ಅನರ್ಹ ಶಾಸಕರು ರಾಜೀನಾಮೆ ಕೊಟ್ಟಿದ್ದಕ್ಕೆ ನಮ್ಮ ಸರ್ಕಾರ ಬಂದಿದೆ:ಕಟೀಲ್

By Suvarna NewsFirst Published Dec 8, 2019, 1:12 PM IST
Highlights

ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ| ಅನರ್ಹ ಶಾಸಕರಿಗೆ ಮಂತ್ರಿ ಸ್ಥಾನ ನೀಡುವುದು ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದ ಕಟೀಲ್| ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ನಮ್ಮ ಸರ್ಕಾರ ಬಂದಿಲ್ಲ|

ಹುಬ್ಬಳ್ಳಿ(ಡಿ.08): ಉಪಚುನಾವಣೆಯಲ್ಲಿ 15ಕ್ಕೆ 15 ಸ್ಥಾನಗಳಲ್ಲೂ ಬಿಜೆಪಿ ಗೆಲ್ಲುತ್ತದೆ. ಬಿಜೆಪಿ ಯಾರನ್ನು ಆಪರೇಷನ್ ಕಮಲ ಮಾಡುವುದಿಲ್ಲ. ಕಾಂಗ್ರೆಸ್‌ನಲ್ಲಿ ಶಾಸಕರು ಬೇಸರದಲ್ಲಿದ್ದಾರೆ, ಅಲ್ಲಿಯ ಶಾಸಕರು ಬಂದ್ರೆ ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ವಿಚಾರ ಮಾಡುತ್ತೇವೆ. ನಮ್ಮದು ರಾಜಕೀಯ ಪಕ್ಷ ಯಾರೇ ಬಂದ್ರೂ ಕರೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರನ್ನ ದಿನೇಶ್ ಗುಂಡೂರಾವ್ ಹಿಡಿದಿಟ್ಟುಕೊಳ್ಳಲಿ, ಅನರ್ಹ ಶಾಸಕರಿಗೆ ಮಂತ್ರಿ ಸ್ಥಾನ ನೀಡುವುದು ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಅನರ್ಹ ಶಾಸಕರು ರಾಜೀನಾಮೆ ಕೊಟ್ಟಿದ್ದಕ್ಕೆ ನಮ್ಮ ಸರ್ಕಾರ ಬಂದಿದೆ. ಅನರ್ಹ ಶಾಸಕರು ನಮ್ಮ ಪಕ್ಷಕ್ಕೆ ಬಂದಿದ್ದಕ್ಕೆ ನಮ್ಮ ಸರ್ಕಾರ ಬಂದಿಲ್ಲ. ಅನರ್ಹ ಶಾಸಕರಿಗೆ ಟಿಕೆಟ್ ನೀಡಿದ್ದೇವೆ ಆ ಮೂಲಕ ಒಂದು ಹಂತದ ನ್ಯಾಯ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ. 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯದಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.
 

click me!