ಕೊರೋನಾ ಕಾಟ: ಲಾಕ್‌ಡೌನ್‌ನಿಂದ ಪ್ರಯೋಜನವಿಲ್ಲ ಎಂದ ಬಿಜೆಪಿ ಸಂಸದ

Kannadaprabha News   | Asianet News
Published : Apr 18, 2021, 03:07 PM IST
ಕೊರೋನಾ ಕಾಟ: ಲಾಕ್‌ಡೌನ್‌ನಿಂದ ಪ್ರಯೋಜನವಿಲ್ಲ ಎಂದ ಬಿಜೆಪಿ ಸಂಸದ

ಸಾರಾಂಶ

ಲಾಕ್‌ಡೌನ್‌ನಿಂದ ಬಡವರಿಗೆ ತುಂಬಾ ತೊಂದರೆ| ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡಲಾಗಿದೆ. ಅಲ್ಲಿ ಯಾವುದೇ ಪ್ರಯೋಜನವಾಗಿಲ್ಲ| ಲಾಕ್‌ಡೌನ್‌ ಬದಲಿಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಸರ್ಕಾರ ಚಿಂತನೆ ನಡೆಸುವುದು ಹೆಚ್ಚು ಸೂಕ್ತ: ಜಿಗಜಿಣಗಿ| 

ವಿಜಯಪುರ(ಏ.18): ಕೊರೋನಾ ನಿಯಂತ್ರಿಸಲು ಲಾಕ್‌ಡೌನ್‌ಗಿಂತ ಪರ್ಯಾಯ ಮಾರ್ಗ ಕಂಡುಕೊಳ್ಳುವುದೇ ಹೆಚ್ಚು ಉತ್ತಮ. ಲಾಕ್‌ಡೌನ್‌ನಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

ಶನಿವಾರ ವಿಜಯಪುರ ನಗರದ ಹೊರ ವಲಯದ ಬುರಣಾಪುರ ಬಳಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಲಾಕ್‌ಡೌನ್‌ನಿಂದ ಬಡವರಿಗೆ ತುಂಬಾ ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ. 

ರಾಜಧಾನಿಯಲ್ಲಿ ಕೊರೋನಾರ್ಭಟ: ಮತ್ತೆ ಬೆಂಗ್ಳೂರು ತೊರೆಯುತ್ತಿರುವ ಜನ..!

ಮಹಾರಾಷ್ಟ್ರದಲ್ಲಿ ಲಾಕ್‌ಡೌನ್‌ ಮಾಡಲಾಗಿದೆ. ಅಲ್ಲಿ ಯಾವುದೇ ಪ್ರಯೋಜನವಾಗಿಲ್ಲ. ಲಾಕ್‌ಡೌನ್‌ ಬದಲಿಗೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಸರ್ಕಾರ ಚಿಂತನೆ ನಡೆಸುವುದು ಹೆಚ್ಚು ಸೂಕ್ತವಾಗುತ್ತದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ