ಕೋವಿಡ್ ವ್ಯಾಕ್ಸಿನ್ ಪಡೆದ ಸಂಸದ ಸಿದ್ದೇಶ್ವರ್

By Kannadaprabha News  |  First Published Mar 2, 2021, 5:54 PM IST

69 ವರ್ಷದ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ ಇಂದು ಕೋವಿಡ್ ವ್ಯಾಕ್ಸಿನ್ ಪಡೆಯುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ. ಅವರ ಪತ್ನಿಯೂ ಕೂಡ ವ್ಯಾಕ್ಸಿನ್ ಪಡೆದರು. 


ದಾವಣಗೆರೆ (ಮಾ.02):  ಪತ್ನಿ ಜೊತೆಗೆ ಸಂಸದ ಜಿಎಂ ಸಿದ್ದೇಶ್ವರ್ ಕೋವೀಡ್ ವ್ಯಾಕ್ಸಿನ್ ಪಡೆದಿದ್ದಾರೆ. ದಾವಣಗೆರೆಯ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಪಡೆದಿದ್ದಾರೆ. 

ಬಿಜೆಪಿ ಸಂಸದ ಸಿದ್ದೇಶ್ವರ್ (69) ಪತ್ನಿ ಗಾಯತ್ರಮ್ಮ (66) ವ್ಯಾಕ್ಸಿನ್ ಪಡೆಯುವ ಮೂಲಕ ಇತರರಿಗೂ ಮಾದರಿಯಾಗಿದ್ದಾರೆ. ಅಲ್ಲದೇ ವ್ಯಾಕ್ಸಿನ್ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. 

Tap to resize

Latest Videos

ಡಾ.ಮೀನಾಕ್ಷೀಯವರಿಂದ ಲಸಿಕೆ‌ ಪಡೆದ ಬಳಿಕ ಮಾತನಾಡಿದ ಸಂಸದ ಜಿ.ಎಂ ಸಿದ್ದೇಶ್ವರ್ ಮೊದಲ ದಿನವೇ ವ್ಯಾಕ್ಸಿನ್ ಪಡೆದುಕೊಳ್ಳುತ್ತಿದ್ದೆ. ಕಾರ್ಯಕ್ರಮಗಳು ನಿಗದಿಯಾದ ಹಿನ್ನಲೆ ಇಂದು ವ್ಯಾಕ್ಸಿನ್ ಪಡೆಯುತ್ತಿದ್ದೇನೆ ಎಂದು ಹೇಳಿದರು. 

ಕೋವಿಡ್ ಲಸಿಕೆ 3ನೇ ಹಂತದ ಅಭಿಯಾನ: ಏಮ್ಸ್‌ನಲ್ಲಿ ಲಸಿಕೆ ಪಡೆದ ಮೋದಿ

ಕೋವಿಡ್  ವ್ಯಾಕ್ಸಿನ್ ಪಡೆದ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ ಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಾಥ್ ನೀಡಿದರು.

ಈಗಾಗಲೇ ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಸಹ ವ್ಯಾಕ್ಸಿನ್ ಪಡೆದಿದ್ದಾರೆ. 

click me!