ಕೆಟ್ಟ ಪದ ಬಳಕೆ: 'ಕಟೀಲ್'ರಿಂದ ಸಿದ್ದುಗೆ ಮಾನನಷ್ಟ ಮೊಕದ್ದಮೆಯ ಕುಣಿಕೆ!

By Web Desk  |  First Published Nov 28, 2019, 3:07 PM IST

ವಿಧಾನಸಭೆ, ಲೋಕಸಭೆ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಜನತೆ ತಿರಸ್ಕಾರ ಮಾಡಿದ್ದಾರೆ| ಜನತಾ ನ್ಯಾಯಲಯದಲ್ಲಿ ಸಿದ್ದರಾಮಯ್ಯ ಯಾವತ್ತೋ ಅನರ್ಹರಾಗಿದ್ದಾರೆ| ಪದೇ ಪದೇ ಅನರ್ಹ ಅಂದ್ರೇ ‌ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಯಡಿಯೂರಪ್ಪ ಅವರು ಹೇಳಿದ್ದಾರೆ| ಇದಕ್ಕೆ ನಮ್ಮ ಸಹಮತವಿದೆ ಎಂದ ಕಟೀಲ್|


ಬಳ್ಳಾರಿ(ನ.28): ಬಿಜೆಪಿ ಬಗ್ಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಟ್ಟ ಪದ ಬಳಕೆ ಮಾಡಿದ್ದಾರೆ. ಆ ಪದ ಉತ್ತರ ಕರ್ನಾಟಕ ಭಾಗದಲ್ಲಿ ಕೆಟ್ಟ ಪದವಾಗಿದೆ. ಹೀಗಾಗಿ ಕೂಡಲೇ ಸಿದ್ದರಾಮಯ್ಯ ಈ ಪದ ವಾಪಸ್ ಪಡೆಯಬೇಕು ಇಲ್ಲವಾದ್ರೇ ಮಾನನಷ್ಟ ಮೊಕದ್ದಮೆ ದಾಖಲಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಅವರು ಹೇಳಿದ್ದಾರೆ. 

ಗುರುವಾರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ವಿಧಾನಸಭೆ, ಲೋಕಸಭೆಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಜನತೆ ತಿರಸ್ಕಾರ ಮಾಡಿದ್ದಾರೆ. ಜನತಾ ನ್ಯಾಯಲಯದಲ್ಲಿ ಸಿದ್ದರಾಮಯ್ಯ ಯಾವತ್ತೋ ಅನರ್ಹರಾಗಿದ್ದಾರೆ ಎಂದು ಹೇಳಿದ್ದಾರೆ.

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಪದೇ ಪದೇ ಅನರ್ಹ ಅಂದ್ರೇ ‌ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಇದಕ್ಕೆ ನಮ್ಮ ಸಹಮತವಿದೆ ಎಂದು ತಿಳಿಸಿದ್ದಾರೆ. 
ಈಗಾಗಲೇ ಕಾಂಗ್ರೆಸ್ ನ ಹಲವು ನಾಯಕರನ್ನು ತುಳಿದಿರುವ ಸಿದ್ದರಾಮಯ್ಯ,ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ಉಪಚುನಾವಣೆ ಬಳಿಕ ವಿರೋಧಪಕ್ಷದ ನಾಯಕ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. 

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.

click me!