ಚಿಕ್ಕಮಗಳೂರು: ಸಿ.ಟಿ.ರವಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

Published : May 11, 2023, 12:08 PM IST
ಚಿಕ್ಕಮಗಳೂರು:  ಸಿ.ಟಿ.ರವಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಸಾರಾಂಶ

ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲು. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಮುಂದುವರೆದ ಚಿಕಿತ್ಸೆ. 

ಚಿಕ್ಕಮಗಳೂರು(ಮೇ.11):  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಬುಧವಾರ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ.

ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.

ಸಿ.ಟಿ.ರವಿ ರಾಜಕೀಯ ಜೀವನ ಈ ಎಲೆಕ್ಷನ್‌ನಲ್ಲಿ ಅಂತ್ಯ: ಸಿದ್ದರಾಮಯ್ಯ

ಅನಾರೋಗ್ಯದ ನಡುವೆಯೂ ಚಿಕ್ಕಮಗಳೂರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಿ.ಟಿ. ರವಿ ಚುನಾವಣಾ ಪ್ರಚಾರ ನಡೆಸಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಸಲಾಗುತ್ತಿದೆ. 

PREV
Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!