ರಾಜ್ಯದಲ್ಲಿ ಹೊಸ ಸಿಎಂ ಬಂದರೂ ಸರ್ಕಾರ ಉಳಿಯಲ್ಲ: ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ

Published : May 28, 2026, 05:23 PM IST
BY Vijayendra

ಸಾರಾಂಶ

ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕವಾಗಿದ್ದು, ಅವಧಿ ಪೂರ್ವ ಚುನಾವಣೆ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

ಶಿವಮೊಗ್ಗ (ಮೇ.28): ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕವಾಗಿದ್ದು, ಅವಧಿ ಪೂರ್ವ ಚುನಾವಣೆ ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷದಲ್ಲಿ ಉತ್ತಮ ಆಡಳಿತ ಕೊಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲವಾಗಿದ್ದಾರೆ. ನಿನ್ನೆ ದೆಹಲಿಯಲ್ಲಿ 5 ಗಂಟೆಗಳ ಕಾಲ ಮ್ಯಾರಥಾನ್ ಸಭೆ ನಡೆಸಿ, ಸಿಎಂ ರಾಜೀನಾಮೆ ತೆಗೆದುಕೊಳ್ಳುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಿದೆ ಎಂದರು.

ಸಿದ್ದರಾಮಯ್ಯ ಇವತ್ತು ಅಥವಾ ನಾಳೆ ರಾಜೀನಾಮೆ ಕೊಟ್ಟು ಯಾರು ಸಿಎಂ ಆಗ್ತಾರೆ ಅನ್ನೋದು ಮುಖ್ಯ ಅಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ವೈಯಕ್ತಿಕ ದ್ವೇಷವೇನೂ ಇಲ್ಲ. ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಮುಖ್ಯವಲ್ಲ. ಸಿದ್ದರಾಮಯ್ಯ 10 ಲಕ್ಷ ಕೋಟಿ ರು. ಸಾಲ ಮಾಡಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಅದನ್ನು ಮತ್ತೆ ಹಳಿಗೆ ತರುವ ಬಹುದೊಡ್ಡ ಸವಾಲು ಮುಂದೆ ಬರುವವರಿಗೆ ಎದುರಾಗಲಿದೆ ಎಂದು ಹೇಳಿದರು.

ಈ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿಯೇ ಉಪ ಚುನಾವಣೆಯಲ್ಲಿ ಗೆದ್ದರೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ವ್ಯಂಗ್ಯವಾಡಿದರು. ಆಂತರಿಕ ಕಚ್ಚಾಟದಿಂದ ಆಡಳಿತ ಸಂಪೂರ್ಣ ಕುಸಿದಿತ್ತು. ಒಟ್ಟಾರೆ ಪರಿಣಾಮ ದೇಶದಲ್ಲಿ ಕಾಂಗ್ರೆಸ್ ಕೊನೆದಿನಗಳನ್ನು ನೋಡುತ್ತಿದೆ. ರಾಜ್ಯದಲ್ಲೂ ಕಾಂಗ್ರೆಸ್ ಅವನತಿಯತ್ತ ಹೋಗುತ್ತಿರುವ ಮುನ್ಸೂಚನೆ ಎಂದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ನಡೆದಿದೆ. ರಾಜ್ಯದ ಇತಿಹಾಸದಲ್ಲಿ ಅಧಿಕಾರಿಗಳು ಆತ್ಮ*ಹ*ತ್ಯೆ ಮಾಡಿಕೊಂಡಿದ್ದು ಇದ್ರೇ ಅದು ಸಿದ್ದರಾಮಯ್ಯ ಸರ್ಕಾರದಲ್ಲಿ. ಇದು ಜನ ವಿರೋಧಿ ಸರ್ಕಾರ ಎಂದು ಟೀಕಿಸಿದರು.

ಮೋದಿ ಸಾರ್ವಕಾಲಿಕ ದಾಖಲೆ

ಸತತ 12 ವರ್ಷ ಆಡಳಿತ ನಡೆಸಿದ ಏಕೈಕ ಚುನಾಯಿತ ಪ್ರಧಾನಿ ಎಂಬ ಶ್ರೇಯ ಈಗ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಅವರು ಸಾರ್ವಕಾಲಿಕ ದಾಖಲೆ ಬರೆದಿದ್ದಾರೆ. ಪ್ರಧಾನಿ ಆಗಿ ಆರಂಭದಲ್ಲಿ ಸವಾಲುಗಳ ಎದುರಿಸಿದ ನರೇಂದ್ರ ಮೋದಿ, ನಂತರ ಯಾವುದೇ ಹಗರಣಗಳು ಇಲ್ಲದೇ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದಾರೆ. ಇದು ಶ್ಲಾಘನೀಯ ಎಂದರು.

PREV
Read more Articles on
click me!

Recommended Stories

ಬೆಂಗಳೂರಿನ ಪ್ರಸಿದ್ಧ ಸ್ಟಾರ್ಟಪ್ ಕಂಪೆನಿ ಸಂಸ್ಥಾಪಕನಿಗೆ ಸಿಂಗಾಪುರ ಕೋರ್ಟಿಂದ 6 ತಿಂಗಳು ಜೈಲು, 90,000 ಡಾಲರ್ ದಂಡ!
ಇದ್ದರೆಷ್ಟು, ಹೋದರೆಷ್ಟು? ಹಲ್​ಚಲ್ ಸೃಷ್ಟಿಸಿದ ಎಂ.ಬಿ.ಪಾಟೀಲ್ ​ ಟ್ವೀಟ್, ಯಾರಿಗೆ ಟಾಂಟ್​ ಕೊಟ್ರು ಸಚಿವರು?