2023ಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯೋಜನೆಗಳೇ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆ. ಗ್ರಾಮೀಣ ಭಾಗದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕಿದೆ ಎಂದು ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಕರೆ ನೀಡಿದರು.
ಕೊರಟಗೆರೆ : 2023ಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯೋಜನೆಗಳೇ ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆ. ಗ್ರಾಮೀಣ ಭಾಗದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕಿದೆ ಎಂದು ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಕರೆ ನೀಡಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದ ಚಿಕ್ಕತೊಟ್ಲು ಕೆರೆ ಹೋಬಳಿ ಕೋರಾ ಗ್ರಾಮದಲ್ಲಿ ಮಂಡಲದ ಯುವಮೋರ್ಚಾ ಕಾರ್ಯಕರ್ತರ ಸಭೆಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಕೊರಟಗೆರೆ ಬಿಜೆಪಿ ಮಂಡಲದ ಅಧ್ಯಕ್ಷ ಪವನಕುಮಾರ್ ಮಾತನಾಡಿ, ಕೊರಟಗೆರೆ ಕ್ಷೇತ್ರದ 242 ಬೂತ್ ಸಮಿತಿ ಶಕ್ತಿಕೇಂದ್ರದ ಕಾರ್ಯಕರ್ತರ ತಂಡ ಸದೃಢವಾಗಿದೆ. ನಮ್ಮ ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ನಿಜವಾದ ಶಕ್ತಿ. 2023ರ ಕೊರಟಗೆರೆ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಹಗಲುರಾತ್ರಿ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಕೊರಟಗೆರೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಬಿ.ಎಚ್.ಅನಿಲ್‌ಕುಮಾರ್ ಮಾತನಾಡಿ, ಕೊರಟಗೆರೆ ಕ್ಷೇತ್ರದ ಗ್ರಾಮೀಣ ಭಾಗದ ಯುವಜನತೆಯ ಬೆಂಬಲ ಬಿಜೆಪಿ ಪಕ್ಷದ ಪರವಾಗಿದೆ. 2023ಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನಡುಕ ಶುರುವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೊರಟಗೆರೆ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಗುರುದತ್, ಕೋರಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ, ಮಹಿಳಾಮೋರ್ಚಾ ಪ್ರಧಾನ ಕಾರ್ಯದರ್ಶಿ ದಯಾಮಣಿ, ಮುಖಂಡರಾದ ಹನುಮಂತರಾಜು, ವೆಂಕಟಾಚಲಯ್ಯ, ಶಿವಣ್ಣ, ಶ್ರೀಧರ್, ಅರುಣ್‌ಕುಮಾರ್, ದಾಸಾಲುಕುಂಟೆ ರಘು, ಡಮರುಗ ಉಮೇಶ್, ರಮೇಶ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
ಕೊರಟಗೆರೆ ಶಾಸಕ ಮತ್ತು ಕಾಂಗ್ರೆಸ್ ಪಕ್ಷ ಒಳಮೀಸಲಾತಿ ಕಾಯ್ದೆಯನ್ನು ವಿರೋಧ ಮಾಡಿದೆ. ಕಾಂಗ್ರೆಸ್ ಪಕ್ಷ ಜನರಿಗೆ ಭರವಸೆ ನಿಡೋದಕ್ಕೆ ಮಾತ್ರ ಸಿಮೀತ. ಪರಿಶಿಷ್ಟಜಾತಿ ಮತ್ತು ಪಂಗಡಕ್ಕೆ ಮೀಸಲಾತಿಯ ಹೆಚ್ಚಳ ಮಾಡಿದ್ದು ಬಿಜೆಪಿ ಸರ್ಕಾರ. ಕೇಂದ್ರ ಮತ್ತು ರಾಜ್ಯದಲ್ಲಿ ನುಡಿದಂತೆ ನಡೆದಿರುವ ಬಿಜೆಪಿ ಪಕ್ಷ ನಮ್ಮದಾಗಿದೆ.
ಬಿ.ಎಚ್.ಅನಿಲ್‌ಕುಮಾರ್ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ, ಕೊರಟಗೆರೆ
ಬಿಜೆಪಿಯಿಂದ ಬೆದರಿಕೆ ಕುತಂತ್ರ
ಮೈಸೂರು : ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವ ಕೆಂದ್ರ ಬಿಜೆಪಿ ಸರ್ಕಾರದ ನಿರ್ಧಾರವು ವಿರೋಧ ಪಕ್ಷಗಳನ್ನು ಬೆದರಿಸುವ ಕುತಂತ್ರ ಎಂದು ಎಐಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾಡಿಸೋಜಾ ಆರೋಪಿಸಿದರು.
ಮೈಸೂರಿನ ವಿಂಡ್ ಫ್ಲವರ್ ರೆಸಾರ್ಚ್‌ನಲ್ಲಿ ಶನಿವಾರ ನಡೆದ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಜನರಿಗೆ ನೆರವಾಗದೇ, ಕರ್ಪೊರೇಟ್‌ಗಳಿಗೆ ನೆರವಾಗುತ್ತಿದೆ. ಅಲ್ಲದೆ, ಸರ್ವಾಧಿಕಾರಿ ಧೋರಣೆ ಹೊಂದಿದೆ ಎಂದು ದೂರಿದರು.
ಅದಾನಿ ಸಮೂಹ ಭ್ರಷ್ಟಾಚಾರ ಕುರಿತು ಹಿಂಡನ್‌ಬಗ್‌ರ್ ಆರೋಪವನ್ನು ಜಂಟಿ ಪಾರ್ಲಿಮೆಂಟ್ ಸಮಿತಿ ಮೂಲಕ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಆಗ್ರಹಿಸುತ್ತಿರುವುದು ಬಿಜೆಪಿಗೆ ಭಯ ಶುರುವಾದಂತೆ ಕಾಣುತ್ತಿದೆ. ಹೀಗಾಗಿಯೇ, ಸಣ್ಣ ಪ್ರಕರಣ ಮುಂದಿಟ್ಟುಕೊಂಡು ರಾಹುಲ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸುವ ಪಿತೂರಿ ಮಾಡಿದ್ದು, ಇದರ ವಿರುದ್ಧ ಮಹಿಳಾ ಕಾಂಗ್ರೆಸ್ ದೇಶವ್ಯಾಪ್ತಿ ಸಹಿ ಸಂಗ್ರಹ ಚಳವಳಿ ನಡೆಸಲಿದೆ ಎಂದು ಅವರು ಹೇಳಿದರು.
ದೇಶದ ಇತಿಹಾಸದಲ್ಲೇ ಅದಾನಿ ಸಮೂಹದ ಹಗರಣ ದೊಡ್ಡದ್ದಾಗಿದ್ದು, ತಮ್ಮ ಭವಿಷ್ಯಕ್ಕಾಗಿ ಜನಸಾಮಾನ್ಯರು ಎಲ್‌ಐಸಿ ಮತ್ತು ಎಸ್‌ಬಿಐ ಬ್ಯಾಂಕ್‌ಗಳಲ್ಲಿ ಕೂಡಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕ್ಳೊಲಾಗಿದೆ. ಈ ಬೃಹತ್ ಭ್ರಷ್ಟಾಚಾರದ ವಿರುದ್ಧ ತನಿಖೆಗೆ ಆಗ್ರಹಿಸುತ್ತಿರುವ ವಿರೋಧ ಪಕ್ಷಗಳನ್ನು ಉದ್ದೇಶ ಪೂರ್ವಕವಾಗಿ ಸದೆಬಡಿಯುವ ಉದ್ದೇಶದಿಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.