ಕಲಬುರಗಿ: ಕುಟುಂಬ ಸಮೇತ ನಟ ಜಗ್ಗೇಶ್‌ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ

Published : Jul 16, 2024, 05:16 PM ISTUpdated : Jul 16, 2024, 05:37 PM IST
ಕಲಬುರಗಿ: ಕುಟುಂಬ ಸಮೇತ ನಟ ಜಗ್ಗೇಶ್‌ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ

ಸಾರಾಂಶ

ಗಾಣಗಾಪೂರ ಅಭಿವೃದ್ಧಿ ಕುರಿತು ಸರ್ಕಾರ ಬೇಜವಾಬ್ದಾರಿತನ ತೋರಿಸುತ್ತಿದೆ. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು ಈ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಆಗಬೇಕಾಗಿತ್ತು. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ ಆಗಲಿ. ಪ್ರಾಧಿಕಾರ ರಚನೆ ಮಾಡುವ ಕುರಿತು ಒಂದು ನಿಯೋಗ ಬೆಂಗಳೂರಿಗೆ ಬರಲಿ, ನಾನು ಅವರೊಂದಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ ಎಂದ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್‌ 

ಕಲಬುರಗಿ(ಜು.16):  ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನಲ್ಲಿರುವ ಸುಕ್ಷೇತ್ರ ದೇವಲ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್‌ ಪತ್ನಿ ಪರಿಮಳ ಹಾಗೂ ಕುಟುಂಬದವರು ಇಂದು(ಮಂಗಳವಾರ) ಭೇಟಿ ನೀಡಿದ್ದಾರೆ. 

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಗ್ಗೇಶ್‌ ಅವರು, ನಮ್ಮ ಕುಟುಂಬದವರು ಸುಕ್ಷೇತ್ರ ದೇವಲ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ವೈಯಕ್ತಿಕ ಕಾರಣಗಳಿಂದ ಭೇಟಿ ನೀಡಿದ್ದಾಗಿ ತಿಳಿಸಿದ್ದಾರೆ. 

ಚಿತ್ರರಂಗದವರಲ್ಲಿ ಶಿಸ್ತು ಕಮ್ಮಿಯಾಗಿದೆ, ದರ್ಶನ್‌ ಪ್ರಕರಣದ ಬಗ್ಗೆ ಮಾತನಾಡಲ್ಲ: ನಟ ಜಗ್ಗೇಶ್

ಗಾಣಗಾಪೂರ ಅಭಿವೃದ್ಧಿ ಕುರಿತು ಸರ್ಕಾರ ಬೇಜವಾಬ್ದಾರಿತನ ತೋರಿಸುತ್ತಿದೆ. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು ಈ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಆಗಬೇಕಾಗಿತ್ತು. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ ಆಗಲಿ. ಪ್ರಾಧಿಕಾರ ರಚನೆ ಮಾಡುವ ಕುರಿತು ಒಂದು ನಿಯೋಗ ಬೆಂಗಳೂರಿಗೆ ಬರಲಿ, ನಾನು ಅವರೊಂದಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್‌ ತಿಳಿಸಿದ್ದಾರೆ.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ