
ಚಾಮರಾಜನಗರ (ಡೊ. 29): ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸ್ವತಂತ್ರವಾಗಿ ಅಧಿಕಾರ ಹಿಡಿಯುವಲ್ಲಿ 24 ಪ್ರಕೋಷ್ಠಗಳ ಪಾತ್ರ ಮಹತ್ತರವಾಗಿದ್ದು, ಕಾರ್ಯಕಾರಿಣಿಯಲ್ಲಿ ಚರ್ಚಿಸುವ ಪ್ರತಿಯೊಂದಕ್ಕೂ ಹೆಚ್ಚು ಗಮನಕೊಡಿ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ, ವಿಧಾನಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್ ಹೇಳಿದರು.
ಚಾಮರಾಜನಗರದ ಸತ್ತಿ ರಸ್ತೆಯಲ್ಲಿರುವ ನಿಜಗುಣ ರೆಸಾರ್ಚ್‌ನಲ್ಲಿ ಹಮ್ಮಿಕೊಂಡಿದ್ದ ಭಾರತೀಯ ಜನತಾ ಪಾರ್ಟಿಯ (BJP) ರಾಜ್ಯಮಟ್ಟದ ಪ್ರಕೋಷ್ಠಗಳ ಕಾರ್ಯಕಾರಣಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಪ್ರಕೋಷ್ಠಗಳ ಶಕ್ತಿ ಸಂಗಮವಾಗಿ, ಅಭೂತಪೂರ್ವ ಯಶಸ್ಸು ಸಿಕ್ಕಿದ್ದು, ಈ ಸಭೆ ಆತ್ಮಲೋಕನ ಮಾಡಿಕೊಳ್ಳುವ ಜೊತೆಗೆ ಮುಂದೆ ಅನುಸರಿಸಬೇಕಾದ ಬಗ್ಗೆ ರಾಜ್ಯ ನಾಯಕರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸುವುದರ ಜೊತೆಗೆ 23ರ ವಿಧಾನಸಭಾ ಚುನಾವಣೆಯಲ್ಲಿ (Election) ಕಾಂಗ್ರೆಸ್ ಮುಕ್ತ ಮಾಡಿ ಭಾರತೀಯ ಜನತಾ ಪಕ್ಷ ಸ್ವತಂತ್ರವಾಗಿ ಅಧಿಕಾರ ಹಿಡಿಯುವಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.
ಕತ್ತಿ ಮಸೆಯುತ್ತಿದ್ದಾರೆ ಟಿಕೆಟ್ ವಂಚಿತರು
ಷಡಕ್ಷರಿ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್
ವಿಜಯಪುರ(ಅ.18): ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಮತ್ತೊಮ್ಮೆ ಭಿನ್ನಮತ ಭುಗಿಲೆದ್ದಿದ್ದು, ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಬಂಡಾಯದ ಬಾವುಟ ಬೀಸಿದ್ದಾರೆ. ಟಿಕೆಟ್ ಕೈ ತಪ್ಪಿದ ಕೆಲ ಮುಖಂಡರು ತಮ್ಮ ಬೆಂಬಲಿಗರ ಜೊತೆಗೆ ರಾಜೀನಾಮೆ ನೀಡುತ್ತಿದ್ದು ಜಿಲ್ಲಾ ಕಮಲ ಪಾಳಯಕ್ಕೆ ನುಂಗಲಾರದ ತುತ್ತಾಗಿದೆ.
ತಪ್ಪಿದ ಟಿಕೆಟ್ ಶುರುವಾಯ್ತು ಬಂಡಾಯ..!
ಮಹಾನಗರ ಪಾಲಿಕೆಯ ವಾರ್ಡ್ 22ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿಕಾಂತ ಬಗಲಿ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ತನ್ನ ಬೆಂಬಲಿಗರೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಈಗ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿರುವ ಪ್ರೇಮಾನಂದ ಬಿರಾದಾರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಪಕ್ಷದ ಹಿರಿಯ ಮುಖಂಡರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆ: ಕಮಲ ಪಾಳಯಕ್ಕೆ ಬಿಗ್ ಶಾಕ್..!
ಇತರರು ಬಂಡಾಯ ಏಳುವ ಸಾಧ್ಯತೆ..!
ಇವರ ಜತೆ ಹಲವು ಬಂಡಾಯ ಅಭ್ಯರ್ಥಿಗಳು ಇವರ ದಾರಿ ಹಿಡಿಯುವ ಸಾಧ್ಯತೆ ಇದೆ. ಇದರ ಜತೆ ಇತ್ತ ರವಿ ಬಗಲಿ ನನಗೆ ಟಿಕೆಟ್ ಕೈ ತಪ್ಪಿಸಿದ ಮುಖಂಡರ ಹೆಸರನ್ನು ಬಹಿರಂಗ ಪಡಿಸುವೆ ಎಂದಿದ್ದಾರೆ. ಬಿಜೆಪಿ ಟಿಕೆಟ್ ಪಡೆದ ಕೆಲವರ ವಿರುದ್ಧ ತಮ್ಮ ಅಸಮಧಾನ, ಆಕ್ರೋಶದ ಮಾತುಗಳನ್ನ ಹೊರ ಹಾಕುತ್ತಿದ್ದಾರೆ. ಜೆಡಿಎಸ್ ನಿಂದ ಬಂದಿರುವ ಬಿಜೆಪಿ ಅಭ್ಯರ್ಥಿ ಪ್ರೇಮಾನಂದ ಬಿರಾದಾರ ಅದೇ ನಾಯಕನ ಕೃಪಾ ಕಟಾಕ್ಷದಿಂದ ಟಿಕೆಟ್ ಪಡೆದುಕೊಂಡಿದ್ದಾರೆ. ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ ಅಥವಾ ಇಲ್ಲವೋ ಎನ್ನುವದೇ ಯಾರಿಗೂ ಗೊತ್ತಿಲ್ಲ, ಅಂಥವರಿಗೆ ಮಣೆ ಹಾಕಿ, ನಿಷ್ಟಾವಂತ ಕಾರ್ಯಕರ್ತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಭ್ಯರ್ಥಿಗಳ ವಿರುದ್ಧವೇ ಕತ್ತಿ ಮಸಿಯುತ್ತಿರುವ ಸ್ವಪಕ್ಷೀಯ ಟಿಕೆಟ್ ವಂಚಿತರು..!
ಕೆಲ ಟಿಕೆಟ್ ವಂಚಿತರು ತಮ್ಮ ಮುಖಂಡರ ಮಾತಿಗೆ ಬೆಲೆ ಕೊಟ್ಟು ಸುಮ್ಮನಾಗಿದ್ದರೂ ಸಹ ತೆರೆಮರೆಯಲ್ಲಿ ಅಧಿಕೃತ ಅಭ್ಯರ್ಥಿ ವಿರುದ್ಧ ಕತ್ತಿ ಮಸಿಯುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರ್ತಿವೆ. ಬಿಜೆಪಿಯ ಹಿರಿಯ ಮುಖಂಡರಾದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ, ಸಂಸದ ರಮೇಶ ಜಿಗಜಿಣಗಿ ಹಾಗೂ ಪಕ್ಕದ ಜಿಲ್ಲೆಯ ಮುಖಂಡ ಹಾಗೂ ಸಚಿವ ಗೋವಿಂದ ಕಾರಜೋಳ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಸರ್ವ ಪ್ರಯತ್ನ ನಡೆಸಿದ್ದಾರೆ. ಆದರೆ ಮೇಲ್ನೋಟಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮ ಬೆಂಬಲಿಗರಿಗೆ ಹೆಚ್ಚಿನ ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದಾರೆ ಎನ್ನಲಾಗ್ತಿದೆ. ಈ ಮೂಲಕ ಜಿಲ್ಲಾ ಬಿಜೆಪಿಯಲ್ಲಿ ತಮ್ಮ ಹಿಡಿತ ಇನ್ನಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ.
ಬಿಜೆಪಿಯಲ್ಲಿ ಟಿಕೆಟ್ ಗಾಗಿ ಅಭ್ಯರ್ಥಿಗಳ ಪಟ್ಟಿ ದೊಡ್ಡದಾಗಿಯೇ ಇತ್ತು. ಪ್ರತಿ ಒಬ್ಬ ಹಿರಿಯ ಮುಖಂಡರು ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ರಾಜ್ಯಮಟ್ಟದಲ್ಲಿಯೂ ಲಾಭಿ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಕೋಷ್ಠಗಳು ಗುಪ್ತಗಾಮಿನಿಯಾಗಿದ್ದಂತೆ, ಇವುಗಳ ಶಕ್ತಿಯೇ ಬಿಜೆಪಿ ಶಕ್ತಿ, ಪ್ರಕೋಷ್ಠಗಳು ಎಂದರೇನು ಎಂಬ ಬಗ್ಗೆ ಕಾಂಗ್ರೆಸ್‌ನವರಿಗೆ ಇನ್ನು ಅರಿವು ಬಂದಿಲ್ಲ, ಅವರಿಗೆ ಅರಿವು ಬರುವುದರೊಳಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಬೇಕು ಎಂದರು.
ಬಿಜೆಪಿ ಎಂದರೇ ದೇಶ ಭಕ್ತಿ, ದೇಶಕ್ಕಾಗಿ ಅಪರಿಮಿತ ಸೇವೆ, ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ನಡೆಯುತ್ತಿದ್ದ ಭಯೋತ್ಪಾದನೆ ನಿಲ್ಲುವುದರ ಜೊತೆಗೆ ಸೈನಿಕರಿಗೆ ಆತ್ಮಸ್ಥೆತ್ರೖರ್ಯ ತುಂಬಿ, ಜಗತ್ತು ಭಾರತದತ್ತ ತಿರುಗಿನೋಡುವತ್ತ ಮಾಡಿದ್ದಾರೆ ಎಂದರು.
ಕಳೆದ ಎರಡೂವರೆ ವರ್ಷಗಳಿಂದ ಪ್ರಕೋಷ್ಠಗಳು ಮಂಡಲದಿಂದ ರಾಜ್ಯದವರೆಗೆ ಹೆಚ್ಚು ಕ್ರಿಯಾಶೀಲವಾಗಿವೆ, ಆದ್ದರಿಂದ ಬಿಜೆಪಿ ಹೆಚ್ಚು ಬಲಿಷ್ಠವಾಗಿದ್ದು, ಸ್ವತಂತ್ರವಾಗಿ ಅಧಿಕಾರ ಹಿಡಿಯುವತ್ತ ಸಾಗಿದೆ, ಪ್ರತಿಯೊಬ್ಬ ಮತದಾರರು ಬಿಜೆಪಿಯ ಕಾರ್ಯಕರ್ತರಾಗಬೇಕು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಸಮಾರಂಭದಲ್ಲಿ ರಾಜ್ಯ ಸಹ ಸಂಚಾಲಕರಾದ ಶಿವಾನಂದಸ್ವಾಮಿ, ಜಯತೀರ್ಥಕಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್, ಸುಂದರ್, ಕಾಡಾ ಅಧ್ಯಕ್ಷ ನಿಜಗುಣರಾಜು ಇದ್ದರು.