ಸಿ.ಎಂ.ಇಬ್ರಾಹಿಂ ವಿರುದ್ಧ ಬಿಜೆಪಿ ಆಕ್ರೋಶ

By Kannadaprabha NewsFirst Published Jan 12, 2023, 5:32 AM IST
Highlights

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಖಾಸಗಿ ಬದುಕಿನ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ಖಂಡಿಸಿ ಭಾರತೀಯ ಜನತಾ ಪಕ್ಷದ ಕಾರ‍್ಯಕರ್ತರು ನಗರದಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು.

 ಮಂಡ್ಯ (ಜ. 12):  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಖಾಸಗಿ ಬದುಕಿನ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ಖಂಡಿಸಿ ಭಾರತೀಯ ಜನತಾ ಪಕ್ಷದ ಕಾರ‍್ಯಕರ್ತರು ನಗರದಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್‌ ವೃತ್ತದಲ್ಲಿ ಸೇರ್ಪಡೆಗೊಂಡ ಕಾರ‍್ಯಕರ್ತರುರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ಧ ಘೋಷಣೆ ಕೂಗಿದರು. ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಇಬ್ರಾಹಿಂ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

Latest Videos

ನಾಥ ಸಂಪ್ರದಾಯದ ಪ್ರಮುಖರೂ ಆದ ಯೋಗಿ ಆದಿತ್ಯನಾಥ್‌ ಅವರು ಕೇವಲ ಗೋರಖ್‌ಪುರದ ಮಠಾಧೀಶರು ಮಾತ್ರವಲ್ಲ, ಕದ್ರಿಯಲ್ಲೂ ನಾಥ ಸಂಪ್ರದಾಯದ ಯೋಗೇಶ್ವರ ಮಠ ಇದೆ. ಆದಿಚುಂಚನಗಿರಿ ಶ್ರೀಕ್ಷೇತ್ರವೂ ಸಹ ನಾಥ ಪರಂಪರೆಯ ಮಠಗಳಲ್ಲೊಂದಾಗಿದೆ. ಯೋಗಿ ಆದಿತ್ಯನಾಥ್‌ ಕದ್ರಿ ಯೋಗೇಶ್ವರ ಮಠದ ರಾಜರ ಆಯ್ಕೆ ಮತ್ತು ಪಟ್ಟಾಭಿಷೇಕ 12 ವರ್ಷಗಳಿಗೊಮ್ಮೆ ವಿಜೃಂಭಣೆಯಿಂದ ನಡೆಯುತ್ತಿದೆ. ಶೃಂಗೇರಿ ಮಠದಲ್ಲಿ ವಿದ್ಯಾಭ್ಯಾಸ ಮಾಡಿರುವ ಸಿ.ಎಂ.ಇಬ್ರಾಹಿಂ ನಾಥ ಪರಂಪರೆಯ ಬಗ್ಗೆ ತಿಳಿದಿದ್ದರೂ ಅವಹೇಳನಕಾರಿಯಾಗಿ ಮಾತನಾಡಿ ಗುರುಪರಂಪರೆಗೆ ಅವಮಾನ ಮಾಡಿದ್ದಾರೆ ಎಂದು ಕಾರ‍್ಯಕರ್ತರು ಕಿಡಿಕಾರಿದರು.

ಆದಿಚುಂಚನಗಿರಿ ಶ್ರೀಮಠದ ಬಗ್ಗೆ ಅಪಾರ ಭಕ್ತಿಯನ್ನು ಇಟ್ಟುಕೊಂಡಂತೆ ನಟಿಸುವ ಜೆಡಿಎಸ್‌ ವರಿಷ್ಠರು, ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರು ಇಂತಹ ಅವಹೇಳನಕಾರಿಯಾಗಿ ಮಾತನಾಡಿದ್ದರೂ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸುವುದನ್ನು ಬಿಟ್ಟು ನಿರ್ಲಕ್ಷ್ಯ ವಹಿಸುವ ಮೂಲಕ ನಾಥ ಪರಂಪರೆಗೆ ಅಪಮಾನ ಮಾಡಿದ್ದಾರೆ. ಶ್ರೀಮಠಕ್ಕೆ ಅಪಮಾನ ಮಾಡಿರುವ ಜೆಡಿಎಸ್‌ಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಜೆಡಿಎಸ್‌ ವರಿಷ್ಠರಿಗೆ ಸ್ವಲ್ಪವಾದರೂ ಗೌರವವಿದ್ದರೆ ತಕ್ಷಣವೇ ಸಿ.ಎಂ. ಇಬ್ರಾಹಿಂ ಅವರನ್ನು ಪದಚ್ಯುತಿಗೊಳಿಸುವಂತೆ ಆಗ್ರಹಿಸಿದರು.

ಸಿ.ಎಂ. ಇಬ್ರಾಹಿಂ ಅವರಿಗೆ ಐವರು ಪತ್ನಿಯರಿದ್ದು, ಈ ಹಿನ್ನೆಲೆಯಲ್ಲಿ ಐದು ಮಂದಿ ಮಹಿಳೆಯರು ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್‌ ಸುರಾನಾ, ರಾಜ್ಯ ವಕ್ತಾರ ಚಂದ್ರಶೇಖರ್‌, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್‌, ಮನ್‌ಮುಲ್‌ ನಿರ್ದೇಶಕಿ ರೂಪಾ, ಮುಖಂಡರಾದ ಡಾ.ಇಂದ್ರೇಶ್‌, ಸಾದೊಳಲು ಸ್ವಾಮಿ, ಮಳವಳ್ಳಿ ಮುನಿರಾಜು, ಮಲ್ಲಿಕಾರ್ಜುನ್‌ (ಫೈಟರ್‌ ರವಿ), ಎಚ್‌.ಆರ್‌.ಅರವಿಂದ್‌, ಅಶೋಕ್‌ ಜಯರಾಂ, ಹೆಚ್‌.ಪಿ.ಮಹೇಶ್‌, ಸಿ.ಟಿ.ಮಂಜುನಾಥ್‌, ಚಂದಗಾಲು ಶಿವಣ್ಣ, ವಿದ್ಯಾ ನಾಗೇಂದ್ರ, ಪ.ನ.ಸುರೇಶ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕಾರ‍್ಯಕರ್ತರು ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಾನು ಜೆಡಿಎಸ್ ಬಿಡುವುದಿಲ್ಲ

  ಮಾಗಡಿ :  ಯಾವುದೇ ಕಾರಣಕ್ಕೂ ಜೆಡಿಎಸ್‌ ಪಕ್ಷವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪೂಜಾರಿ ಪಾಳ್ಯ ಕೆ.ಕೃಷ್ಣಮೂರ್ತಿ ಸ್ಪಷ್ಟನೆ ನೀಡಿದರು.

ಪಟ್ಟಣದ ತಿರುಮಲೆ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ  ಹೇಮಾ ಮಂಜುನಾಥ್‌ ರವರ ಜೊತೆ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನುದಲ್ಲಿ ತಲೆ ಮಾಡಿಕೊಂಡು ರಾಜಕಾರಣ ಮಾಡಿಕೊಂಡು ಬಂದಿಲ್ಲ . ನನ್ನ ಸ್ವಂತ ಹಣವನ್ನು ರಾಜಕೀಯದಲ್ಲಿ ಖರ್ಚು ಮಾಡಿ ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದೇನೆ. ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಆಗುವುದಿಲ್ಲ ಎಂದರು.

ಕೆಲವರು ಒಂದು ಕೋಟಿ, ಎರಡು ಕೋಟಿ ಕೊಟ್ಟು ನನ್ನನ್ನು ಖರೀದಿ ಮಾಡಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿ​ದ್ದಾರೆ. ನಾನು ತಲೆ ಮಾರಿಕೊಂಡು ರಾಜಕೀಯ ಮಾಡುವ ಅವಶ್ಯಕತೆ ನನಗಿಲ್ಲ. ಕಾಂಗ್ರೆಸ… ಮತ್ತು ಬಿಜೆಪಿಯವರು ಪಕ್ಷಕ್ಕೆ ಸೇರಿ ಎಂದು ಹಲವು ಮುಖಂಡರು ಭೇಟಿಯಾಗಿದ್ದರು .

ಜೆಡಿ​ಎಸ್‌ನಲ್ಲಿ ನನಗೆ ಯಾವುದೇ ತೊಂದರೆ ಆಗಿಲ್ಲ. ನನಗೆ ಉನ್ನತ ಅಧಿಕಾರವನ್ನೇ ಕೊಟ್ಟಿದ್ದಾರೆ. ನಾನು ಮತ್ತು ಶಾಸಕ ಎ. ಮಂಜುನಾಥ್‌ ರವರು ಸಹೋದರರ ರೀತಿ ಇದ್ದು ಪಂಚರತ್ನ ಕಾರ್ಯಕ್ರಮವನ್ನು ಮಾಗಡಿಯಲ್ಲಿ ಯಶಸ್ವಿಯಾಗಿ ನಡೆ​ಸಿ​ದ್ದೇವೆ. ಅದೇ ರೀತಿ ಮುಂಬರುವ ಚುನಾವಣೆಯಲ್ಲಿ ಶಾಸಕ ಎ. ಮಂಜುನಾಥ್‌ ರವರ ಗೆಲುವಿಗೆ ಶ್ರಮಿ​ಸು​ತ್ತೇವೆ ಎಂದು ಹೇಳಿ​ದರು.

ಶಾಸಕ ಎ ಮಂಜುನಾಥ… ಮಾತನಾಡಿ, ನಮ್ಮ ಪಕ್ಷದ ಹಿರಿಯ ನಾಯಕರಾಗಿರುವ ಪೂಜಾರಿ ಪಾಳ್ಯ ಕೃಷ್ಣಮೂರ್ತಿ ಅವರು ಯಾವ ಕಾರಣಕ್ಕೆ ಪಕ್ಷವನ್ನು ಬಿಡುತ್ತಾರೆ . ಇವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ನಾನು ಬಾಲಕೃಷ್ಣರವರಿಗೆ ಸವಾಲು ಹಾಕುತ್ತೇನೆ. ನಾನು ಕಾಂಗ್ರೆಸ್‌ ನವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದರೆ ಒಂದು ಕಡೆಯಿಂದ ಗುಡಿಸಿಕೊಂಡು ಬರುತ್ತೇನೆ ಎಂದು ಸವಾಲು ಹಾಕಿದರು.

click me!