ಯ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಆರು ಜನ ಮಹಿಳೆಯರಿಗೆ ಸೀಮಂತ ಕಾರ್ಯ ಮಾಡಿದರು. ಯಾವುದೇ ಸಂಕೋಚವಿಲ್ಲದೇ ಶಾಸಕ ಗರ್ಭಿಣಿಯರಿಗೆ ಆರತಿ ಮಾಡಿ ಶುಭ ಹಾರೈಸಿದರು. ಶಾಸಕರ ಕಾರ್ಯಕ್ಕೆ ಮಹಿಳೆಯರು ಅವರ ಕುಟುಂಬದ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.
Davanagere: ಹೊನ್ನಾಳಿ ಶಾಸಕ ರೇಣುಕಾಚಾರ್ಯರಿಗೆ ಗೃಹ ಕಂಟಕ: ಎಂಎಲ್ಎಗೆ ವಂಚಿತರಿಂದ ಹಿಡಿಶಾಪ
ಹೊನ್ನಾಳಿ ಶಾಸಕರ ಹಣೆಗೆ ವಿಭೂತಿ ಹಚ್ಚಿದ ಡಿಸಿ: ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸ್ವಲ್ಪ ವಿಭೂತಿ ಪ್ರಿಯರು. ಅವರ ಹಣೆ ಮೇಲೆ ಬೆಳಿಗ್ಗೆ ಸಂಜೆ ವಿಭೂತಿ ಇದ್ದೆ ಇರುತ್ತೆ. ಇಂದಿನ ಕಾರ್ಯಕ್ರಮದಲ್ಲಿ ಸ್ವತಃ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ರೇಣುಕಾಚಾರ್ಯ ಹಣೆಗೆ ಸಾರ್ವಜನಿಕವಾಗಿ ಎರಡು ಬಾರಿ ವಿಭೂತಿ ಹಚ್ಚಿದ್ದಾರೆ. ಶಾಸಕ ರೇಣುಕಾಚಾರ್ಯ ವಿಭೂತಿಯನ್ನು ನಗು ನಗುತ್ತಲೇ ಸ್ವಾಗಿತಿಸಿದ್ದಾರೆ.