ಜನತಾ ಕರ್ಫ್ಯೂನಿಂದ ಉಪಯೋಗವಿಲ್ಲ, ಸಂಪೂರ್ಣ ಲಾಕ್‌ಡೌನ್ ಮಾಡಿ: ಹೆಚ್. ವಿಶ್ವನಾಥ್

By Suvarna News  |  First Published May 1, 2021, 3:52 PM IST

ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳು, ಮದ್ಯ ಕೊಳ್ಳಲು ಅವಕಾಶ ನೀಡಲಾಗಿದೆ| ಇದರಿಂದ ಜನರು ಗುಂಪು ಗುಂಪಾಗಿ ಹೊರ ಬರುತ್ತಿದ್ದಾರೆ| ಇದು ಕೊರೊನಾ ಹರಡಲು ಕಾರಣ| ಕೊರೋನಾ ಕಡಿವಾಣ ಹಾಕಲು ರಾಜ್ಯ ಸಂಪೂರ್ಣ ಲಾಕ್‌ಡೌನ್‌ ಆಗಲೇಬೇಕು: ವಿಶ್ವನಾಥ್| 


ಮೈಸೂರು(ಮೇ.01): ಅರ್ಧ ಲಾಕ್‌ಡೌನ್ ಮಾಡಿರುವುದರಿಂದ ಕೊರೋನಾ ಕಂಟ್ರೋಲ್ ಮಾಡಲು ಆಗೋದಿಲ್ಲ. ದಿನದಿಂದ ದಿನಕ್ಕೆ ‌ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ತಡೆಗಟ್ಟುವ ಬದಲು ಮತ್ತಷ್ಟು ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣವಾಗಿ ಲಾಕ್‌ಡೌನ್ ಮಾಡಿ ಅಂತ ಸರ್ಕಾರಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಒತ್ತಾಯಿಸಿದ್ದಾರೆ.

ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳು, ಮದ್ಯ ಕೊಳ್ಳಲು ಅವಕಾಶ ನೀಡಲಾಗಿದೆ. ಇದರಿಂದ ಜನರು ಗುಂಪು ಗುಂಪಾಗಿ ಹೊರ ಬರುತ್ತಿದ್ದಾರೆ. ಇದು ಕೊರೊನಾ ಹರಡಲು ಕಾರಣವಾಗುತ್ತಿದೆ. ಕೊರೋನಾ ಕಡಿವಾಣ ಹಾಕಲು ರಾಜ್ಯ ಸಂಪೂರ್ಣ ಲಾಕ್‌ಡೌನ್‌ ಆಗಲೇಬೇಕು ಎಂದು ಹೇಳಿದ್ದಾರೆ.

Latest Videos

"

ಸರ್ಕಾರ ಹಾಗೂ ಸಚಿವರ ವಿರುದ್ಧ ಎಚ್. ವಿಶ್ವನಾಥ್ ಆಕ್ರೋಶ

ಲಾಕ್‌ಡೌನ್‌ ಆದರೆ ರೋಗಿಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನ ಮಾಡಿಕೊಂಡು ಕಂಟ್ರೋಲ್ ಮಾಡಬಹುದು‌. ಭಾರತದ ಕೊರೋಸನಾ ಪರಿಸ್ಥಿತಿಯನ್ನ ವಿದೇಶಿ ಮಧ್ಯಮಗಳು ಅಣಕ ಮಾಡುತ್ತಿವೆ. WHO ಸೇರಿ ವಿವಿಧ ಸಂಸ್ಥೆಗಳು ಭಾರತಕ್ಕೆ ಸಹಾಯ ಮಾಡಲು ಮುಂದೆ ಬಂದಿರೋದು ಸ್ವಾಗತಾರ್ಹವಾದ ವಿಚಾರ‌ವಾಗಿದೆ. ಆದರೆ ಪರಿಸ್ಥಿತಿ ಹೀಗೆ ಬಿಟ್ಟರೆ ಮುಂದೆ ತೊಂದರೆ ಆಗಲಿದೆ‌. ಮುಖ್ಯಮಂತ್ರಿಗಳೇ ಕೂಡಲೇ ಕರ್ನಾಟಕವನ್ನು ಸಂಪೂರ್ಣ ಲಾಕ್‌ಡೌನ್‌ ಮಾಡಿ ಅಂತ ವಿಶ್ವನಾಥ್ ಒತ್ತಾಯಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

click me!