ಇದು ದೇಶದ ಭರವಸೆಯ ಬಜೆಟ್ ಆಗಿದ್ದು, ಬಿಜೆಪಿ ಸರ್ಕಾರದ ಮುಖ್ಯ ಗುರಿಯೇ ದೇಶದ ಮೂಲಭೂತ ಸೌಕರ್ಯದ ಅಭಿವೃದ್ಧಿ. ಪಿಎಂ ಆವಾಸ್ ಯೋಜನೆಯಡಿ ಮುಂದಿನ 5 ವರ್ಷಗಳಲ್ಲಿ 3 ಕೋಟಿ ಮನೆ ನಿರ್ಮಾಣದ ಗುರಿಯನ್ನು ಹಾಕಿಕೊಂಡಿದ್ದು, ಬಡವರ ಸ್ವಂತ ಸೂರಿನ ಕನಸು ನನಸಾಗಲಿದೆ. ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೂ ಆಯುಷ್ಮಾನ್ ಯೋಜನೆ ವಿಸ್ತರಣೆ ಮಾಡಲಾಗಿದೆ. ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಈ ಹಿಂದಿನ ಸ್ಥಿತಿಯನ್ನೇ ಅನುಸರಿಸಿದ್ದು ಮಧ್ಯಮ ವರ್ಗಕ್ಕೆ ಅನುಕೂಲಕರವಾಗಲಿದೆ: ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು(ಫೆ.02): ದೇಶ ಚುನಾವಣೆಯ ಹೊಸ್ತಿಲಲ್ಲಿದ್ದರೂ ಯಾವುದೇ ಓಲೈಕೆಯ ಘೋಷಣೆಗಳಿಲ್ಲದ, ಭವ್ಯ ಭಾರತದ ಭವಿಷ್ಯದ ದೃಷ್ಟಿಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರದ ಮಧ್ಯಂತರ ಬಜೆಟ್ ಭಾರತವೀಗ ಸ್ವಾವಲಂಬಿ ಹಾಗೂ ಹೊಸ ದಿಕ್ಕಿನತ್ತ ಸಾಗುತ್ತಿರುವುದರ ಸಂಕೇತ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.
ಇದು ದೇಶದ ಭರವಸೆಯ ಬಜೆಟ್ ಆಗಿದ್ದು, ಬಿಜೆಪಿ ಸರ್ಕಾರದ ಮುಖ್ಯ ಗುರಿಯೇ ದೇಶದ ಮೂಲಭೂತ ಸೌಕರ್ಯದ ಅಭಿವೃದ್ಧಿ. ಪಿಎಂ ಆವಾಸ್ ಯೋಜನೆಯಡಿ ಮುಂದಿನ 5 ವರ್ಷಗಳಲ್ಲಿ 3 ಕೋಟಿ ಮನೆ ನಿರ್ಮಾಣದ ಗುರಿಯನ್ನು ಹಾಕಿಕೊಂಡಿದ್ದು, ಬಡವರ ಸ್ವಂತ ಸೂರಿನ ಕನಸು ನನಸಾಗಲಿದೆ. ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೂ ಆಯುಷ್ಮಾನ್ ಯೋಜನೆ ವಿಸ್ತರಣೆ ಮಾಡಲಾಗಿದೆ. ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಮಾಡದೆ ಈ ಹಿಂದಿನ ಸ್ಥಿತಿಯನ್ನೇ ಅನುಸರಿಸಿದ್ದು ಮಧ್ಯಮ ವರ್ಗಕ್ಕೆ ಅನುಕೂಲಕರವಾಗಲಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ದಕ್ಕದ ನಿಗಮ ಮಂಡಳಿ ಸ್ಥಾನಮಾನ: ಕಾರ್ಯಕರ್ತರಲ್ಲಿ ಭಾರೀ ನಿರಾಸೆ
ಪಿಎಂ ಗತಿಶಕ್ತಿ ಮೂಲಕ ಮೂರು ಪ್ರಮುಖ ರೈಲ್ವೆ ಕಾರಿಡಾರ್‌ಗಳ ನಿರ್ಮಾಣದ ಗುರಿ, ದೇಶದ ಎಲ್ಲ ನಗರಗಳಿಗೂ ಮೆಟ್ರೋ ಯೋಜನೆಗಳನ್ನು ವಿಸ್ತರಿಸುವ ಯೋಜನೆ, ಪ್ರವಾಸೋದ್ಯಮ ವಲಯಕ್ಕೆ ಹೆಚ್ಚಿನ ಉತ್ತೇಜನ, ಒಂದು ಕೋಟಿ ಮನೆಗಳ ಮೇಲೆ ಸೋಲಾರ್ ಅಳವಡಿಕೆ, ರಸ್ತೆ-ರೈಲು-ಬಂದರುಗಳ ಕಾರಿಡಾರ್ ನಿರ್ಮಾಣ, ಡೈರಿಗಳಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ನಡಿ ಪ್ರೋತ್ಸಾಹ ಹೀಗೆ ಮಹಿಳೆಯರು, ರೈತರು, ಯುವ ಜನಾಂಗ ಸೇರಿದಂತೆ ಎಲ್ಲ ವರ್ಗದ ಜನರನ್ನೂ ಈ ಮಧ್ಯಂತರ ಬಜೆಟ್‌ನಲ್ಲಿ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಕಾಮತ್ ಹೇಳಿದ್ದಾರೆ.