ಮಾಜಿ ಶಾಸಕರ ಜೇಬಿಗೆ ಕೈಹಾಕಿ ನೋಟಿನ ಕಂತೆ ಕದ್ದ ಕಳ್ಳ: ಮಠದೊಳಗೆ ಬಿತ್ತು ಧರ್ಮದೇಟು

By Sathish Kumar KH  |  First Published Nov 12, 2023, 7:52 PM IST

ತುರುವೇಕೆರೆ ಮಾಜಿ ಶಾಸಕ ಮಸಾಲೆ ಜಯರಾಮ್‌ ಅವರ ಜೇಬಿಗೆ ಕೈ ಹಾಕಿ ನೋಟಿನ ಕಂತೆಯನ್ನು ಕದ್ದ ಕಳ್ಳನಿಗೆ ಧರ್ಮದೇಟು ಕೊಟ್ಟ ಪ್ರಸಂಗ ನಡೆದಿದೆ.


ತುಮಕೂರು (ನ.12): ತುಮಕೂರು ನಗರದಲ್ಲಿರುವ ಸಿದ್ದಗಂಗಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಂದಿದ್ದ ತುರುವೇಕೆರೆ ಮಾಜಿ ಶಾಸಕ ಮಸಾಲೆ ಜಯರಾಮ್‌ ಅವರ ಜೇಬಿಗೆ ಕೈ ಹಾಕಿ ನೋಟಿನ ಕಂತೆಯನ್ನು ಕದ್ದ ಕಳ್ಳನಿಗೆ ಮಠದಲ್ಲಿಯೇ ಧರ್ಮದೇಟು ಕೊಟ್ಟ ಪ್ರಸಂಗ ಭಾನುವಾರ ಬೆಳಗ್ಗೆ ನಡೆದಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಶಾಸಕ ಬಿ.ವೈ. ವಿಜಯೇಂದ್ರ ಅವರು ಮೊದಲ ಬಾರಿಗೆ ಲಿಂಗಾಯತ ಪರಂಪರೆಯ ಮಠವಾದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆಯಲು ಆಗಮಿಸುತ್ತಿದ್ದರು. ಈ ವೇಳೆ ತುಮಕೂರು ಜಿಲ್ಲೆಯ ತುರುವೇಕೆರೆ ವಿಧಾನಸಭಾಕ್ಷೇತ್ರದ ಮಾಜಿ ಶಾಸಕ ಮಸಾಲೆ ಜಯರಾಮ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಸ್ವಾಗತಿಸಲು ಮಠದ ಆವರಣಕ್ಕೆ ಬಂದಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದ್ದುದನ್ನೇ ಬಂಡವಾಳ ಮಾಡಿಕೊಂಡ ಕಳ್ಳ ಮಾಜಿ ಶಾಸಕರ ಜೇಬಿಗೇ ಕತ್ತರಿ ಹಾಕಿದ್ದಾನೆ. ಕೂಡಲೇ ಕಳ್ಳನ ಕೈಚಳಕದ ಬಗ್ಗೆ ತಮ್ಮ ಗಮನಕ್ಕೆ ಬಂದಿದ್ದು ಕಳ್ಳ... ಕಳ್ಳ.. ಎಂದು ಕೂಗಿದಾಕ್ಷಣ ಅಕ್ಕ-ಪಕ್ಕದಲ್ಲಿದ್ದವರು ಕಳ್ಳನನ್ನು ಹಿಡಿದು ಆತನು ಕದ್ದಿದ್ದ ಹಣವನ್ನು ಕಿತ್ತುಕೊಂಡು ನಂತರ ಆತನಿಗೆ ಧರ್ಮದೇಟು ನೀಡಿದ್ದಾರೆ.

Tap to resize

Latest Videos

undefined

ಆಂತರಿಕ ಕಚ್ಚಾಟದಿಂದಲೇ ಸಿಎಂ ಸಿದ್ದರಾಮಯ್ಯ ಅಧಿಕಾರ ತ್ಯಾಗ ಮಾಡ್ತಾರೆ: ಕಾಲಜ್ಞಾನಿ ಕೊಡೇಕಲ್‌ ಬಸವಣ್ಣ ಭವಿಷ್ಯ!

ಈ ಘಟನೆ ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಠಕ್ಕೆ ಭೇಟಿ ನೀಡಿ ವಾಪಾಸ್ ಹೋಗುತ್ತಿರುವಾಗ ಘಟನೆ ನಡೆದಿದೆ. ಈ ಚಾಲಾಕಿ ಕಳ್ಳ ಹೋಗಿಬಂದು ಮಾಜಿ ಶಾಸಕರ ಕಿಸೆಯಲ್ಲಿದ್ದ ಹಣವನ್ನೇ ಎಗರಿಸಿದ್ದಾನೆ. ಹೀಗೆ ಪಿಕ್ ಪಾಕೆಟ್ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಜೇಬಿಗೆ ಕೈ ಹಾಕಿ ಕಂತೆ ಹಣ ಎತ್ತುತ್ತಿರುವಾಗಲೇ ಸಿಕ್ಕಿ ಬಿದ್ದಿದ್ದು, ಆತನನ್ನು ಹಿಡಿದು ಗೂಸಾ ಕೊಟ್ಟಿದ್ದಾರೆ. ನಂತರ, ಸ್ಥಳೀಯರು ಆ ಕಳ್ಳನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪಕ್ಷದ ಆಂತರಿಕ ಕಚ್ಚಾಟದಿಂದ ಸಿಎಂ ಸಿದ್ದರಾಮಯ್ಯ ಪದತ್ಯಾಗ: 
ಯಾದಗಿರಿ (ನ.12): ರಾಜ್ಯ ರಾಜಕಾರಣದ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದಿರುವ ಯಾದಗಿರಿ ಜಿಲ್ಲೆಯ ಕಾಲಜ್ಞಾನಿ ಕೊಡೇಕಲ್‌ ಬಸವಣ್ಣ ಅವರು ಎಲ್ಲ ಪಕ್ಷಗಳಲ್ಲೂ ಆಂತರಿಕ ಕಚ್ಚಾಟ ಶುರುವಾಗಲಿದೆ. ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅಧಿಕಾರ ತ್ಯಾಗ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ದೀಪಾವಳಿ ಹಬ್ಬದಂದು ಯಾದಗರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದ ಕಾಲಜ್ಞಾನಿ ಬಸವಣ್ಣ ಅವರು ರಾಜ್ಯ ರಾಜಕಾರಣ ಮತ್ತು ಸರ್ಕಾರದ ಬಗ್ಗೆ ನುಡಿದಿರುವ ಭವಿಷ್ಯ ಎಲ್ಲರಿಗೂ ಅಚ್ಚರಿ ತಂದಿದೆ. ರಾಜ್ಯದ ಎಲ್ಲಾ ಪಕ್ಷಗಳಲ್ಲೂ ಆಂತರಿಕ ಕಚ್ಚಾಟ ಆರಂಭವಾಗಿದೆ. ಕೂಡಲೇ ತಮ್ಮ ತಮ್ಮ ಪಕ್ಷಗಳಲ್ಲಿನ ಗೊಂದಲಗಳನ್ನು ಸರಿಪಡಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ಕಂಟಕವಾಗಲಿದೆ. ಒಂದು ವೇಳೆ ಎಲ್ಲರೂ ವಿಶ್ವಾಸದಿಂದ ಹೋಗದಿದ್ದರೆ ಅಧಿಕಾರ ತ್ಯಾಗ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನದ 2.25 ಲಕ್ಷ ಟಿಕೆಟ್‌ ಕೇವಲ 20 ನಿಮಿಷದಲ್ಲಿ ಸೋಲ್ಡ್‌ಔಟ್‌!

ಪಕ್ಷದಲ್ಲಿನ ಆಂತರಿಕ ಕಚ್ಚಾಟದಿಂದ ಇಂಡಿ ಮೈತ್ರಿ ಒಕ್ಕೂಟದಲ್ಲೂ ಗೊಂದಲ ಸೃಷ್ಟಿಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಇಂಡಿ ಒಕ್ಕೂಟದಿಂದ ಹಲವರು ಹೊರಬರಬಹುದು. ಹಲವು ಪಕ್ಷಗಳು ಇಂಡಿ ಒಕ್ಕೂಟವನ್ನು ಸೇರಿ ಅಧಿಕಾರ ಪಡೆಯಲು ಯತ್ನ ಮಾಡುತ್ತಿವೆ. ಹಲವರು ಸೇರಿ ಅಧಿಕಾರ ಪಡೆಯಲು ಮುಂದಾಗಿರುವವರು ಸಹ ಎಚ್ಚರಿಕೆ ಹೆಜ್ಜೆ ಇಡಬೇಕು. ಇಲ್ಲದಿದ್ದರೆ ಅವರವರೇ ಘಾತಕತನ (ಮೋಸ) ಮಾಡುತ್ತಾರೆ. ರಾಜಕೀಯದಲ್ಲಿ ಮುಂದಿನ ದಿ‌ನಗಳಲ್ಲಿ ಯಾರನ್ನು ನಂಬದಂತಹ ದಿನಮಾನಗಳು ನಡೆಯುತ್ತವೆ ಎಂಬ ಸುಳಿವನ್ನು ನೀಡಿದ್ದಾರೆ. 

click me!