ವಿಕಸಿತ ಪ್ರಗತಿಶೀಲ ಭಾರತದ ಬಜೆಟ್‌: ರಮೇಶ ಜಾರಕಿಹೊಳಿ

By Kannadaprabha News  |  First Published Feb 2, 2024, 10:00 PM IST

ಮುಂದಿನ 5 ವರ್ಷಗಳಲ್ಲಿ 2 ಕೋಟಿ ಮನೆಗಳನ್ನು ಬಡವರಿಗೆ ಒದಗಿಸುವ ಗುರಿ ಮೋದಿ ಸರ್ಕಾರದ ಗ್ಯಾರಂಟಿ. ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ. ಬಜೆಟ್‌ ಶ್ರೀಸಾಮಾನ್ಯರ ಪರವಾಗಿದೆ: ಶಾಸಕ ರಮೇಶ ಜಾರಕಿಹೊಳಿ 


ಗೋಕಾಕ(ಫೆ.02): ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ವಿಕಸಿತ ಪ್ರಗತಿಶೀಲ ಭಾರತದ ಬಜೆಟ್‌ ಆಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಗುರುವಾರ ಪತ್ರಿಕಾ ಪ್ರಕಟನೆ ಹೊರಡಿಸಿದ ಅವರು, ಮುಂದಿನ 5 ವರ್ಷಗಳಲ್ಲಿ 2 ಕೋಟಿ ಮನೆಗಳನ್ನು ಬಡವರಿಗೆ ಒದಗಿಸುವ ಗುರಿ ಮೋದಿ ಸರ್ಕಾರದ ಗ್ಯಾರಂಟಿ. ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ. ಬಜೆಟ್‌ ಶ್ರೀಸಾಮಾನ್ಯರ ಪರವಾಗಿದೆ. ಪ್ರಧಾನಿ ಮೋದಿಯವರು ಈ ವರೆಗೆ ನಡೆದು ಬಂದ ಹಾದಿ ಬಡತನ ನಿರ್ಮೂಲನೆ, ಸುಧಾರಣೆ, ಅಭಿವೃದ್ಧಿ ಹಾಗೂ ಆರ್ಥಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುತ್ತ ಬಂದಿದ್ದಾರೆ. 

Tap to resize

Latest Videos

ಬರ ನಿರ್ವಹಣೆ ಅಗತ್ಯ ಸಿದ್ಧತೆಗೆ ಸೂಚನೆ: ಸಚಿವ ಕೃಷ್ಣ ಭೈರೇಗೌಡ

ಕೃಷಿ, ಕೈಗಾರಿಕೆ, ಉದ್ಯೋಗ, ಪ್ರವಾಸೋದ್ಯಮ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ವಿಕಸಿತ ಭಾರತದ ಕನಸನ್ನು ಸಾಕಾರಗೊಳಿಸುವ ಮಹತ್ವಾಕಾಂಕ್ಷೆಯ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ.

click me!