'ಭಾರತವನ್ನು ಸ್ವಾವಲಂಬಿ ದೇಶವನ್ನಾಗಿಸುವುದೇ ಮೋದಿ ಸರ್ಕಾರದ ಉದ್ದೇಶ'

By Kannadaprabha News  |  First Published Jun 15, 2020, 9:27 AM IST

ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಬಿಜೆಪಿ ಪಣ: ಜೆ.ಪಿ. ನಡ್ಡಾ| ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಮನವಿ|


ಗದಗ(ಜೂ.15): ವಿಶ್ವವ್ಯಾಪಿ ಆತಂಕವಾಗಿರುವ ಕೋವಿಡ್‌ -19 ಸೋಂಕು ಪರಿಸ್ಥಿತಿಯನ್ನು ಒಂದು ಅವಕಾಶವಾಗಿಸಿಕೊಂಡು ಮುಂದಿನ ದಿನಗಳಲ್ಲಿ ಭಾರತವನ್ನು ಆತ್ಮನಿರ್ಭರ, ಸ್ವಾವಲಂಬಿ ದೇಶವಾಗಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೃಢ ನಿರ್ಧಾರದಿಂದ ಅಗತ್ಯದ ಯೋಜನೆಗಳನ್ನು ರೂಪಿಸುತ್ತಿದೆ. ಬಿಜೆಪಿ ಕಾರ್ಯಕರ್ತರು ತಮ್ಮ ವ್ಯಾಪ್ತಿ ಪ್ರದೇಶದ ಜನರಿಗೆ ಈ ಕುರಿತು ಪರಿಣಾಮಕಾರಿ ಮಾಹಿತಿ ನೀಡುವುದಕ್ಕೆ ಮುಂದಾಗಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರೆ ನೀಡಿದರು.

ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ವಾಸ್ತವ ಮಾಹಿತಿ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಕೋವಿಡ್‌ -19 ಸೋಂಕು ನಿಯಂತ್ರಣ ಪರಿಸ್ಥಿತಿ ಹಿನ್ನೆಲೆಯಲ್ಲಿ ತಂತ್ರಜ್ಞಾನ ಉಪಯೋಗಿಸಿ ಜಿಲ್ಲಾ ಮಟ್ಟದ ಕಾರ್ಯಕರ್ತರನ್ನು ತಲುಪುವ ವ್ಯವಸ್ಥೆಯ ಈ ಸಭೆಯಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ ಅವರು ಪಾಲ್ಗೊಂಡಿದ್ದರು.

Latest Videos

undefined

ಮಹಾನಗರಗಳಲ್ಲಿ ವ್ಹೀಲಿಂಗ್‌, ಹಳ್ಳಿ ಭಾಗದಲ್ಲಿ ಒಂದೇ ಬೈಕ್‌ನಲ್ಲಿ ಐವರು ಸಂಚರಿಸುವ ಕ್ರೇಜ್‌..!

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ್‌ ಕಟೀಲ ಅವರು ಭಾಗವಹಿಸಿದ್ದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸತತ ಎರಡನೇ ಅವಧಿಯ ಮೊದಲ ಒಂದು ವರ್ಷದಲ್ಲಿ ಕೇಂದ್ರ ಸರ್ಕಾರ ದೇಶದ ಸಾರ್ವಜನರ ಅಭಿವೃದ್ಧಿಗಾಗಿ ಕೈಕೊಂಡ ಕ್ರಮಗಳ, ಕೋವಿಡ್‌ -19 ಸೋಂಕು ನಿಯಂತ್ರಣ ಕುರಿತು ಕೇಂದ್ರ ಸರ್ಕಾರದ ಪರಿಣಾಮಕಾರಿ ಕ್ರಮ ಮತ್ತು ಭವಿಷ್ಯದಲ್ಲಿ ಭಾರತವನ್ನು ಆತ್ಮನಿರ್ಭರ, ಸ್ವಾವಲಂಬಿ ದೇಶವನ್ನಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಉದ್ದೇಶ ಮತ್ತು ಸಾಧನಗಳ ಕುರಿತು ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಮಾತನಾಡಿದರು. ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಮನವಿ ಮಾಡಿದರು.
 

click me!